ಖಾಸಗಿ ಶಾಲೆಗಳ ವ್ಯಾಮೋಹ ಬೇಡ : ಪಾಲಿಕೆ ಸದಸ್ಯ

ತುಮಕೂರು:       ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವಂತೆ ಪಾಲಿಕೆ ಸದಸ್ಯ ಎಸ್.ಮಂಜುನಾಥ್ ಪೋಷಕರಿಗೆ ಕರೆ ನೀಡಿದರು.      ನಗರದ 2ನೇ ವಾರ್ಡ್ ವ್ಯಾಪ್ತಿಯ ಸಿರಾಗೇಟ್‍ನ ಉತ್ತರ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.      ಪ್ರಸ್ತುತ ದಿನಗಳಲ್ಲಿ ಪೋಷಕರು ಖಾಸಗಿ ಶಾಲೆಯ ವ್ಯಾಮೋಹಕ್ಕೆ ಒಳಗಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂಬುದನ್ನು ಪ್ರತಿಯೊಬ್ಬರೂ ಮನಗಾಣಬೇಕಿದೆ ಎಂದರು.      ಸರ್ಕಾರಿ ಶಾಲೆಯಲ್ಲಿಯೇ ಓದಿ ಇಂದು ಅನೇಕರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ದೇಶ, ರಾಜ್ಯವನ್ನಾಳುತ್ತಿದ್ದಾರೆ. ಆದರೂ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಿರುವುದು ವಿಪರ್ಯಾಸಕರ ಎಂದರು.    …

ಮುಂದೆ ಓದಿ...

ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಒಕ್ಕಲೆಬ್ಬಿಸದಂತೆ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

ತುಮಕೂರು:       ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸದೆ ಒಕ್ಕಲೆಬ್ಬಿಸಬಾರದು, ಶಾಶ್ವತ ನೆಲೆಯಾಗಿ ವೆಂಡಿಂಗ್ ಜೋನ್‍ಗ¼ನ್ನು ನಿರ್ಮಿಸಬೇಕು ಮತ್ತು ಕೂಡಲೇ ವೆಂಡಿಂಗ್ ಕಮಿಟಿ ಸಭೆ ಕರೆಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಪುಟ್‍ಪಾತ್ ವ್ಯಾಪಾರಿಗಳ ಸಂಘ ಸಿಐಟಿಯು ನೃತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.       ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿ ಜಿಲ್ಲಾಧಿಕಾರಿ ರಾಕೇಶ್‍ಕುಮಾರ್, ಬೀದಿಬದಿ ವ್ಯಾಪಾರಿ ಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಸಂಬಂಧ ಸಭೆ ಕರೆಯಲಾಗುವುದು. ವೆಂಡಿಂಗ್ ಜೋನ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು, ಎಂಜಿ.ರಸ್ತೆಯ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಬದ್ದವಾಗಿದೆ ಎಂದು ಭರವಸೆ ನೀಡಿದರು.       ಇದಕ್ಕೂ ಮೊದಲು ಪ್ರತಿಭಟನಾಕಾರರನ್ನ ಉದ್ದೇಶಿಸಿ ಮಾತನಾಡಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ ಕೇಂದ್ರದ ಕಾಯ್ದೆ ಮತ್ತು ರಾಜ್ಯ ಸರ್ಕಾರದ ನಿಯಮಾವಳಿಗಳಂತೆ ಬೀದಿಬದಿ ವ್ಯಾಪಾರಿಗಳು…

ಮುಂದೆ ಓದಿ...