ತುಮಕೂರು: ಬಿಜೆಪಿ ವಶವಾದ ಪೌರರು-ಉಪಮಹಾಪೌರರ ಅಧಿಕಾರ

ತುಮಕೂರು:        ಇಲ್ಲಿನ ಮಹಾನಗರ ಪಾಲಿಕೆಯ ಮಹಾಪೌರರು ಮತ್ತು ಉಪಮಹಾಪೌರರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಈ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯುವ ಮೂಲಕ ಮಹಾನಗರ ಪಾಲಿಕೆ ಆಡಳಿತ ಭಾರತೀಯ ಜನತಾ ಪಕ್ಷದ ವಶವಾಗಿದೆ. ಮಹಾನಗರ ಪಾಲಿಕೆಯ ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಈ ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸದಸ್ಯರೂ ಇಲ್ಲದ ಕಾರಣ ಬಿಜೆಪಿಯ 32ನೇ ವಾರ್ಡ್‍ನ ಸದಸ್ಯರಾದ ಬಿ.ಜಿ. ಕೃಷ್ಣಪ್ಪ ಅವರು ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾದರು.      ಇನ್ನು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮಾತುಕತೆ ಮೂಲಕ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್‍ನ 29ನೇ ವಾರ್ಡ್‍ನ ನಾಜಿಮಾಬಿ ಇಸ್ಮಾಯಿಲ್ ಅವರನ್ನು ಉಪಮೇಯರ್ ಆಗಿ…

ಮುಂದೆ ಓದಿ...

ಗ್ರಾಮ ಪಂಚಾಯಿತಿ ಪಿಡಿಒ ಮೇಲೆ ಜಾತಿ ನಿಂದನೆ

ಚಿಕ್ಕನಾಯಕನಹಳ್ಳಿ:       ಗ್ರಾಮ ಪಂಚಾಯಿತಿ ಪಿಡಿಒ ಮೇಲೆ ಜಾತಿ ನಿಂದನೆಮಾಡಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ತಾಲ್ಲೂಕು ಗ್ರಾಮ ಪಂಚಾಯಿತಿ ಪಿಡಿಓ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.          ತಾಲ್ಲುಕಿನ ದೊಡ್ಡೆಣ್ಣೆಗೆರೆ ಗ್ರಾಮ ಪಂಚಾಯಿತಿಯ (ಪ್ರಭಾರ) ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಡವೀಶ್‍ಕುಮಾರ್‍ರವರ ಮೇಲೆ ಫೆ.24 ರಂದು ಅಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎ.ವೈ ರಮ್ಯರವರ ಪತಿ ಮಂಜುನಾಥ್, ಹಾಗೂ ಸದಸ್ಯರಾದ ಡಿ.ಎಸ್. ಪ್ರಶಾಂತ್ ಹಾಗೂ ಡಿ.ಎಂ. ಶಿವಕುಮಾರ್‍ರವರು ಪಿಡಿಓರವರನ್ನು ಅವಾಚ್ಯವಾಗಿ ನಿಂದಿಸಿ, ಕರ್ತವ್ಯದಲ್ಲಿದ್ದ ಅವರನ್ನು ಕಚೇರಿಯಿಂದ ಹೊರಕ್ಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಪಿಡಿಓರವರನ್ನು ಜಾತಿನಿಂದನೆ ಮಾಡಿ ಅವರಿಗೆ ಮಾನಹಾನಿÀ ಮಾಡಿದ್ದಾರೆ. ಈ ಪ್ರಕರಣದಿಂದ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುವ ಪಿಡಿಒಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳಿಗೆ ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಸದರಿ ಪ್ರಕರಣ ಸಂಬಂಧ…

ಮುಂದೆ ಓದಿ...

