ತುಮಕೂರು : 131 ಡಿಎಲ್ ಅಮಾನತ್ತು

ತುಮಕೂರು :        2021ರ ಜನವರಿ 31ರ ಅಂತ್ಯಕ್ಕೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ 131 ವಾಹನ ಸವಾರರ ವಾಹನ ಪರವಾನಗಿ ಅಮಾನತ್ತುಗೊಳಿಸಲಾಗಿದ್ದು, ಹೆಚ್ಚು ತಪಾಸಣೆ ನಡೆಸುವ ಮೂಲಕ ಸಂಚಾರ ಸುರಕ್ಷತೆಯನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.      ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪೊಲೀಸ್, ಲೋಕೋಪಯೋಗಿ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 48, 206, 75ರಲ್ಲಿ 54 ಅಪಘಾತ ವಲಯ(ಬ್ಲ್ಯಾಕ್ ಸ್ಪಾಟ್) ಹಾಗೂ ರಾಜ್ಯ ಹೆದ್ದಾರಿ 3 ಮತ್ತು 33ರಲ್ಲಿ 18 ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಈ ಅಪಘಾತ ವಲಯಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಜಂಟಿ ಸಮೀಕ್ಷೆಯಲ್ಲಿರುವ ವರದಿಯನ್ವಯ ರಸ್ತೆ ಉಬ್ಬು, ಸೂಚನಾ ಫಲಕ…

ಮುಂದೆ ಓದಿ...

ಪ್ರತಿಭಟನೆಗೂ ಮುನ್ನವೇ ರೈತರನ್ನು ಬಂಧಿಸಿದ ಪೊಲೀಸರು

ತುಮಕೂರು :         ದೆಹಲಿಯಲ್ಲಿರುವ ನಡೆಯುತ್ತಿರುವ ರೈತರ ಚಳವಳಿ ಬೆಂಬಲಿಸಿ,ದೇಶದೆಲ್ಲಡೆ ರೈತರು ನಡೆಸುತ್ತಿರುವ ಹೆದ್ದಾರಿ ಪ್ರತಿಭಟನೆಯ ಅಂಗವಾಗಿ ತುಮಕೂರಿನಲ್ಲಿ ರೈತ ಸಂಘ, ಹಸಿರು ಸೇನೆ, ಪ್ರಗತಿಪರ ಸಂಘಟನೆಗಳು ಹಾಗೂ ಕಾರ್ಮಿಕರು ಹಮ್ಮಿಕೊಂಡಿದ್ದ ಶಾಂತಿಯುತ ರಸ್ತೆ ತಡೆ ಕಾರ್ಯಕ್ರಮವನ್ನು ಜಿಲ್ಲಾಡಳಿತ ಪೊಲೀಸರ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಸಿದೆ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಗೋವಿಂದರಾಜು ಆರೋಪಿಸಿದ್ದಾರೆ.       ನಗರದ ಗುಬ್ಬಿಗೇಟ್ ಬಳಿ ಶಾಂತಿಯುತ ಪ್ರತಿಭಟನೆಗೆ ಮುಂದಾದ ರೈತರು,ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಮಿಕರನ್ನು ಬಂಧಿಸಿದ ಪೊಲೀಸರ ಕ್ರಮ ಸರಿಯಲ್ಲ ಎಂದ ಅವರು,ನಾವುಗಳು ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ತೊಂದರೆಯಾಗದ ರೀತಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದೇವು.ಆದರೆ ತುಮಕೂರು ಪೊಲೀಸರು ಪ್ರತಿಭಟನೆಗೆ ಕುಳಿತುಕೊಳ್ಳುವ ಮುನ್ನವೇ ನಮ್ಮನ್ನು ಬಲವಂತವಾಗಿ ಬಂಧಿಸುವ ಮೂಲಕ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ.ಇದು ಸರಿಯಲ್ಲ.ಇಂದು ರೈತರ ಸ್ಥಿತಿ ಬೀದಿಗೆ ಬಿದ್ದಿದೆ.ರೈತರ ಹೋರಾಟಕ್ಕೆ ಪ್ರಪಂಚದಾದ್ಯಂತ ತಿಳಿದವರು…

ಮುಂದೆ ಓದಿ...

