ಕೋವಿಡ್ – 19 ಎಚ್ಚರಿಕೆ ನೀಡಲು ಸಾರ್ವಜನಿಕರಿಗೆ ಪೊಲೀಸರಿಂದ ಜನಾಂದೋಲನ

 ಮಧುಗಿರಿ:       ಮಧುಗಿರಿ ಪೊಲೀಸ್ ಇಲಾಖಾ ವತಿಯಿಂದ ಕೋವಿಡ್-19 ರ ಬಗ್ಗೆ ಎಚ್ಚರವಿರಲಿ ಎಂಬ ಸಂದೇಶವನ್ನು ಸಾರ್ವಜನಿಕರಿಗೆ ನೀಡಲು ‘ಜನಾಂದೋಲನ ಕಾರ್ಯಕ್ರಮವನ್ನು’ ಪಟ್ಟಣದಲ್ಲಿ ಬುಧವಾರದಂದು ಜಾಥಾ ನಡೆಸುವ ಮೂಲಕ ಹಮ್ಮಿಕೊಳ್ಳಲಾಯಿತು.       ಡಿವೈಎಸ್ಪಿ ಎಂ.ಪ್ರವೀಣ್ ಮಾತನಾಡಿ, ಕೇಂದ್ರ ಸರಕಾರದ ಎಸ್ ಎಂಎಸ್ ಆದೇಶದಂತೆ “ಸೋಷಿಯಲ್ ದಿಸ್ಟೆನ್ಸ್, ಮಾಸ್ಕ್, ಸ್ಯಾನಿಟ್ಯೆಸರ್’ ಖಡ್ಡಾಯವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಪೊಲಿಸ್ ಇಲಾಖೆವತಿಯಿಂದ ಜಾಥ ನಡೆಸಿ, ಹಸ್ತಲಾಘವ ಮಾಡುವ ಬದಲು ನಮಸ್ಕರಿಸಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈಗಳನ್ನು ಸ್ಯಾನಿಟೈಸರ್ ನಿಂದ ಸ್ವಚ್ಛ ಮಾಡಿಕೊಳ್ಳಿ ನೊವೆಲ್ ಕೊರೊನಾ ವೈರಸ್ ನಮ್ಮ ಬಳಿ ಸುಳಿಯದಂತೆ ಎಚ್ಚರ ವಹಿಸಿ ಎಂದರು.       ಜಾಥಾ ವೇಳೆ ಮಳೆಯ ಸಿಂಚನದ ನಡುವೆಯೂ ಪೊಲೀಸರು ಪಟ್ಟಣದಲ್ಲಿ ಪ್ರಮುಖ ಬೀದಿಯಲ್ಲಿ ಜಾಥಾ ನಡೆಸಿದ್ದು ವಿಶೇಷವಾಗಿತ್ತು . ಈ ಜಾಥಾವು ಮಧುಗಿರಿ…

ಮುಂದೆ ಓದಿ...

ಲೂಟಿಕೋರ ಸರ್ಕಾರವನ್ನು ಕಿತ್ತೊಗೆಯಬೇಕು : ಸಿದ್ದರಾಮಯ್ಯ

ತುಮಕೂರು:        ರಾಜ್ಯದಲ್ಲಿ ಜನ ವಿರೋಧಿ, ನಿಷ್ಕ್ರೀಯ ಹಾಗೂ ಲೂಟಿ ಹೊಡೆಯುವ ಸರ್ಕಾರ ಇದೆ. ಈ ಉಪಚುನಾವಣೆ ಭ್ರಷ್ಟ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಬೇಕು. ಈ ನಿಟ್ಟಿನಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.       ಸಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರು ರಾಜ್ಯದ ನಿಷ್ಕ್ರೀಯ ಸರ್ಕಾರದ ವಿರುದ್ಧ ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಅವರು ಕರೆ ನೀಡಿದರು.       ಸಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಮುಂದಿನ ದಿನಗಳಲ್ಲಿ ಈ ಲೂಟಿಕೋರ ಸರ್ಕಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಈ ಉಪಚುನಾವಣೆಯಲ್ಲಿ ಮತದಾರರು ಎಚ್ಚರಿಕೆ ವಹಿಸಬೇಕು ಎಂದರು.       ಇದು ಸಾರ್ವತ್ರಿಕ ಚುನಾವಣೆಯಲ್ಲ,…

ಮುಂದೆ ಓದಿ...

ಚುನಾವಣಾ ನಿಯಮಾವಳಿಯನ್ವಯ ಕರ್ತವ್ಯ ನಿರ್ವಹಿಸಿ : ಡಿಸಿ

ತುಮಕೂರು:       ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕೋವಿಡ್-19ರ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಕರ್ನಾಟಕ ರಾಜ್ಯ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ಜರುಗಿಸುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಇಂದಿಲ್ಲಿ ತಿಳಿಸಿದರು.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ಲೈಯಿಂಗ್ ಸ್ಕ್ವಾಡ್ ಹಾಗೂ ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.       ಪ್ಲೈಯಿಂಗ್ ಸ್ಕ್ವಾಡ್‍ನ ಅಧಿಕಾರಿಗಳು ಚುರುಕಿನಿಂದ ಕಾರ್ಯನಿರ್ವಹಿಸಬೇಕು. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹೆಚ್ಚಿನ ಬಹಿರಂಗ ಪ್ರಚಾರ ನಡೆಯುವುದಿಲ್ಲ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಂತಹ ಪ್ರಕರಣಗಳ ಬಗ್ಗೆ ದೂರು ಬಂದ ತಕ್ಷಣವೇ ಜಾಗೃತರಾಗಬೇಕು. ಈ ಬಗ್ಗೆ ಪರಿಶೀಲಿಸಬೇಕು. ಸದಾ ಪೊಲೀಸ್‍ರೊಂದಿಗೆ…

ಮುಂದೆ ಓದಿ...