ಕೋವಿಡ್-19 ನಿಯಮಾವಳಿ ಪಾಲನೆಗೆ ಅಂಜಿದ ಚಿತ್ರಮಂದಿರದ ಮಾಲೀಕರು

ಹುಳಿಯಾರು :       ಕೇಂದ್ರ ಸರ್ಕಾರದ ಅನ್‍ಲಾಕ್ ಐದರ ಅನ್ವಯ ಅ.15 ರಿಂದ ಚಿತ್ರ ಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಿದ್ದರೂ ಸಹ ಕೋವಿಡ್-19 ನಿಯಮಾವಳಿ ಪಾಲನೆಗೆ ಚಿತ್ರಮಂದಿರದ ಮಾಲೀಕರು ಅಂಜಿದ ಪರಿಣಾಮ ಹುಳಿಯಾರಿನಲ್ಲಿ ಚಿತ್ರಮಂದಿರ ಬಾಗಿಲು ತೆರೆಯದೆ ಚಿತ್ರ ರಸಿಕರಿಗೆ ನಿರಾಸೆಯಾಗಿದೆ.       ಸರ್ಕಾರ ಚಿತ್ರಮಂದಿರ ತೆರೆಯಲು ಅನುಮತಿ ನೀಡಿದ್ದರೂ ಸಹ ಚಿತ್ರ ಮಂದಿರದ ಪ್ರತಿಯೊಬ್ಬ ಸಿಬ್ಬಂದಿ ಪಿಪಿಇ ಕಿಟ್ ಧರಿಸಬೇಕು, ಪ್ರೇಕ್ಷಕರ ಮೊಬೈಲ್ ಸಂಖ್ಯೆ ನೋಂದಾಯಿಸಿಕೊಳ್ಳಬೇಕು. ಪ್ರತಿ ಪ್ರೇಕ್ಷಕರಿಗೂ ಸ್ಯಾನಿಟೈಸ್ ಮಾಡಬೇಕು, ಮಾಸ್ಕ್ ಕಡ್ಡಾಯ ಮಾಡಬೇಕು, ಸೀಟುಗಳ ನಡುವೆ ಅಂತರ ಇರಬೇಕು, ಶೇ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂಬಿತ್ಯಾದಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಲು ನಿರ್ದೇಶಿಸಲಾಗಿದೆ. ಇದು ಚಿತ್ರಮಂದಿರದ ಮಾಲೀಕರ ತಲೆಬಿಸಿಗೆ ಕಾರಣವಾಗಿದೆ ಕೋವಿಡ್ ನಿಯಮ ಪಾಲನೆ ಮಾಡಿ ಪ್ರದರ್ಶನ ವ್ಯವಸ್ಥೆ ಮಾಡಿದ್ದರೂ ಸಹ ಪ್ರೇಕ್ಷಕರು…

ಮುಂದೆ ಓದಿ...

ಮಧುಗಿರಿ : ಅ.22 ರಂದು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ!