ಹುಳಿಯಾರು : ಮೋದಿಯ ನೇತೃತ್ವದಲ್ಲಿರುವುದು ಹೃದಯಹೀನ ಸರ್ಕಾರ

ಹುಳಿಯಾರು :       ರೈತರು ಈ ದೇಶದ ಮೂಲನಿವಾಸಿಗಳು, ದೆಹಲಿ ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರ ಸಮಸ್ಯೆಗಳನ್ನು ಆಲಿಸದ ಕೇಂದ್ರ ಸರ್ಕಾರ ಕಣ್ಣು, ಕಿವಿ ಇಲ್ಲದ ಹೃದಯಹೀನ ಸರ್ಕಾರ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಟೀಕಿಸಿದರು.       ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ ಹೆದ್ದಾರಿ ಬಂದ್ ಬೆಂಬಲಿಸಿ ಹೊಸಹಳ್ಳಿ ಚಂದ್ರಣ್ಣ ಬಣದ ರೈತ ಸಂಘದಿಂದ ಹುಳಿಯಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 234 ಬಂದ್ ಹಾಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.        ಕೇಂದ್ರ ಸರ್ಕಾರ ಕೃಷಿ ಕಾಯ್ದೆ ತಿದ್ದು ಪಡಿಯು ರೈತನ ಮರಣ ಶಾಸನವಾಗಿದೆ ಹಾಗಾಗಿ ಕೊರೆಯುವ ಚಳಿಯಲ್ಲಿ 90 ವರ್ಷದವರೆಗಿನ ವಯೋವೃದ್ಧರು ಸೇರಿದಂತೆ ಮಹಿಳೆಯರು ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರೆಲ್ಲರೂ ಅಪ್ಪಟ ರೈತರ ವಿನಹ ಭಯೋತ್ಪಾದಕರಲ್ಲ.…

ಮುಂದೆ ಓದಿ...

ತುಮಕೂರು : ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತನ ಸಾವು

ತುಮಕೂರು :      ನಗರ ಪೊಲೀಸ್ ಠಾಣೆ ವ್ಯಾಪ್ತಿ ಬಾರ್ಲೈನ್ ರಸ್ತೆಯ ಶಿಲ್ಪಬಾರ್ ಬಳಿ ಫೆಬ್ರುವರಿ 1ರಂದು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯು ಫೆ.3ರಂದು ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯು 172 ಸೆ.ಮೀ. ಎತ್ತರ, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಮೈಮೇಲೆ ಬಿಳಿ ಬಣ್ಣದ ಟಿ ಷರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಹಾಗೂ ಎದೆಯ ಮೇಲೆ ರಾಗಿ ಕಾಳು ಗಾತ್ರದ ಮಚ್ಚೆ ಇರುತ್ತದೆ. ಮೃತನ ಹೆಸರು, ವಿಳಾಸ ಪತ್ತೆಯಾಗಿರುವುದಿಲ್ಲ,       ಪ್ರಕರಣವು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಕೂಡಲೇ ಸಮೀಪದ ಪೊಲೀಸ್ ಠಾಣೆಯನ್ನು ಸಂರ್ಪಕಿಸಬಹುದಾಗಿದೆ ಎಂದು ಸಬ್ ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ.

ಮುಂದೆ ಓದಿ...

ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ : ಸಚಿವ ಜೆ.ಸಿ. ಮಾಧುಸ್ವಾಮಿ

ತುಮಕೂರು :       ಸರ್ಕಾರಿ ನೌಕರರು ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದರು.      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಮನುಷ್ಯನ ಬದುಕಲ್ಲಿ ಯಾಂತ್ರಿಕವಾಗಿ ಜೀವನ ಮಾಡುತ್ತಿದ್ದೇವೆ. ಮನಸ್ಸನ್ನು ಹಗುರ ಮಾಡಿಕೊಂಡು ಹೊಸ ಮನುಷ್ಯರಾಗಬೇಕು. ಮನುಷ್ಯ ಮಾನಸಿಕ ಒತ್ತಡದಿಂದ ಹೊರಬರಬೇಕಾದರೆ ಕ್ರೀಡೆ, ಸಂಗೀತ, ನೃತ್ಯ, ಓದುವಂತಹ ಅಭ್ಯಾಸಗಳಲ್ಲಿ ತಲ್ಲೀನರಾಗಬೇಕು. ಮನಸ್ಸು ಸದಾ ಆರೋಗ್ಯವಾಗಿದ್ದರೆ ನಮ್ಮ ದಿನನಿತ್ಯ ಚಟುವಟಿಕೆ ಚೈತನ್ಯದಿಂದ…

ಮುಂದೆ ಓದಿ...