ಲಿಕ್ಕರ್ ಮಾರಾಟ ಮಾಡುವವರಿಗೆ ಪೊಲೀಸ್ ಇಲಾಖೆಯಿಂದ ಕಿರುಕುಳ

ತುಮಕೂರು :      ಲಿಕ್ಕರ್ ಮಾರಾಟ ಮಾಡುವವರಿಗೆ ಅಬಕಾರಿ, ಪೆÇಲೀಸ್ ಇಲಾಖೆಯಿಂದ ಕಿರುಕುಳ ಹೆಚ್ಚಿರುವುದಲ್ಲದೆ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ತುಮಕೂರು ಜಿಲ್ಲಾ ಮದ್ಯ ಮಾರಾಟಗಾರ ಸಂಘದ ಕಾರ್ಯದರ್ಶಿ ಎಸ್.ಆರ್.ಜಗದೀಶ್ ಆರೋಪಿಸಿದರು.        ಮದ್ಯ ಮಾರಾಟಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತುಮಕೂರು ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.       ಸರ್ಕಾರ ಆನ್ ಲೈನ್ ಮೂಲಕ ಮದ್ಯಮಾರಾಟ ಮಾಡುವ ಪ್ರಸ್ತಾವನೆಯನ್ನು ಕೈಬಿಡುವಂತೆ 2018ರಲ್ಲಿಯೇ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದ್ದರು, 2020ರಲ್ಲಿ ಹಿಪ್ ಬಾರ್ ಪ್ರೈ.ಲಿ ಒತ್ತಡದ ಮೇಲೆ ಪುನಃ ಪ್ರಸ್ತಾವ ತರುವ ಮೂಲಕ ಮದ್ಯ ಸನ್ನದುದಾರರ ಉದ್ಯೋಗವನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.       ಸರ್ಕಾರ ಆನ್ ಲೈನ್ ಮದ್ಯ ಮಾರಾಟಕ್ಕ ಒಪ್ಪಿಗೆ…

ಮುಂದೆ ಓದಿ...

ಜಿಲಿಟಿನ್ ಕಡ್ಡಿ ಸ್ಫೋಟ : ಮನೆ ಧ್ವಂಸಗೊಂಡು ಮಹಿಳೆಗೆ ಗಾಯ

ತುಮಕೂರು :       ಕ್ರಷರ್ ಹಾಗೂ ಕಲ್ಲು ಬಂಡೆಗಳನ್ನು ಸ್ಫೋಟಿಸುವ ಜಿಲಿಟಿನ್ ಕಡ್ಡಿ ಸ್ಫೋಟಗೊಂಡು ಮನೆಯಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಸ್ಕಲ್ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.       ತಾಲ್ಲೂಕಿನ.ಹೆಬ್ಬೂರು ಪೊಲಿಸ್ ಠಾಣೆ ವ್ಯಾಪ್ತಿಯ ಹೊನ್ನುಡಿಕೆ ಬಳಿ ಇರುವ ಮಸ್ಕಲ್ ಗ್ರಾಮದ ಲಕ್ಷ್ಮೀಕಾಂತ್ ಎಂಬುವರ ಮನೆ ಜಿಲಿಟಿನ್ ಕಡ್ಡಿ ಸ್ಪೋಟಗೊಂಡು ಸಂಪೂರ್ಣ ಧ್ವಂಸವಾಗಿದ್ದು, ಮೇಲ್ಛಾವಣಿ ಸೀಟುಗಳು ನಾಶವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಜಿಲೆಟಿನ್ ಕಡ್ಡಿ ಸ್ಫೋಟದಿಂದ ಮನೆಯಲ್ಲಿದ್ದ ಲಕ್ಷ್ಮೀಕಾಂತ ಅವರ ಪತ್ನಿ ಸುವರ್ಣಮ್ಮ ಎಂಬುವರ ತಲೆಗೆ ಸೀಟಿನ ಚೂರುಗಳು ಅಪ್ಪಳಿಸಿರುವ ಪರಿಣಾಮ ಈಕೆ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಿಪಾಳ್ಯದ ಬಳಿ ಶಾಲೆಯೊಂದರ ಕಾಂಪೌಂಡ್ ಅಡಿಪಾಯ ತೆಗೆಯಲು ಲಕ್ಷ್ಮೀಕಾಂತ್ ಒಪ್ಪಂದ ಮಾಡಿಕೊಂಡಿದ್ದು, ಪಾಯ ತೆಗೆಯುವಾಗ ಕಲ್ಲುಬಂಡೆ ಸಿಕ್ಕಿವೆ. ಈ ಬಂಡೆಯನ್ನು ಸಿಡಿಸಲೆಂದು ಜಿಲೆಟಿನ್…

ಮುಂದೆ ಓದಿ...