ಎಲ್ಲಾ ಶಾಲೆ-ಅಂಗನವಾಡಿ ಕೇಂದ್ರಗಳಿಗೆ ಕಡ್ಡಾಯ ಕುಡಿಯುವ ನೀರಿನ ವ್ಯವಸ್ಥೆಗೆ ಸೂಚನೆ

ತುಮಕೂರು:       ಜಿಲ್ಲೆಯಲ್ಲಿರುವ ಎಲ್ಲಾ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳಿಗೆ ಜಲಜೀವನ್ ಮಿಷನ್ ಅಡಿ ಕಡ್ಡಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾ ಪಂಚಾಯತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆಂಪಚೌಡಪ್ಪ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತಿಯಲ್ಲಿ ಗುರುವಾರ ಜರುಗಿದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎರಡನೇ ಹಂತದ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದಾಗ, ಉತ್ತರಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ ಸಭೆಗೆ ಮಾಹಿತಿ ನೀಡುತ್ತಾ, ನಗರ ಪ್ರದೇಶಗಳಲ್ಲಿ ಕೋವಿಡ್-19 ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ…

ಮುಂದೆ ಓದಿ...

ತುಮಕೂರಿನ ಹೊನ್ನೇನಹಳ್ಳಿಯಲ್ಲಿ ವಿಜಯನಗರಕ್ಕೆ ಸೇರಿದ ಶಾಸನ ಪತ್ತೆ

ತುಮಕೂರು:      ತುಮಕೂರು ನಗರಕ್ಕೆ ಸಮೀಪದ ಹೊನ್ನೇನಹಳ್ಳಿಯಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಆಳಿದ ಕೃಷ್ಣದೇವರಾಯ ಕಾಲಮಾನವಾದ ನಿಖರವಾದ ದಿನಾಂಕವನ್ನು ಸ್ಪಷ್ಟಪಡಿಸುವ ಶಾಸನವೊಂದು ಪತ್ತೆಯಾಗಿದೆ.        ಕ್ರಿಸ್ತಶಕ 1336ರಲ್ಲಿ ಹಕ್ಕ,ಬುಕ್ಕರಿಂದ ಆರಂಭವಾದ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣ ದೇವರಾಯನ ಸಾವಿನ ಕುರಿತಾದ ನಿಖರತೆ ಇದುವರೆಗೂ ಇತಿಹಾಸಕಾರರಿಗೆ ಲಭ್ಯವಾಗಿರಲಿಲ್ಲ.ಹೊನ್ನೇನಹಳ್ಳಿಯಲ್ಲಿ ದೊರೆತ್ತಿರುವ ಈ ಶಾಸನದಲ್ಲಿ ಶಾಲಿವಾಹನ ಶಕ ವಿರೋಧಿ ನಾಮ ಸಂವತ್ಸರ 1452ರ ಕಾರ್ತಿಕ ಶುದ್ದ15 ಎಂದರೆ ಕ್ರಿಸ್ತಶಕ 1529ರ ಅಕ್ಟೋಬರ್ 17 ರಂದು ಶ್ರೀಕೃಷದೇವರಾಯರು ಆಸ್ತಮರಾಗಿರುತ್ತಾರೆ ಎಂದು ನಮೂದಿಸಿದ್ದು,ಈ ಸಂಬಂಧ ತುಮಕೂರು ಸೀಮೆಯ ತಿಮ್ಮಣ್ಣ ನಾಯಕರಿಗೆ ತುಮಕೂರು ವೀರಪ್ರಸನ್ನ ಹನುಮಂತ ದೇವರ ಪೂಜೆಗಾಗಿ ಧಾರೆ ಎರೆದು ಕೊಟ್ಟಿರುವುದಾಗಿದೆ.        15 ಸಾಲುಗಳನ್ನು ಒಳಗೊಂಡಿರುವ ಶಾಸನದಲ್ಲಿ ಪ್ರಮುಖವಾಗಿ ಚರ್ಚಿಸಲಾಗಿರುವ ಅಂಶವೆನೆಂದರೆ, ಶುಭಮಸ್ತು, ಸ್ವಸ್ತಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕವರುಷ 1452ನೇ ವಿರೋಧಿ ಸಂವತ್ಸರದ ಕಾರ್ತೀಕ ಶು 15ಲೂ ಶ್ರೀ…

ಮುಂದೆ ಓದಿ...

