ಮಧುಗಿರಿಯಲ್ಲೊಂದು ಪ್ರಥಮ ಹೈಟೆಕ್ ಅಂಗನವಾಡಿ ಕೇಂದ್ರ

ಮಧುಗಿರಿ:       ತಾಲೂಕಿನ ಕೆಲ ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ ನೀಡಿರುವುದು ಈಗಾಗಲೇ ವರದಿಯಾಗಿದ್ದು, ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೂ ಇದೇ ಹಾದಿಯಲ್ಲಿ ಸಾಗುತ್ತಿದ್ದು, ವಿನೂತನ ಮಾದರಿಯ ಹೈಟೆಕ್ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಮುನ್ನುಡಿ ಬರೆದಿದೆ.    ಹೈಟೆಕ್ ಅಂಗನವಾಡಿ ಕೇಂದ್ರ :       ಪಟ್ಟಣದ ಪುರಸಭಾ ವ್ಯಾಪ್ತಿಯ ಬಹಳಷ್ಟು ಬಡಜನರಿಂದ ಕೂಡಿರುವ ಮಂಡರ ಕಾಲೋನಿಯಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸುಮಾರು 16.50 ಲಕ್ಷ ವೆಚ್ಚದಲ್ಲಿ ಹೈಟೆಕ್ ಅಂಗನವಾಡಿ ಕೇಂದ್ರವನ್ನು ನಿರ್ಮಿಸಿದ್ದು, ಪಟ್ಟಣದ ಮೊದಲ ಹೈಟೆಕ್ ಅಂಗನವಾಡಿ ಕೇಂದ್ರವಾಗಿದೆ.         ಪಟ್ಟಣದಲ್ಲಿ ಸುಮಾರು 25 ಅಂಗನವಾಡಿ ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ಬಹುತೇಕ ಅಂಗನವಾಡಿಗಳು ಬಾಡಿಗೆ ಕೊಠಡಿಗಳಲ್ಲಿ ನಡೆಯುತ್ತಿವೆ. ಈಗ ಮಂಡರ ಕಾಲೋನಿಯಲ್ಲಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ಹೈಟೆಕ್ ಮಾದರಿಯಲ್ಲಿ…

ಮುಂದೆ ಓದಿ...

ಹುಳಿಯಾರು ಸರ್ಕಾರಿ ಆಸ್ಪತ್ರೆ ಈಗಲಾದರೂ ಮೇಲ್ದರ್ಜೆಗೇರುವುದೇ?

ಹುಳಿಯಾರು:        ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳ ಗಡಿ ಗ್ರಾಮಗಳ ಲಕ್ಷಾಂತರ ಜನ ಸಾಮಾನ್ಯರಿಗೆ ಸರಿಸುಮಾರು ಐದು ದಶಕಗಳಿಂದ ಆರೋಗ್ಯ ಸೇವೆ ಒದಗಿಸುತ್ತಿರುವ ಹುಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರುವುದು ಯಾವಾಗ ಎನ್ನುವ ಪ್ರಶ್ನೆ ಕಳೆದ ದಶಕಗಳಿಂದಲೂ ಕೇವಲ ಪ್ರಶ್ನೆಯಾಗಿಯೆ ಉಳಿದಿದೆ. ಈಗ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿಯವರು ಇತ್ತ ಗಮನ ಹರಿಸಿರುವುದು ಸಾರ್ವಜನಿಕ ವಲಯದಲ್ಲಿ ಆಶಾಭಾವನೆ ಚಿಗುರೊಡೆದಿದೆ.       ಹೌದು! ಹುಳಿಯಾರು ಪಟ್ಟಣ ರಾಜ್ಯದಲಿಯೇ ಅತೀ ವೇಗವಾಗಿ ಬೆಳೆಯುತ್ತಿರುವ ಹೋಬಳಿ ಕೇಂದ್ರಗಳಲ್ಲಿ ಒಂದಾಗಿದ್ದು ಪ್ರಮುಖ ವ್ಯಾಪಾರ ಕೇಂದ್ರವಾಗಿ ಹೊರಹೊಮ್ಮಿ ಪ್ರದಿದಿನ ಸಾವಿರಾರು ಜನರು ಬಂದು ಹೋಗುವ ಸ್ಥಳವಾಗಿದೆ. ಹಾಗಾಗಿ ಸಹಜವಾಗಿಯೇ ಇಲ್ಲಿನ ಆಸ್ಪತ್ರೆಗೆ ಹಿಂದೆಂದಿಗಿಂತಲೂ ಕಳೆದ ಐದಾರು ವರ್ಷಗಳಿಂದ ಹೋರ ರೋಗಿಗಳು ದಾಖಲಾಗುತ್ತಿರುವ ಕಾರಣ ಇಲ್ಲಿನ ವೈದ್ಯಕೀಯ ಸಿಬ್ಬಂದ್ದಿಗಳ ಮೇಲೆ ಬೀಳುತ್ತಿರುವ ಒತ್ತಡವನ್ನು ಕಂಡ ಜನತೆ…

ಮುಂದೆ ಓದಿ...

