ಹಿಂದಿ ಸಪ್ತಾಹ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟನೆ

ತುಮಕೂರು:       ಕರ್ನಾಟಕ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಒತ್ತಾಯ ಪೂರ್ವಕವಾಗಿ ಕೇಂದ್ರ ಸರ್ಕಾರ ನಡೆಸಿದ ಹಿಂದಿ ಸಪ್ತಾಹ ಕಾರ್ಯಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.       ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಉಪವಿಭಾಗಾಧಿಕಾರಿ ಅಜಯ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.       ಭಾಷವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ರಾಜ್ಯಗಳ ಒಕ್ಕೂಟ ದೇಶವಾಗಿರುವ ಭಾರತ ಹಲವಾರು ಭಾಷೆ ಮತ್ತು ವಿಭಿನ್ನ ಸಂಸ್ಕøತಿಯನ್ನು ಹೊಂದಿರುವ ವಿವಿಧತೆಯಲ್ಲಿ ಏಕತೆ ಹೊಂದಿರುವ ಪ್ರಜಾಪ್ರಭುತ್ವ ದೇಶವಾಗಿದೆ. ಸ್ವಾತಂತ್ರ್ಯ ನಂತರ ರಚನೆಯಾದ ಪ್ರಜಾಪ್ರಭುತ್ವ ವ್ಯವಸ್ಥೆಯ ಕೇಂದ್ರ ಸರ್ಕಾರ ಮೊದಲಿನಿಂದಲೂ ಹಿಂದಿಯನ್ನು ಇಡೀ ದೇಶದಲ್ಲಿ ಬೆಳೆಸುವ ಉದ್ದೇಶದಿಂದ ದೇಶದ ಎಲ್ಲ ಭಾಷೆ ಗಳ ಜನರ ತೆರಿಗೆ ಹಣದಲ್ಲಿ ಪ್ರತಿ…

ಮುಂದೆ ಓದಿ...

ನ್ಯಾ. ಸದಾಶಿವ ಆಯೋಗದ ವರದಿ ಅನುಷ್ಟಾನಕ್ಕೆ ಆಗ್ರಹ!!

ತುಮಕೂರು:      ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಟಾನಕ್ಕೆ ಆಗ್ರಹಿಸಿ ಮಾದಿಗ ದಂಡೋರ-ಎಂಆರ್‍ಹೆಚ್ಎಸ್ ವತಿಯಿಂದ ನಗರದಲ್ಲಿರುವ ಇಬ್ಬರು ಶಾಸಕರುಗಳ ಮನೆ ಮುಂದೆ ಇಂದು ಧರಣಿ ಸತ್ಯಾಗ್ರಹ ನಡೆಸಲಾಯಿತು. ಮಾದಿಗ ದಂಡೋರ-ಎಂಆರ್‍ಹೆಚ್ಎಸ್‍ನ ರಾಜ್ಯ ವಕ್ತಾರ ರಾಘವೇಂದ್ರಸ್ವಾಮಿ, ಜಿಲ್ಲಾಧ್ಯಕ್ಷ ಜೆ.ಸಿ. ರಾಜಣ್ಣ ನೇತೃತ್ವದಲ್ಲಿ ಸಮಾವೇಶಗೊಂಡ ದಂಡೋರದ ಪದಾಧಿಕಾರಿಗಳು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹಾಗೂ ನಗರದಲ್ಲಿ ವಾಸವಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು. ಒಳ ಮೀಸಲಾತಿ ಜಾರಿ ಸಂಬಂಧ ಸುಪ್ರೀಂ ಕೋರ್ಟ್‍ನ ಪಂಚ ನ್ಯಾಯಮೂರ್ತಿಗಳ ಪೀಠದ ತೀರ್ಪಿನಂತೆ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಶಾಸನ ಸಭೆಯಲ್ಲಿ ಅಂಗೀಕರಿಸಬೇಕು. ಈ ಕುರಿತು ಶಾಸಕರುಗಳು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು. ನಂತರ ಇಬ್ಬರು ಶಾಸಕರಿಗೆ ಪ್ರತ್ಯೇಕವಾಗಿ ಮಾದಿಗ ದಂಡೋರದ ವತಿಯಿಂದ ಮನವಿ…

ಮುಂದೆ ಓದಿ...