ಆರ್.ಟಿ.ಇ. ಕಾಯ್ದೆಯಡಿ ದಾಖಲಾದ ಮಕ್ಕಳನ್ನು ಬೇಧ-ಭಾವದಿಂದ ಕಾಣುತ್ತಿರುವುದು ಆತಂಕಕಾರಿ

ತುಮಕೂರು :        ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ. ಮೂಲಕ ದಾಖಲಾದ ಮಕ್ಕಳನ್ನು ಬೇಧ-ಭಾವದಿಂದ ಕಾಣುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅಭಿಪ್ರಾಯಪಟ್ಟರು. ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸರ್ಕಾರಿ/ ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರು, ಸಮಾಲೋಚಕರು, ಸಾಂತ್ವಾನ ಕೇಂದ್ರಗಳ ಮುಖ್ಯಸ್ಥರು, ಸಮಾಲೋಚಕರುಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಒದಗಿಸಬೇಕಾದ ಸೌಲಭ್ಯಗಳ ಕುರಿತು ಇತ್ತೀಚೆಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ. ಮುಖಾಂತರ ಮಕ್ಕಳನ್ನು ದಾಖಲು ಮಾಡಿಕೊಳ್ಳುವಲ್ಲಿ…

ಮುಂದೆ ಓದಿ...

ತೈಲ ದರ ಏರಿಕೆ ; ಪ್ರಧಾನಿ ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳಲಿದ್ದಾರೆ : ವಿ.ಸೋಮಣ್ಣ

ತುಮಕೂರು :       ದೇಶದಲ್ಲಿ ಪ್ರತಿನಿತ್ಯ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಂಬಂಧ ಪ್ರಧಾನ ಮಂತ್ರಿ ಹಾಗೂ ಕೇಂದ್ರದ ವಿತ್ತ ಸಚಿವರು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ವಸತಿ ಸಚಿವ ವಿ. ಸೋಮಣ್ಣ ಇಂದಿಲ್ಲಿ ತಿಳಿಸಿದರು. ದೇಶದ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರದ ಆರ್ಥಿಕ ಮಂತ್ರಿಗಳಿಗೆ ದೂರದೃಷ್ಠಿ ಚಿಂತನೆ ಇದೆ. ಹಾಗಾಗಿ ಅವರು ಎಲ್ಲದರ ಬಗ್ಗೆಯೂ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.      ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ರಾಜ್ಯ ಸರ್ಕಾರವಾದರೂ ತನ್ನ ವ್ಯಾಪ್ತಿಯಲ್ಲಿ ಕಡಿಮೆ ಮಾಡಬಹುದಲ್ಲವಾ ಎಂಬ ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿಗಳು ಈಗಾಗಲೇ ದರ…

ಮುಂದೆ ಓದಿ...

