ಮಾರ್ಚ್ 27ರಂದು ಬೃಹತ್ ಲೋಕ್ ಅದಾಲತ್

ತುಮಕೂರು  :       ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳು ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ 2021ರ ಮಾರ್ಚ್ 27ರಂದು ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಅವರು ತಿಳಿಸಿದರು.       ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹೊಸ ನ್ಯಾಯಾಲಯದ ಕಟ್ಟಡದಲ್ಲಿಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲು ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಅದರಂತೆ ಮಾರ್ಚ್ 27ರಂದು ಹಮ್ಮಿಕೊಂಡಿರುವ ಬೃಹತ್ ಲೋಕ್ ಅದಾಲತ್‍ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು…

ಮುಂದೆ ಓದಿ...

ಕೆ.ಸಿ.ಪಾಳ್ಯ ನೀರಿನ ಘಟಕ ದುರಸ್ಥಿ ಮಾಡಿ

ಹುಳಿಯಾರು:      ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಸಿ.ಪಾಳ್ಯದ ಶುದ್ಧ ನೀರಿನ ಘಟಕ ಕೆಟ್ಟು ಎರಡ್ಮೂರು ತಿಂಗಳಾಗಿದ್ದು ತಕ್ಷಣ ದುರಸ್ಥಿ ಮಾಡಿ ಪುಣ್ಯ ಕಟ್ಕೊಳ್ಳಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.        ಕೆ.ಸಿ.ಪಾಳ್ಯ ಗ್ರಾಮದ ಇನ್ನೂರಕ್ಕೂ ಹೆಚ್ಚು ಮನೆಗಳೂ ಸೇರಿದಂತೆ ಸಮೀಪದ ಲಿಂಗಪ್ಪನಪಾಳ್ಯ, ಗೌಡಗೆರೆ, ಸೋಮಜ್ಜನಪಾಳ್ಯದ ಜನರಿಗೆ ಈ ಶುದ್ಧ ನೀರಿನ ಘಟಕ ನೀರು ಪೂರೈಸುತ್ತಿತ್ತು. ಆದರೆ ಈಗ ಈ ಘಟಕ ಕೆಟ್ಟಿದ್ದು ಶುದ್ಧ ನೀರಿಗೆ ಜನ ಪರದಾಡುವಂತ್ತಾಗಿದೆ.       ಪರಿಣಾಮ ಮೂರ್ನಲ್ಕು ಕಿ.ಮೀ.ದೂರದ ಕೆಂಕೆರೆ ಗ್ರಾಮಕ್ಕೆ ಹೋಗಿ ನೀರು ತರುವ ಅನಿವಾರ್ಯತೆ ನಿರ್ಮಾಣವಾಗಿದೆ. ಬೈಕು, ಸೈಕಲ್ ಉಳ್ಳವರು ಕೆಂಕೆರೆಗೆ ಹೋಗಿ ಬರುತ್ತಿದ್ದು ಇಲ್ಲದವರು ಪಂಚಾಯ್ತಿಯ ಕೊಳಾಯಿ ನೀರು ಕುಡಿಯುತ್ತಿದ್ದಾರೆ.      ಈ ಫಿಲ್ಟರ್ ಪದೇ ಪದೇ ಕೆಡುತ್ತಿದ್ದು ಒಮ್ಮೆ ಕೆಟ್ಟರೆ ಎರಡ್ಮೂರು ತಿಂಗಳು ದುರಸ್ಥಿ…

ಮುಂದೆ ಓದಿ...

4 ವರ್ಷ 8 ತಿಂಗಳ ಮಗುವಿನ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

ತುಮಕೂರು:      5 ವರ್ಷದ ಮಗುವಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಮತ್ತು ಕಾಲೇಜಿನ ‘ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್ ಸೆಂಟರ್’ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ದಾಟಿದೆ. ಕಳೆದ ತಿಂಗಳು ಓಪನ್ ಹಾರ್ಟ್ ಸರ್ಜರಿ ಮಾಡಿ ಸಫಲವಾಗಿದ್ದ ವೈದ್ಯರ ತಂಡ ಇದೀಗ ಮಕ್ಕಳ ಹೃದಯ ರೋಗ ಶಸ್ತ್ರಚಿಕಿತ್ಸೆಯನ್ನು ಕೈಗೊಳ್ಳುವ ಮೂಲಕ ತುಮಕೂರಿನಂತಹ ಪ್ರದೇಶದಲ್ಲಿ ಸೂಕ್ಷ್ಮ ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾಗಬಹುದೆಂಬುದನ್ನು ಸಾದರಪಡಿಸಿದ್ದಾರೆ.       ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಲ್ಲೂರ್ ಗ್ರಾಮದ ಕೃಷಿಕ ಹಾಗೂ ಹಿಂದುಳಿದ ವರ್ಗದ ಕುಟುಂಬದ 4 ವರ್ಷ 8 ತಿಂಗಳ ಮಗು (ರಂಜಿತ್–ಹೆಸರು ಬದಲಾಯಿಸಲಾಗಿದೆ) ವಿಗೆ ನಡೆಸಲಾದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಸಾಮಾನ್ಯ ವಾರ್ಡ್‍ನಲ್ಲಿ ಚೇತರಿಸಿಕೊಳ್ಳುತ್ತಿದೆ.       ‘ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್ ಸೆಂಟರ್’ನ ಮೇಲ್ವಿಚಾರಕರಾದ ಹಾಗೂ ‘ಕಾರ್ಡಿಯಾಕ್ ಫ್ರಾಂಟಿ¬ಡಾ’ ಸಂಸ್ಥೆಯ…

ಮುಂದೆ ಓದಿ...