ನಮ್ಮಲ್ಲಿಯೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರದ ಬಗ್ಗೆ ಸಂಶೋಧನೆ ನಡೆಯಬೇಕು

ತುಮಕೂರು:      ಇಡೀ ಪ್ರಪಂಚದಲ್ಲಿ ಶೈಕ್ಷಣಿಕ ಸಂಶೋಧನೆಗಳಿಗೆ ಮನ್ನಣೆ ದೊರೆಯುತ್ತಿರುವ ಸಂದರ್ಭದಲ್ಲಿ ನಮ್ಮಲ್ಲಿಯೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರದ ಬಗ್ಗೆ ಸಂಶೋಧನೆ ನಡೆಯಬೇಕು. ಸಂಶೋಧನೆಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿ, ಸಂಶೋಧನಾ ಲೇಖನಗಳನ್ನು ದಾಖಲಿಸುವ ಕೆಲಸಕ್ಕೆ ಉನ್ನತ ಶಿಕ್ಷಣ ಸಂಸ್ಥೆಗಳು ಮುಂದಾಗುವ ಅನಿವಾರ್ಯತೆ ಇಂದಿನದಾಗಿದೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಸಾಹೇ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟಿದ್ದಾರೆ.      ನಗರದ ಸಿದ್ದಾರ್ಥನಗರದಲ್ಲಿ ಶ್ರೀ ಸಿದ್ದಾರ್ಥ ಅಕಾಡೆಮಿಕ್ ಆಫ್ ಹೈಯರ್ ಎಜುಕೇಷನ್ (ಸಾಹೇ ವಿಶ್ವವಿದ್ಯಾಲಯ) ಏರ್ಪಡಿಸಿದ್ದ ಸಂಯೋಜಿತ ವಿಷಯಗಳ ಸಂಶೋಧನಾತ್ಮಕ ಪ್ರಕಟಣೆಗಳಾದ ‘ಸಾಹೇ ಜರ್ನಲ್ಸ್ ಆಪ್ ಇಂಟರ್ ಡಿಸಿಪ್ಲಿನರಿ ರೀಸರ್ಚ್ ಮತ್ತು ಜರ್ನಲ್ಸ್ ಆಪ್ ಆ್ಯಕ್ಸನ್ ರೀಸರ್ಚ್ ಆ್ಯಂಡ್ ಸೋಷಿಯಲ್ ಡೆವೆಲಪ್‍ಮೆಂಟ್’ ಬಿಡುಗಡೆ ಮಾಡಿ ಮಾತನಾಡಿದರು.       ಇಡೀ ಪ್ರಂಚದಲ್ಲಿ ಅಂತರ ಶಿಕ್ಷಣ ಮತ್ತು ಸಂಶೋಧನೆಗಳು ನಡೆಯುತ್ತಿವೆ. ಸಮಾಜದಲ್ಲಿ ಸವiತೋಲದ ಶೈಕ್ಷಣಿಕ ಚಟುವಟಿಕೆಗಳು…

ಮುಂದೆ ಓದಿ...

ಅಕ್ಟೋಬರ್ 4ರಂದು ಶಿಕ್ಷಕರ ಅರ್ಹತಾ ಪರೀಕ್ಷೆ(KARTET)

ತುಮಕೂರು:      ಜಿಲ್ಲೆಯಲ್ಲಿ ಅಕ್ಟೋಬರ್ 4ರಂದು ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆಯು(ಕೆ.ಎ.ಆರ್.ಟೆ.ಇ.ಟಿ) ಸುರಕ್ಷಿತ ಹಾಗೂ ಯಶಸ್ವಿಯಾಗಿ ಜರುಗಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಕ್ಟೋಬರ್ 4ರಂದು ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳು ಕಂಡು ಬರದಂತೆ ನಿಗಾವಹಿಸಬೇಕು. ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗೃತ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನು (ಆರೋಗ್ಯ ತಪಾಸಣಾ ಕೌಂಟರ್)ನಲ್ಲಿ ಅರೆ ವೈದ್ಯಕೀಯ ಸಿಬ್ಬಂದಿಯಿಂದ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಬೇಕು ಎಂದರು.       ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಪರೀಕ್ಷಾ ಕೇಂದ್ರದ ಕೊಠಡಿಗಳನ್ನು ಸ್ವಚ್ಚಗೊಳಿಸಿ ಸ್ಯಾನಿಟೈಸ್ ಸಿಂಪಡಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ…

ಮುಂದೆ ಓದಿ...

ಧರ್ಮದ ಮೂಲಕ ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಕಾರ್ಯವಾಗಬೇಕಿದೆ

ತುಮಕೂರು:       ಧರ್ಮದ ಮೂಲಕ ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಕಾರ್ಯ ಮಾಡಬೇಕಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅರುಣಾದೇವಿ ಉದಯಕುಮಾರ್ ಹೇಳಿದರು.       ನಗರದ ಸಿದ್ದಗಂಗಾ ಮಠಕ್ಕೆ ಪತಿ ಉದಯಕುಮಾರ್, ಪುತ್ರಿ ಮಾಧುರ್ಯರವರೊಂದಿಗೆ ಭೇಟಿ ನೀಡಿದ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ನಾವೆಲ್ಲರೂ ಕುಟುಂಬ ವ್ಯವಸ್ಥೆ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಎಂದರು.       ನಾಲ್ಕು ಗೋಡೆಗಳ ಮಧ್ಯೆ ಇರುವ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವ ಕೆಲಸ ಮಾಡುವ ಚಿಂತನೆ ಹೊಂದಲಾಗಿದೆ ಎಂದು ಅವರು ಹೇಳಿದರು.       ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಮಕ್ಕಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ನೆರವು ನೀಡಲಾಗುವುದು.…

ಮುಂದೆ ಓದಿ...