ಸಿಲ್ಕ್-ಮಿಲ್ಕ್ ಉತ್ಪಾದನೆಯಿಂದ ರೈತರ ಬದುಕು ಹಸನು : ಡಾ||ಜಿ.ಪರಮೇಶ್ವರ್

ಕೊರಟಗೆರೆ :      ಗ್ರಾಮೀಣ ಪ್ರದೇಶದ ರೈತರ ಬದುಕು ಉತ್ತಮವಾಗಿ ಆರ್ಥಿವಾಗಿ ಅಭಿವೃದ್ದಿ ಹೊಂದಬೇಕಾದರೆ ಸರ್ಕಾರದ ಸವಲತ್ತು ಪಡೆದು ಆದುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸಿಲ್ಕ್ ಮತ್ತು ಮಿಲ್ಕ್ ಉತ್ಪದನೆಮಾಡುವ ಮೂಲಕ ಪ್ರಗತಿ ಸಾಧಿಸುವಂತೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.       ಅವರು ಕೊರಟಗೆರೆ ಪಟ್ಟಣದ ಹಿಂದೂ ಸಾದರ ಸಮುದಾಯ ಭವನದಲ್ಲಿ ತಾಲೂಕು ರೇಷ್ಮೆ ಇಲಾಖೆ ಏರ್ಪಡಿಸಿದ್ದ ತಾಲೂಕು ಮಟ್ಟದ ರೇಷ್ಮೆ ಕೃಷಿ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಮತ್ತು ರೈತರಿಗೆ ಸರ್ಕಾರಿ ಸವಲತ್ತು ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ ರೈತರು ಹೈನುಗಾರಿಕೆ ಹಾಗೂ ದ್ವಿತಳಿ ರೇಷ್ಮೆ ಕೈಷಿಯನ್ನು ಅವಲಂಬಿಸುವ ಮೂಲಕ ರೈತರು ಆರ್ಥಿಕವಾಗಿ ಅಭಿವೃದ್ದಿ ಹೊಂದಬೇಕು, ನಮ್ಮ ರೈತರು ಬೆಳೆಯುವ ರೇಷ್ಮೆ ಪ್ರಪಂಚದಲ್ಲೆ ಉತ್ತಮ ವಾದ ರೇಷ್ಮೆಯಾಗಿದ್ದು ಬೇಡಿಕೆ ಯೊಂದಿಗೆ ಹೆಚ್ಚು ಬೆಲೆಇದೆ ಎಂದ ಅವರು ನಮ್ಮ ರೈತರು ಚೀನಾ ರೇಷ್ಮೆಗೆ ಕಡಿವಾಣ…

ಮುಂದೆ ಓದಿ...

ಗ್ರಾಮ ಪಂಚಾಯ್ತಿಗಳಲ್ಲಿ ಸರಿಯಾದ ಸೌಕರ್ಯ ಸಿಕ್ಕರೆ ಅದೇ ರಾಮರಾಜ್ಯ

ತುಮಕೂರು :       ಸಮಾಜದ ಎಲ್ಲಾ ವರ್ಗದ ಜನರಿಗೆ ಸಕಲ ಮೂಲಭೂತ ಸೌಕರ್ಯಗಳು ಸರಿಯಾದ ಸಮಯಕ್ಕೆ ಲಭ್ಯವಾದರೆ ಅದೇ ರಾಮರಾಜ್ಯವಾಗಿ ನಿರ್ಮಾಣವಾಗುವುದೆಂದು ತುಮಕೂರು ಲೋಕಸಭಾ ಸದಸ್ಯ ಜಿ.ಬಿ.ಬಸವರಾಜು ಅವರು ತಿಳಿಸಿದರು.       ಜಿಲ್ಲೆಯ ಗುಬ್ಬಿ ತಾಲ್ಲೂಕು ಕಡಬ ಹೋಬಳಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯನ್ನು ಲೋಕಸಭಾ ಕ್ಷೇತ್ರ ಸಂಸದರ ಆದರ್ಶ ಗ್ರಾಮ ಪಂಚಾಯ್ತಿಯ ವಿಡಿಪಿ(ವೀಲೇಜ್ ಡೆವೆಲಪ್ ಮೇಂಟ್ ಪ್ಲಾನ್ ) ತಯಾರಿಕ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರು 2014 ರಲ್ಲಿ ಪ್ರತಿ ಲೋಕಸಭಾ ಸದಸ್ಯರು ಗ್ರಾಮಗಳನ್ನು ಅಥವಾ ಪಂಚಾಯ್ತಿಗಳನ್ನು ದತ್ತು ತೆಗೆದುಕೊಂಡು ಆದರ್ಶ (ಮಾದರಿ) ಗ್ರಾಮಗಳನ್ನಾಗಿ ಮಾಡಿದರೆ ಗ್ರಾಮಿಣ ಭಾಗ ಅನೇಕ ಜ್ವಲಂತ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಆದರ್ಶ ಗ್ರಾಮ ಅಭಿವೃದ್ಧಿಯ ಯೋಜನೆಯನ್ನು ರೂಪಿಸಿರುವುದು ಶ್ಲಾಘನೀಯ ನನಗೆ 5 ಗ್ರಾಮ ಪಂಚಾಯ್ತಿಗಳನ್ನು ಆದರ್ಶ ಗ್ರಾಮ ಪಂಚಾಯ್ತಿಗಳನ್ನಾಗಿ…

ಮುಂದೆ ಓದಿ...

