ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಡಿಸಿ ಸೂಚನೆ

 ತುಮಕೂರು :       ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಸೂಚನೆ ನೀಡಿದ್ದಾರೆ.       ಇತ್ತೀಚಿಗೆ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಇಲಾಖಾ ಕಾರ್ಯಕ್ರಮಗಳಿಗಾಗಿ ಜಿಲ್ಲೆಗೆ 2020-21ನೇ ಸಾಲಿಗಾಗಿ 170 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನವನ್ನು ಬಳಸಿಕೊಂಡು ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ, ಫ್ಯಾನ್ ಹಾಗೂ ಲೈಟ್‍ಗಳನ್ನು ಅಳವಡಿಸಬೇಕೆಂದು ನಿರ್ದೇಶನ ನೀಡಿದ್ದಾರೆ.       ಪ್ರತಿ ಅಂಗನವಾಡಿ ಕೇಂದ್ರಕ್ಕೆ 25000 ರೂ.ನಂತೆ ಸಿದ್ಧಪಡಿಸಿರುವ ಅಂದಾಜುಪಟ್ಟಿ ಬಗ್ಗೆ ಚರ್ಚಿಸಿದ ಅವರು, ಪ್ರತಿ ಕೇಂದ್ರಕ್ಕೆ 25000 ರೂ.ಗಳ ಅನುದಾನ ಅಗತ್ಯವಿರುವುದಿಲ್ಲ. ಆದ್ದರಿಂದ ಅಂದಾಜು ಪಟ್ಟಿಗಳನ್ನು ಪರಿಷ್ಕರಿಸಿ ವಾಸ್ತಾವಿಕ ವೆಚ್ಚದಲ್ಲಿ ಹೆಚ್ಚು ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ…

ಮುಂದೆ ಓದಿ...

ಗುಬ್ಬಿ ; ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬ್ಯಾಡಿಗೆರೆ ಗ್ರಾಮಸ್ಥರ ಶಾಪ

ಗುಬ್ಬಿ:      ಸುಟ್ಟುಹೋದ ವಿದ್ಯುತ್ ಪರಿವರ್ತಕವನ್ನು ಬದಲಿಸಿಕೊಡುವಲ್ಲಿ ವಿಳಂಬ ಅನುಸರಿಸಿದ ಗುಬ್ಬಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬ್ಯಾಡಿಗೆರೆ ಗ್ರಾಮಸ್ಥರು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಈ ಬಗ್ಗೆ ಅಸಡ್ಡೆವಹಿಸಿದ ಬೆಸ್ಕಾಂ ಸಿಬ್ಬಂದಿಗಳ ವಿರುದ್ದ ಆಕ್ರೋಶ ಹೊರಹಾಕಿದ ಸ್ಥಳೀಯರು ಇಡೀ ಬೆಸ್ಕಾಂ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ.         ಕಸಬ ಹೋಬಳಿ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಿಗೆರೆ ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ದಿಢೀರ್ ಸುಟ್ಟುಹೋದ ಟ್ರಾನ್ಸ್‍ಫಾರ್ಮರ್ ಇಡೀ ಗ್ರಾಮ ಕಗ್ಗತ್ತಲಲ್ಲಿ ಇರುವಂತಾಯಿತು. ಈ ಬಗ್ಗೆ ಕೂಡಲೇ ಅಧಿಕಾರಿಗಳಿಗೆ ತಿಳಿಸಲಾಯಿತು. ದುರಸ್ಥಿ ಮಾಡುವುದಾಗಿ ಹೇಳಿ ದಿನ ಕಳೆದಂತೆ ಒಂದಲ್ಲಾ ಒಂದು ಸಬೂಬು ಹೇಳಿಕೊಂಡು 15 ದಿನಗಳಾದರೂ ಟಿಸಿ ಬದಲಿಸಲಿಲ್ಲ. 200 ಕ್ಕೂ ಅಧಿಕ ಮನೆಗಳಿರುವ ಈ ಗ್ರಾಮಕ್ಕೆ ವಿದ್ಯುತ್ ಕುಡಿಯುವ ನೀರಿಗೆ ಬೇಕಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ವಿವರಿಸಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.  …

ಮುಂದೆ ಓದಿ...

ನಿಗಧಿತ ಕಾಲಾವಧಿಯೊಳಗೆ ಬಿಲ್ಲು ಸಲ್ಲಿಸಲು ಇಂಜಿನಿಯರುಗಳಿಗೆ ಸೂಚನೆ

 ತುಮಕೂರು :       ಜಿಲ್ಲಾ ಪಂಚಾಯತ್ ಅನುದಾನದಲ್ಲಿ ವಿವಿಧ ಇಲಾಖೆಗಳು ಕೈಗೊಂಡು ಪೂರ್ಣಗೊಳಿಸಿರುವ ಯೋಜನಾ ಕಾಮಗಾರಿಗಳಿಗೆ ಸಂಬಂಧಿಸಿದ ಬಿಲ್ಲುಗಳ ಪಾವತಿಗಾಗಿ ಕೂಡಲೇ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಇಂಜಿನಿಯರುಗಳಿಗೆ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ವಿಶೇಷ ಸಾಮಾನ್ಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪೂರ್ಣಗೊಂಡ ಕಾಮಗಾರಿಗಳ ಬಿಲ್ಲುಗಳನ್ನು ಸಕಾಲದಲ್ಲಿ ಸಲ್ಲಿಸದ್ದಿದ್ದರೆ ಅನುದಾನ ರದ್ದಾಗುತ್ತದೆ. ಅನುದಾನ ರದ್ದಾದರೆ ಸಂಬಂಧಿಸಿದ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.       ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳ ವಿವಿಧ ಲೆಕ್ಕ ಶೀರ್ಷಿಕೆ/ಯೋಜನೆಗಳಡಿ ಅನುಮೋದಿತ ಕಾಮಗಾರಿಗಳನ್ನು ಬದಲಾವಣೆಗಾಗಿ ಸೂಕ್ತ ಕಾರಣ ನೀಡಿದಾಗ ಮಾತ್ರ ಬದಲಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡಲಾಗುವುದೆಂದರು.      ಅನುದಾನ ಕೊರತೆ, ನ್ಯಾಯಾಲಯದ ದಾವೆ, ಏಜೆನ್ಸಿ ಬದಲಾವಣೆ…

ಮುಂದೆ ಓದಿ...