ಮಧುಗಿರಿ :        ಪಟ್ಟಣದ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅ. 22 ರಂದು ಪುರಸಭೆ ಕಾರ್ಯಾಲಯದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಡಾ. ಜಿ. ವಿಶ್ವನಾಥ್ ತಿಳಿಸಿದ್ದಾರೆ.       ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಮಾಹಿತಿ ನೀಡಿದ ಅವರು, ಪುರಸಭೆಯ ಯಾವುದೇ ಚುನಾಯಿತ ಸದಸ್ಯರು ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನಾಗಿ ಚುನಾಯಿಸುವ ಬಗ್ಗೆ ಚುನಾವಣಾಧಿಕಾರಿಗಳಾದ ಮಧುಗಿರಿ ತಹಶೀಲ್ದಾರ್ ರವರಿಗೆ ತಿಳಿಸಿ ಬೆಳಗ್ಗೆ 10 ರಿಂದ 11 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಸ್ಪರ್ಧಿಸುವವರು ತಮ್ಮ ಲಿಖಿತ ಒಪ್ಪಿಗೆಯನ್ನು ನಮೂನೆಯಲ್ಲಿ ಸಲ್ಲಿಸಬೇಕು. ಚುನಾಯಿತ ಸದಸ್ಯರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾಯಿತರಾಗಲು ತಮ್ಮ ಹೆಸರನ್ನು ತಾವೇ ಸೂಚಿಸಿಕೊಳ್ಳಬಾರದು.       ನಾಮ ನಿರ್ದೇಶನ ಪತ್ರವನ್ನು ಬೇರೆಯವರು ಸಲ್ಲಿಸುವಂತಿಲ್ಲ. ಸೂಚಕರಾಗಲಿ ಅಥವಾ ಅಭ್ಯರ್ಥಿ ಯಾಗಲಿ ಖುದ್ದಾಗಿ ಚುನಾವಣಾಧಿಕಾರಿಗಳಿಗೆ…

ಮುಂದೆ ಓದಿ...

ಆರ್.ಆರ್. ನಗರದ ಮತದಾರರು ಎಂದಿಗೂ ನನ್ನ ಕೈ ಬಿಡಲಾರರು : ಮುನಿರತ್ನ

ತುಮಕೂರು:       ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ಉಪಚುನಾವಣೆಯಲ್ಲಿ ನನ್ನ ಕೈ ಹಿಡಿಯಲಿದೆ ಎಂದು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿಶ್ವಾಸ ವ್ಯಕ್ತಪಡಿಸಿದರು.       ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾರರು ಎಂದಿಗೂ ನನ್ನ ಕೈ ಬಿಡಲಾರರು. ನಾನು ಇದುವರೆಗೂ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಏನೆಂಬುದು ಅವರಿಗೆ ಗೊತ್ತಿದೆ ಹಾಗಾಗಿ ಅವರು ನನ್ನ ಕೈ ಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದರು. ನನ್ನ ಮೇಲೆ ವಿಶ್ವಾಸವಿಟ್ಟು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ದೆಹಲಿಯ ವರಿಷ್ಠರು ಟಿಕೆಟ್ ನೀಡಿದ್ದಾರೆ. ನಾನು…

ಮುಂದೆ ಓದಿ...

ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಸವಾಲನ್ನು ಸ್ವೀಕರಿಸಲು ಬಿಜೆಪಿ ಸಿದ್ಧ-ವಿಜಯೇಂದ್ರ

ತುಮಕೂರು:       ಕೋಟೆನಾಡು ಸಿರಾದಲ್ಲಿ 70 ವರ್ಷದ ಬಳಿಕ ಕಮಲದ ಹೂವು ಅರಳಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.         ಸಿರಾ ಕ್ಷೇತ್ರದಲ್ಲಿ ಮತದಾರರು ಅಭಿವೃದ್ಧಿಗೋಸ್ಕರ ಬದಲಾವಣೆ ಬಯಸಿದ್ದಾರೆ. ಹಾಗಾಗಿ ಈ ಬಾರಿ ಕ್ಷೇತ್ರದ ಜನತೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂದರು.       ಸಿರಾದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್‍ಗೌಡ ಅವರ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸವಾಲವನ್ನು ಸ್ವೀಕರಿಸಲು ಬಿಜೆಪಿ ಸಿದ್ದವಾಗಿದೆ ಎಂದರು. ನಾವು ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಯನ್ನು ಗೆಲ್ಲುತ್ತೇವೆ, ಯಾವುದೇ ಜಾತಿ ಆಧಾರದ ಮೇಲೆ ಚುನಾವಣೆ ಎದುರಿಸಲ್ಲ ಎಂದು ಅವರು ಸ್ಪಷ್ಟಪಡಿಸಿದರು.       ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿ…

ಮುಂದೆ ಓದಿ...