ಟ್ರಾನ್ಸ್‍ಫಾರ್ಮರ್ ಬ್ಲಾಸ್ಟ್ ; 4 ತೆಂಗಿನ ಮರಗಳು ಭಸ್ಮ

ಹುಳಿಯಾರು :        ಟ್ರಾನ್ಸ್‍ಫಾರ್ಮರ್ ಬ್ಲಾಸ್ಟ್ ನಿಂದಾಗಿ 4 ತೆಂಗಿನ ಮರಗಳು ಸುಟ್ಟು ಭಸ್ಮವಾದ ಘಟನೆ ಹಂದನಕೆರೆ ಹೋಬಳಿ ಮತಿಘಟ್ಟ ಸಮೀಪದ ಬೆಳಗಹಳ್ಳಿ ಬಳಿ ಜರುಗಿದೆ. ಮತಿಘಟ್ಟದಿಂದ ಉಪ್ಪಾರಹಳ್ಳಿಗೆ ಮೋಟರ್ ಲೈನ್ ಕರೆಂಟ್ ಸರಬರಾಜು ಮಾಡಲು ಈ ಟ್ರಾನ್ಸ್‍ಫಾರ್ಮರ್ ಅಳವಡಿಸಲಾಗಿತ್ತು. ಆದರೆ ಸಾಮಾರ್ಥಕ್ಯೂ ಮೀರಿ ರೈತರು ಈ ಟಿಸಿಯಿಂದ ವಿದ್ಯುತ್ ಸಂಪರ್ಕ ಪಡೆದಿದ್ದರು. ಪರಿಣಾಮ ಗುರುವಾರ ರಾತ್ರಿ ಓವರ್ ಲೋಡ್ ಆಗಿ ಟಿಸಿ ಬ್ಲಾಸ್ಟ್ ಆಗಿದೆ.        ಟಿಸಿ ಬ್ಲಾಸ್ಟ್‍ನಿಂದ ಹೊತ್ತಿದ ಬೆಂಕಿ ಸುತ್ತಮುತ್ತಲ 4 ಫಲಭರಿತ ತೆಂಗಿನ ಮರಗಳನ್ನು ಸುಟ್ಟಿವೆ. ಅಲ್ಲದೆ ಗುರುವಾರ ರಾತ್ರಿಯಿಂದ ಈ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ರೈತರಿಗೆ ತೊಂದರೆಯಾಗಿದೆ.       ಸ್ಥಳಕ್ಕೆ ಹಂದನಕೆರೆ ಬೆಸ್ಕಾಂ ಶಾಖಾಧಿಕಾರಿ ರಾಜಶೇಖರ್ ಅವರು ಭೇಟಿ ನೀಡಿ ಘಟನೆಯ ವಿವರ ಪಡೆದು ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ. ಟ್ರಾನ್ಸ್‍ಫಾರ್ಮರ್ ಬದಲಾವಣೆಗೆ…

ಮುಂದೆ ಓದಿ...

‘ದೇಶದಲ್ಲೇ ಮಾದರಿ ವಿಧಾನ ಪರಿಷತ್ತನ್ನಾಗಿ ಮಾಡುವೆ’- ಸಭಾಪತಿ ಬಸವರಾಜ ಹೊರಟ್ಟಿ

ತುಮಕೂರು:       ಕರ್ನಾಟಕ ವಿಧಾನ ಪರಿಷತ್‍ನ ಘನತೆ, ಗೌರವವನ್ನು ಎತ್ತಿ ಹಿಡಿದು ದೇಶದಲ್ಲೇ ಮಾದರಿ ವಿಧಾನ ಪರಿಷತ್ತನ್ನಾಗಿ ಮಾಡಲು ಹಗಲಿರುಳು ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.       113 ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ವಿಧಾನ ಪರಿಷತ್ ಇಡೀ ದೇಶಕ್ಕೆ ಮಾದರಿಯಾಗಬೇಕಾಗಿದೆ. ಆ ನಿಟ್ಟಿನಲ್ಲಿ ತಾವು ಕಾರ್ಯನಿರ್ವಹಿಸುತ್ತೇನೆ ಎಂದು ಅವರು ಹೇಳಿದರು.       ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಹುದ್ದೆ ಸಂವಿಧಾನ ಬದ್ಧವಾದ, ಜವಾಬ್ದಾರಿಯುತ ಸ್ಥಾನ. ಇಂತಹ ಸಂವಿಧಾನ ಬದ್ದವಾದ ಹುದ್ದೆಯನ್ನು ನಾನು ಅಲಂಕರಿಸಿದ್ದೇನೆ. ಸದನವನ್ನು ಉತ್ತಮ ರೀತಿಯಲ್ಲಿ ನಡೆಸಲು ಪ್ರಾಮಾಣಿಕ…

ಮುಂದೆ ಓದಿ...