ಬಿಜೆಪಿ ತೆಕ್ಕೆಗೆ ತುರುವೇಕೆರೆ ಪಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಸಾಧ್ಯತೆ

 ತುರುವೇಕೆರೆ:      ಪಟ್ಟಣ ಪಂಚಾಯ್ತಿ ಮೀಸಲಾತಿ ಪ್ರಕಟಗೊಂಡ ಬೆನ್ನಲೇ ಪಟ್ಟಣ ಪಂಚಾಯಿತಿ ಸದಸ್ಯರಲ್ಲಿ ರಾಜಕೀಯ ಲೆಕ್ಕಾಚಾರ ಚುರುಕುಗೊಂಡಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ಮುಡಿಗೇರಿಸಿಕೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.       ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡು ಮೀಸಲಾತಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಒಟ್ಟು 14 ಪಟ್ಟಣ ಪಂಚಾಯಿತಿ ಸದಸ್ಯರನ್ನು ಒಳಗೊಂಡಿರುವ ತುರುವೇಕೆರೆ ಪಟ್ಟಣ ಪಂಚಾಯ್ತಿ ಸ್ಥಾನಗಳಲ್ಲಿ, ಪಟ್ಟಣ ಪಂಚಾಯ್ತಿಯ ಅಧಿಕಾರದ ಆಡಳಿತ ಹಿಡಿಯಲು 8 ಸದಸ್ಯರ ಬಹುಮತ ಅಗತ್ಯವಿದೆ. ಇದರಲ್ಲಿ ಬಿಜೆಪಿ 6ರಲ್ಲಿ ಜಯಭೇರಿ ಭಾರಿಸಿ ದೊಡ್ಡ ಪಕ್ಷವಾಗಿ ಹೊರಹುಮ್ಮಿದ್ದು, ಜೆಡಿಎಸ್ 5ರಲ್ಲಿ, ಕಾಂಗ್ರೇಸ್ ಕೇವಲ 2ರಲ್ಲಿ, ಪಕ್ಷೇತರ ಒಬ್ಬರು ಸದಸ್ಯರಿದ್ದಾರೆ.       12 ನೇ ವಾರ್ಡ್‍ನಲ್ಲಿ ಜಯದ ನಗೆ ಬೀರಿರುವ ಪಕ್ಷೇತರ ಸದಸ್ಯರಾದ ಟಿ.ಕೆ. ಪ್ರಭಾಕರ್ ಈಗಾಗಲೇ ಶಾಸಕ ಮಸಾಲ ಜಯರಾಮ್‍ರವರ…

ಮುಂದೆ ಓದಿ...

ಹುಳಿಯಾರು : ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹ

ಹುಳಿಯಾರು:      ಹುಳಿಯಾರು ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದ್ದು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಇವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.       ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ಬಿಡಾಡಿ ನಾಯಿಗಳು ಉಪಟಳದಿಂದ ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿವೆ.       ಐಬಿ ರಸ್ತೆ, ಮಸೀದಿ ರಸ್ತೆಗಳಲ್ಲಿ ಮಾಂಸ ದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ. ಅಂಗಡಿದಾರರು ಸಾರ್ವಜನಿಕ ಸ್ಥಳ, ಕಸದ ತೊಟ್ಟಿಯಲ್ಲಿ ಮಾಂಸದ…

ಮುಂದೆ ಓದಿ...

ಹುಳಿಯಾರು: ಡಿಸಿಯಿಂದ ರೈತರಿಗೆ ಸಕರಾತ್ಮಕ ಸ್ಪಂದನೆ

ಹುಳಿಯಾರು:       ಪರಿಹಾರ ಮೊತ್ತ ಘೋಷಿಸದೆ ಸರ್ವೆಗೆ ಮುಂದಾಗಿರುವ ಕ್ರಮ ವಿರೋಧಿಸಿ ಹುಳಿಯಾರು ಹೋಬಳಿ ಹೊಯ್ಸಲಕಟ್ಟೆ ಹಾಗೂ ದಸೂಡಿ ಗ್ರಾಮ ಪಂಚಾಯ್ತಿಯ ರೈತರ ನಿಯೋಗ ಜಿಲ್ಲಾಧಿಕಾರಿಗಳನ್ನು ಸೋಮವಾರ ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಿತು.       ಚಿಕ್ಕನಾಯಕನಹಳ್ಳಿ ತಾಲೂಕಿನ ಮಾರ್ಗವಾಗಿ ಹಾಸನದಿಂದ ಚರ್ಲಪಲ್ಲಿಗೆ ಪೈಪ್ ಲೈನ್ ಮೂಲಕ ಅನಿಲ ಸಾಗಿಸುವ ಯೋಜನೆಗೆ ಭೂ ಸ್ವಾಧೀನ ಪಡಿಸಿಕೊಳ್ಳಲು ಸರ್ವೆ ಮಾಡುತ್ತಿದ್ದಾರೆ. ಆದರೆ ಸರ್ವೆವೆ ಮೊದಲೇ ಈ ಯೋಜನೆಗೆ ಆಕ್ಷೇಪಣೆ ಸಲ್ಲಿಸಿ ಬಂದಿದ್ದರೂ ಸಹ ನಮ್ಮ ಅರ್ಜಿ ಇತ್ಯಾರ್ಥ ಮಾಡದೆ ಸರ್ವೆಗೆ ಮುಂದಾಗಿದ್ದಾರೆ ಎಂದು ರೈತರು ಈ ಸಂದರ್ಭದಲ್ಲಿ ದೂರಿದ್ದಾರೆ.      ಗ್ಯಾಸ್ ಪೈಲ್‍ಲೈನ್ ಹೋಗುವ ಮಾರ್ಗದಲ್ಲಿ ಅತೀ ಸಣ್ಣ ರೈತರಿದ್ದು ಈ ಭೂಮಿಯನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಯೋಜನೆಗೆ ಭೂಸ್ವಾದೀನ ಮಾಡಿಕೊಂಡರೆ ಅನೇಕ ರೈತರ ಜೀವನ ನಿರ್ವಹಣೆ ಕಷ್ಟವಾಗುತ್ತದೆ. ಹಾಗಾಗಿ ನಮ್ಮ ಭಾಗ…

ಮುಂದೆ ಓದಿ...

ಉಪಚುನಾವಣೆಯ ನೀತಿ ಸಂಹಿತೆ : ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ತುಮಕೂರು:      ಕೊರೊನಾ ಹಾಗೂ ಜಿಲ್ಲೆಯಲ್ಲಿ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಆಗಸ್ಟ್ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ಮಾದರಿಯಲ್ಲಿಯೇ ಸಾಮಾಜಿಕ ಅಂತರ ಹಾಗೂ ಕಡ್ಡಾಯ ಮಾಸ್ಕ್, ಜನಸಂದಣಿಯಿಲ್ಲದಂತೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.       ಕನ್ನಡ ರಾಜ್ಯೋತ್ಸವ ಸಮಾರಂಭವು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಿಂದ ತಾಯಿ ಭುವನೇಶ್ವರಿಯ ಮೆರವಣಿಗೆ ಆರಂಭವಾಗಿ ಜೂನಿಯರ್ ಕಾಲೇಜು ಮೈದಾನದವರೆಗೆ ನಡೆಯಲಿದೆ. ಇದರೊಂದಿಗೆ ಒಂದು ಕಲಾತಂಡ…

ಮುಂದೆ ಓದಿ...