ಹುಳಿಯಾರು : ಹೊಸಹಳ್ಳಿ ರಸ್ತೆ ಮಳೆ ಬಂದರೆ ಕೆಸರು ಗದ್ದೆ

 ಹುಳಿಯಾರು:      ಹುಳಿಯಾರು ಹೋಬಳಿಯ ತಿಮ್ಲಾಪುರ ಗ್ರಾಪಂ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದ ರಸ್ತೆಯು ಅನೇಕ ವರ್ಷಗಳಿಂದ ದುರಸ್ತಿಯಾಗದೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಾರ್ವಜನಿಕರ ಸಂಚಾರಕ್ಕೆ ಸಂಚಕಾರ ಉಂಟಾಗಿದ್ದರೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.       ಈ ರಸ್ತೆಯು ಹುಳಿಯಾರು ಮಾರ್ಗವಾಗಿ ಹೋಗುವ ರಾಷ್ಟ್ರೀಯ ಹೆದ್ದಾರಿ 234 ಕ್ಕೆ ಸೇರಿಕೊಳ್ಳುತ್ತದೆ. ಅಲ್ಲದೆ ಈ ಮಾರ್ಗವಾಗಿ ಹೊಸಹಳ್ಳಿ, ಹೊಸಹಳ್ಳಿಪಾಳ್ಯ, ಸೀಗೆಬಾಗಿ ಗ್ರಾಮಗಳ ಗ್ರಾಮಸ್ಥರು ಪಟ್ಟಣಕ್ಕೆ ಓಡಾಡುತ್ತಾರೆ. ಈ ಊರಿಗೆ ಬಸ್ ವ್ಯವಸ್ಥೆಯಿಲ್ಲದಿದ್ದರಿಂದ ಬೈಕ್ ಅಥವಾ ನಡೆದುಕೊಂಡೇ ಓಡಾಡಬೇಕಿದೆ.       ಆದರೆ ಮಳೆಗಾಲದಲ್ಲಿ ಬಿದ್ದ ಮಳೆಯ ನೀರು ಈ ರಸ್ತೆಯ ಮೇಲೆ ನಿಂತು ರಸ್ತೆಯು ಕೆಸರು ಗದ್ದೆಯಂತಾಗುತ್ತದೆ. ವೃದ್ಧರು, ಮಕ್ಕಳು, ವಿದ್ಯಾರ್ಥಿಗಳು ಕೆಸರು ಸಿಡಿಸಿಕೊಂಡು ಓಡಾಡುವ ಅನಿವಾರ್ಯತೆ ನಿರ್ಮಾಣವಾಗಿದೆ. ಬೈಕ್ ಸವಾರರು ಬಿದ್ದು ಪೆಟ್ಟು ಮಾಡಿಕೊಂಡ ನಿದರ್ಶನಗಳೂ ಸಾಕಷ್ಟಿವೆ.      …

ಮುಂದೆ ಓದಿ...

ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ ಅಪ್‍ಲೋಡ್ ಮಾಡಲು ಸೆ.23 ಕಡೆ ದಿನ

ತುಮಕೂರು:        ರೈತರು ತಾವು ಬೆಳೆದ ಬೆಳೆಯ ವಿವರಗಳನ್ನು “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್”ಗೆ ಅಪ್‍ಲೋಡ್ ಮಾಡಲು ಸೆಪ್ಟೆಂಬರ್ 23 ಕಡೆಯ ದಿನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜ ಸುಲೋಚನ ತಿಳಿಸಿದ್ದಾರೆ.       ರೈತರೇ ಸ್ವತಂತ್ರವಾಗಿ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಛಾಯಾಚಿತ್ರ ಮತ್ತು ಬೆಳೆ ವಿವರಗಳನ್ನು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ಗೆ ನಿಗಧಿತ ಅವಧಿಯೊಳಗೆ ಅಪ್‍ಲೋಡ್ ಮಾಡಲು ಅವಕಾವಿದ್ದು, ಜಿಲ್ಲೆಯ ರೈತರು ಸದುಪಯೋಗಪಡಿಸಿಕೊಳ್ಳಬೇಕು. ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ಗೆ ತಮ್ಮ ಬೆಳೆಗಳ ವಿವರಗಳನ್ನು ಅಪ್‍ಲೋಡ್ ಮಾಡಿದಲ್ಲಿ ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಹಾಗೂ ನಫೆಡ್ ಮೂಲಕ ಕೊಬ್ಬರಿ ಖರೀದಿ ನೋಂದಣಿಗೆ ಬೆಳೆ ಸಮೀಕ್ಷೆ ಆಧಾರದ ಮೇಲೆ ಅವಕಾಶ ದೊರೆಯಲಿದೆ.       ಅಲ್ಲದೆ ಸೆಪ್ಟೆಂಬರ್ 12 ರಿಂದ ಖಾಸಗಿ ನಿವಾಸಿಗಳನ್ನು ಬಳಸಿಕೊಂಡು…

ಮುಂದೆ ಓದಿ...