ತುಮಕೂರು  : ಉಪನ್ಯಾಸಕರ ಇಂಡಕ್ಷನ್ ತರಬೇತಿ ಸಮಾರೋಪ

ತುಮಕೂರು  :       ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ಕೋಡಿ ಮುದ್ದನಹಳ್ಳಿ ಮುರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಜನವರಿ 4ರಿಂದ ಹಮ್ಮಿಕೊಂಡಿದ್ದ ಏಳು ದಿನಗಳ ಇಂಡಕ್ಷನ್ ತರಬೇತಿ ಸಮಾರೋಪ ಸಮಾರಂಭವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.       ಹೊಸದಾಗಿ ನೇಮಕಗೊಂಡಿರುವ ಉಪನ್ಯಾಸಕರುಗಳಿಗಾಗಿ ಡಿಎಸ್‍ಇಆರ್‍ಟಿ ಮೂಲಕ ಇಲಾಖಾ ಸಂರಚನೆ, ಶೈಕ್ಷಣಿಕ ಕಾರ್ಯಕ್ರಮಗಳು ಹಾಗೂ ವೃತ್ತಿಪರ ಕೌಶಲ್ಯಗಳ ಅಭಿವೃದ್ಧಿಗಾಗಿ ಈ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿಯಲ್ಲಿ ಜಿಲ್ಲಾ ವ್ಯಾಪ್ತಿಯ 47 ಉಪನ್ಯಾಸಕರು ಪ್ರಯೋಜನ ಪಡೆದರು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳು 35 ಅಧಿವೇಶನಗಳ ಮೂಲಕ ಉಪನ್ಯಾಸಕ ವೃತ್ತಿ ಬುನಾದಿ, ಕಲಿಕಾ ವಿಧಾನ, ನಡವಳಿಕೆ, ರಾಷ್ಟ್ರೀಯ ಶಿಕ್ಷಣ ನೀತಿ, ಉಪನ್ಯಾಸಕನ ಪಾತ್ರ ಕುರಿತು ತರಬೇತಿ ನೀಡಿದರು.       ಸಮಾರಂಭದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಮಂಜುನಾಥ ಕೆ, ಹಿರಿಯ ಉಪನ್ಯಾಸಕ…

ಮುಂದೆ ಓದಿ...

ಹುಳಿಯಾರು : ನೂತನ ಗ್ರಾಪಂ ಸದಸ್ಯರಿಂದ ಥರ್ಮಲ್ ಸ್ಕ್ಯಾನರ್ ಕೊಡುಗೆ

ಹುಳಿಯಾರು:       ಹುಳಿಯಾರು ಹೋಬಳಿಯ ದಸೂಡಿ ಗ್ರಾಮ ಪಂಚಾಯ್ತಿಯ ನೂತನ ಗ್ರಾಮ ಪಂಚಾಯ್ತಿ ಸದಸ್ಯರುಗಳಾದ ಕೆ.ಮರಿಯಪ್ಪ, ಡಿ.ಆರ್.ಚಿದಾನಂದ್ ಅವರು ದಸೂಡಿಯ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗಳಿಗೆ ಥರ್ಮಲ್ ಸ್ಕ್ಯಾನರ್ ಯಂತ್ರವನ್ನು ಕೊಡುಗೆಯಾಗಿ ನೀಡಿದರು.       ಕೊರೊನಾ ಆತಂಕದ ನಡುವೆ ಸರ್ಕಾರ ಶಾಲೆಗಳನ್ನು ಆರಂಭಿಸಿದೆ. ಪೋಷಕರೂ ಸಹ ಭಯದಿಂದಲೇ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಹಾಗಾಗಿ ಶಾಲೆಯಲ್ಲಿ ಕೊರೊನಾ ನುಸುಳದಂತೆ ಎಚ್ಚರ ವಹಿಸುವ ಸಲುವಾಗಿ ಶಾಲೆಗೆ ಬರುವ ಮಕ್ಕಳನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕಿದೆ. ಈ ನಿಟ್ಟಿನಲ್ಲಿ ಶಾಲೆಯಲ್ಲಿ ಲಭ್ಯವಿಲ್ಲದ ಥರ್ಮಲ್ ಸ್ಕ್ಯಾನರ್ ಅನ್ನು ನೂತನ ಗ್ರಾಪಂ ಸದಸ್ಯರು ಶಾಲೆಗೆ ಕೊಡುಗೆಯಾಗಿ ನೀಡಿ ಕೋವಿಡ್ ನಿಯಮ ಪಾಲನೆಗೆ ನೆರವಾಗಿದ್ದಾರೆ.       ಅಲ್ಲದೆ ಶಾಲೆಗೆ ಬರುವ ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಸ್ಯಾನಿಟೈಸರ್ ಹಾಗೂ ಮಾಸ್ಕ್‍ಗಳನ್ನೂ ಸಹ ಉಚಿತವಾಗಿ ವಿತರಿಸಿದರು. ಕೋವಿಡ್…

ಮುಂದೆ ಓದಿ...

ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ರೈತರಿಗೆ ಸಂಕಷ್ಟ

ತುಮಕೂರು :        ಕೃಷಿ ಕಾಯ್ದೆ ಗಳನ್ನು ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದು, ಅಸಂವಿಧಾನಾತ್ಮಕವಾಗಿ ವರ್ತಿಸುತ್ತಿದ್ದ ಕೇಂದ್ರ ಸರಕಾರಕ್ಕೆ ಸುಪ್ರಿಂಕೋರ್ಟ್ ರೈತ ವಿರೋಧಿ ಕಾಯ್ದೆಗಳನ್ನು ತಡೆ ಹಿಡಿಯಿರಿ ಎಂದು ಹೇಳುವ ಮೂಲಕ ಕಪಾಳಮೋಕ್ಷ ಮಾಡಿದೆ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.       ಜನವರಿ 26 ರಂದು ದೆಹಲಿಯಲ್ಲಿ ಹೋರಾಟ ನಿರತ ರೈತರು ನಡೆಸುವ ಟ್ರಕ್‍ಮತ್ತು ಟ್ಯಾಕ್ಟರ್ ಪೇರೆಡ್‍ಗೆ ಪರ್ಯಾಯವಾಗಿ, ಕರ್ನಾಟಕದಲ್ಲಿಯೂ ಹೋರಾಟ ರೂಪಿಸುವ ಹಿನ್ನೆಲೆಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಪ್ರಜಾಸತ್ಮಾತ್ಮಕವಾಗಿ ಜನಾಭಿಪ್ರಾಯದ ನಂತರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸುಧೀರ್ಘ ಚರ್ಚೆ ನಡೆಸಿ, ತರಬೇಕಾದ ಕಾಯ್ದೆಯನ್ನು ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆಯಿಂದ ಸುಗ್ರಿವಾಜ್ಞೆ ಮೂಲಕ ಜಾರಿಗೆ ಮಾಡುತ್ತಿರುವುದು ಸರಿಯಲ್ಲ.ಕೂಡಲೇ ಸದರಿ ಕಾಯ್ದೆಗಳ ಜಾರಿಯನ್ನು ತಡೆ ಹಿಡಿಯಿರಿ, ಇಲ್ಲವೇ ನಾವೇ ತಡೆ…

ಮುಂದೆ ಓದಿ...