ಖಾಸಗಿ ಶಾಲೆ ಶುಲ್ಕ ಗೊಂದಲ ಬಗೆಹರಿಸಿ : ಆರೋಗ್ಯ – ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಚೌಡಪ್ಪ

ತುಮಕೂರು :      ಕೋವಿಡ್ 2ನೇ ಅಲೆ ಹೆಚ್ಚುತ್ತಿದ್ದು, ನಗರ ಪ್ರದೇಶದಲ್ಲೆ ಕೋವಿಡ್ ಹರಡುತ್ತಿದ್ದು, ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಚೌಡಪ್ಪ ಸೂಚಿಸಿದರು.       ಜಿಲ್ಲಾ ಪಂಚಾಯತಿಯಲ್ಲಿ ಆರ್. ಚೌಡಪ್ಪ ಅಧ್ಯಕ್ಷತೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಬೆಂಗಳೂರು ತುಮಕೂರು ನಡುವೆ ಓಡಾಡುವರ ಸಂಖ್ಯೆ ಹೆಚ್ಚುತ್ತಿದ್ದು, ಗ್ರಾಮಾಂತರ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಕೋವಿಡ್ ಹೆಚ್ಚಳವಾಗುತ್ತಿದ್ದು, ಕೋವಿಡ್ ವಾರಿಯರ್ಸ್ ಶ್ರಮವಹಿಸುವಂತೆ ಸೂಚಿಸಿದರು.      ಸಾರ್ವಜನಿಕರು ಸಹ ಮದುವೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಎಚ್ಚರಿಕೆ ವಹಿಸಬೇಕು, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸುವ ಮೂಲಕ ಕೋವಿಡ್ ಅಲೆ ತಡೆಯಲು ಸಹಕರಿಸುವಂತೆ ಕೋರಿದರು. ಖಾಸಗಿ ಶಾಲೆಗಳು ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆಯುತ್ತಿರುವ ಶಾಲೆಗಳ ವಿರುದ್ಧ ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ…

ಮುಂದೆ ಓದಿ...

ಇಂಧನ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಪ್ರತಿಭಟನೆ

ತುಮಕೂರು :         ಇಂಧನ ಬೆಲೆಗಳ ನಿರಂತರ ಹೆಚ್ಚಳ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿಗಳ ವಿಳಂಬದಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಖಂಡಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದವತಿಯಿಂದ ಎತ್ತಿನಗಾಡಿ,ಜಟಕಾಗಾಡಿ, ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.        ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಹಮ್ಮಿಕೊಳ್ಳಲಾಗಿದ್ದ ಎತ್ತಿನ ಗಾಡಿ,ಜಟಕಾಗಾಡಿ ಮತ್ತು ಸೈಕಲ್ ಜಾಥಾವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಸೈಯಿದ್ ಅಹಮದ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು,ಅಂತರರಾಷ್ಟ್ರಿಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ, ಭಾರತದಲ್ಲಿ ನಿರಂತರ ವಾಗಿ ಇಂಧನ ಬೆಲೆಗಳನ್ನು ಹೆಚ್ಚಳ ಮಾಡುವ ಮೂಲಕ, ಕೋರೋನ ಸಂಕಷ್ಟದಲ್ಲಿರುವ ರೈತರನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಲಿಗೆ ಮಾಡುತ್ತಿವೆ.ಇಂಧನ ಬೆಲೆಗಳ ಹೆಚ್ಚಳದ ಪರಿಣಾಮ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗಿ, ಜನಸಾಮಾನ್ಯರು, ಅದರಲ್ಲಿ ಬಡವರು ಮತ್ತು ಮಧ್ಯಮವರ್ಗದ ಜನರು…

ಮುಂದೆ ಓದಿ...