ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ಕಾಲಮಿತಿಯೊಳಗೆ ಮುಗಿಸಿ

ತುಮಕೂರು :       ಸ್ಮಾರ್ಟ್‍ಸಿಟಿ ಯೋಜನೆಯಡಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ಕಾಲಮಿತಿಯೊಳಗೆ ಮುಗಿಯಬೇಕು. ಯಾವುದೇ ಕಾರಣಕ್ಕೂ ಕಾಮಗಾರಿಗಳಲ್ಲಿ ವಿಳಂಬವಾಗಬಾರದು ಎಂದು ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜು ಅಧಿಕಾರಿಗಳಿಗೆ ಸೂಚಿಸಿದರು.       ಸ್ಮಾರ್ಟ್‍ಸಿಟಿ ತುಮಕೂರು ಮಹಾನಗರಪಾಲಿಕೆ ಹಾಗೂ ಟೂಡಾ ವತಿಯಿಂದ ನಗರದಾದ್ಯಂತ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.       ರಿಂಗ್ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆ, ರಾಧಾಕೃಷ್ಣ ರಸ್ತೆ, ಅಪೆಕ್ಸ್ ಬ್ಯಾಂಕ್ ಸಮೀಪ ನಿರ್ಮಾಣ ಮಾಡುತ್ತಿರುವ ರಸ್ತೆ ಕಾಮಗಾರಿಗಳು, ಮಹಾತ್ಮಗಾಂಧಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ, ಮಾರಿಯಮ್ಮ ಕೊಳಚೆ ಪ್ರದೇಶ ನಿವಾಸಿಗಳ ನಿವೇಶನ ಸಮುಚ್ಚಯ ಸೇರಿದಂತೆ ನಗರದ ವಿವಿಧೆಡೆ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದ ಅವರು, ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದೇ ನಿರ್ಲಕ್ಷ್ಯ ತೋರುವ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ…

ಮುಂದೆ ಓದಿ...

ಕೈಗಾರಿಕಾ ನಿವೇಶನಗಳ ಅಂತಿಮ ದರ ಕಡಿಮೆ ಮಾಡುವಂತೆ ಸಂಸದರಿಗೆ ಮನವಿ

ತುಮಕೂರು:       ನಗರದ ಹೊರ ವಲಯದಲ್ಲಿರುವ ವಸಂತನರಸಾಪುರ 1ನೇ ಹಂತದ ಕೈಗಾರಿಕಾ ನಿವೇಶನಗಳ ಅಂತಿಮ ದರವನ್ನು ಅವೈಜ್ಞಾನಿಕವಾಗಿ ನಿಗದಿಪಡಿಸಿರುವುದನ್ನು ಕಡಿಮೆ ಮಾಡುವಂತೆ ಹಾಗೂ ಹೆಚ್ಚುವರಿ ಜಾಗಕ್ಕೆ ಮಾರ್ಗಸೂಚಿ ಬೆಲೆ ಜತೆಗೆ ಶೇ. 10 ರಷ್ಟು ದಂಡ ವಿಧಿಸುವ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ವಸಂತನರಸಾಪುರ ಇಂಡಸ್ಟ್ರೀಯಲ್ ಅಸೋ ಸಿಯೇಷನ್ ಪದಾಧಿ ಕಾರಿಗಳು ಸಂಸದ ಜಿ.ಎಸ್. ಬಸವರಾಜು ಅವರಿಗೆ ಮನವಿ ಸಲ್ಲಿಸಿದ್ದಾರೆ.       ನಗರದ ಸಂಸದರ ಕಚೇರಿಯಲ್ಲಿ ಸಂಸದ ಜಿ.ಎಸ್. ಬಸವರಾಜು ಅವರನ್ನು ಅಸೋಸಿಯೇಷನ್ ಅಧ್ಯಕ್ಷ ಕೆ.ಎನ್. ಶಿವಶಂಕರ್ ನೇತೃತ್ವದಲ್ಲಿ ಭೇಟಿ ಮಾಡಿದ ಪದಾಧಿಕಾರಿಗಳು ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ತಲೆದೋರಿರುವ ಸಮಸ್ಯೆಗಳ ಕುರಿತು ಎಳೆಎಳೆಯಾಗಿ ಬಿಡಿಸಿಟ್ಟರು.       ಈ ಸಂದರ್ಭದಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಕೆ.ಎನ್. ಶಿವಶಂಕರ್, ಕರ್ನಾಟಕದಲ್ಲಿ ವಸಂತನರಸಾಪುರ ಕೈಗಾರಿಕಾ ಪ್ರದೇಶ ಅತ್ಯಂತ ಶೀಘ್ರವಾಗಿ ಬೆಳೆಯುತ್ತಿರುವ ಪ್ರದೇಶವಾಗಿದೆ. 2009…

ಮುಂದೆ ಓದಿ...