ತುಮಕೂರು: ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷೆ ಕವಿತಾರಮೇಶ್ ಅಧ್ಯಕ್ಷತೆಯಲ್ಲಿ ಮಂಗಳವಾರ ತಾ.ಪಂ. ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಅಭಿವೃದ್ಧಿ ಕುರಿತು ಗಂಭೀರ ಚರ್ಚೆ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆಯೇ ತಾಪಂ ಸದಸ್ಯ ಸುರೇಶ್ ಹಿರೇಹಳ್ಳಿ ಭಾಗದಲ್ಲಿ ಕುಡಿಯುವ ನೀರಿನ ತತ್ವಾರ ಹೆಚ್ಚಾಗಿದ್ದು, ಇರುವ ಕೆಲವು ಬೋರ್ವೆಲ್ಗಳು ಬತ್ತಿಹೋಗಿದ್ದರೆ, ಇನ್ನೂ ಕೆಲವು ಬೋರ್ವೆಲ್ಗಳನ್ನು ದುರಸ್ಥಿ ಮಾಡಬೇಕಾಗಿದೆ. ಕೂಡಲೇ ಅಧಿಕಾರಿಗಳು ಕ್ರಮ ವಹಿಸಿ ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕೆಂದು ಸಭೆಯಲ್ಲಿ ಒತ್ತಾಯಿಸಿದರು. ಇದಕ್ಕೆ ತಾಪಂ ಅಧ್ಯಕ್ಷೆ ಕವಿತಾ ರಮೇಶ್ ಮಾತನಾಡಿ, ಈಗಾಗಲೇ ಬೇಸಿಗೆ ಆರಂಭವಾಗಿದೆ. ತಾಪಂ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರಿಗೆ ಮೊದಲ ಆಧ್ಯತೆ ನೀಡಬೇಕು, ಅಧಿಕಾರಿಗಳು ಜವಾಬ್ದಾರಿ ವಹಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ಎಲ್ಲಿಯೂ ನೀರಿನ ಸಮಸ್ಯೆ ಕಂಡುಬರದಂತೆ ಕ್ರಮ…
ಮುಂದೆ ಓದಿ...