ಜಯಮಂಗಲಿ ಕೃಷ್ಣ ಮೃಗ ವನ್ಯ ಧಾಮಕ್ಕೆ ಭಾರೀ ಅಗ್ನಿ ಅನಾಹುತ

ಮಧುಗಿರಿ:       ತಾಲ್ಲೂಕಿನ ಜಯಮಂಗಲಿ ಕೃಷ್ಣ ಮೃಗ ವನ್ಯ ಧಾಮಕ್ಕೆ ಹೊಂದಿಕೊಂಡಿರುವ ಹುಲ್ಲುಗಾವಲು ಪ್ರದೇಶದಲ್ಲಿ ಭಾನುವಾರ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.       ಜಯಮಂಗಲಿ ಕೃಷ್ಣ ಮೃಗ ವನ್ಯಜೀವಿ ಧಾಮದಲ್ಲಿ ನೂರಾರು ಸಂಖ್ಯೆಯಲ್ಲಿ ಕೃಷ್ಣ ಮೃಗಗಳು ವಾಸಿಸುತ್ತಿವೆ. ರಾಜ್ಯದ ಕೆಲವೇ ಕಡೆಗಳಲ್ಲಿ ಕಂಡು ಬರುವ ಅಪರೂಪದ ಪಕ್ಷಿ ಸಂಪತ್ತುಗಳನ್ನು ಇಲ್ಲಿ ಕಾಣಬಹುದಾಗಿದ್ದು, ದೇಶ ವಿದೇಶಗಳಿಂದ ಪಕ್ಷಿ ಪ್ರಿಯರು ಇಲ್ಲಿಗೆ ಆಗಮಿಸುತ್ತಾರೆ.       ಇಂತಹ ಪ್ರದೇಶದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ನೂರಾರು ಎಕರೆ ಹುಲ್ಲುಗಾವಲು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಬೆಂಕಿಗಾಹುತಿಯಾಗಿರುವ ಪ್ರದೇಶವು ಕೃಷ್ಣ ಮೃಗಗಳು ವಿಹರಿಸುವ ಹುಲ್ಲುಗಾವಲಾಗಿದ್ದು, ಕೃಷ್ಣ ಮೃಗಗಳ ಜೀವಕ್ಕೆ ಆಪತ್ತುಂಟಾಗಿದೆ. ನೂರಾರು ಸಂಖ್ಯೆಯಲ್ಲಿ ಪಕ್ಷಿಗಳು, ಅವುಗಳ ಮೊಟ್ಟೆ, ಮರಿಗಳು ಸುಟ್ಟು ಕರಕಲಾಗಿವೆ. ಬೆಂಕಿಯ ಕೆನ್ನಾಲಿಗೆಯು ರಸ್ತೆಗೂ ವ್ಯಾಪಿಸಿದೆ. ಸ್ಥಳೀಯರು ಬೆಂಕಿ ಗಮನಿಸಿ ಅಗ್ನಿ ಶಾಮಕ ದಳಕ್ಕೆ ಮಾಹಿತಿ…

ಮುಂದೆ ಓದಿ...

ಹುಳಿಯಾರು ಹೋಬಳಿ ಕಾಂಗ್ರೆಸ್ ಭದ್ರ ಕೋಟೆ : ಜಿಪಂ ಸದಸ್ಯ

ಹುಳಿಯಾರು :        ಹುಳಿಯಾರು ಹೋಬಳಿಯು ಕಾಂಗ್ರೆಸ್ ಭದ್ರಕೋಟೆಯಾಗಿದ್ದು ಈ ಬಾರಿಯ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಜಿಪಂ ಸದಸ್ಯ ವೈ.ಸಿ.ಸಿದ್ಧರಾಮಯ್ಯ ಅವರು ಹೇಳಿದರು.       ಹುಳಿಯಾರಿನ ಪಪಂ ಮಾಜಿ ಸದಸ್ಯ ಧನುಷ್ ರಂಗನಾಥ್ ಅವರ ಮನೆಯಲ್ಲಿ ನಡೆದ ಯುವ ಕಾಂಗ್ರಸ್ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.       ಟಿ.ಬಿ.ಜಯಚಂದ್ರ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ 4 ಬಾರಿಯೂ ಹುಳಿಯಾರು ಹೋಬಳಿ ಲೀಡ್ ಕೊಟ್ಟಿತ್ತು. ಕಳೆದ ಬಾರಿ ಜಯಚಂದ್ರ ಅವರ ಪುತ್ರ ಸಂತೋಷ್ ಸ್ಪರ್ಧಿಸಿದ್ದಾಗಲೂ ಹೆಚ್ಚು ಮತಗಳು ಈ ಹೋಬಳಿಯಿಂದ ಬಂದಿತ್ತು. ಹುಳಿಯಾರು ಗ್ರಾಮ ಪಂಚಾಯ್ತಿಗೂ ಸಹ ಕಾಂಗ್ರೆಸ್ ಬೆಂಬಲಿತರೇ ಹೆಚ್ಚು ಮಂದಿ ಗೆದ್ದು ಅಧಿಕಾರ ಹಿಡಿದಿದ್ದರು ಎಂದು ವಿವರಿಸಿದರು.      ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿದ…

ಮುಂದೆ ಓದಿ...

ಕೇರಳ-ಮಹಾರಾಷ್ಟ್ರದಿಂದ ಬರುವ ವಿದ್ಯಾರ್ಥಿ/ಪೋಷಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ತುಮಕೂರು :       ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ಯಾರಾಮೆಡಿಕಲ್/ಫಾರ್ಮಸಿ/ನರ್ಸಿಂಗ್/ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳ ಕುರಿತಂತೆ ಜಿಲ್ಲೆಯಲ್ಲಿನ ಪ್ಯಾರಾಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜು ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.       ಹೊರ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ವಿದ್ಯಾರ್ಥಿಗಳ ಮಾಹಿತಿ ಪಡೆದುಕೊಂಡು ಕಡ್ಡಾಯವಾಗಿ 24 ಗಂಟೆಯೊಳಗೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ನೆಗೆಟಿವ್ ಬಂದವರಿಗೆ ಮಾತ್ರ ಕಾಲೇಜು ಪ್ರವೇಶಾತಿ ನೀಡಬೇಕು. ಪರೀಕ್ಷೆ ಫಲಿತಾಂಶ ಬರುವವರೆಗೂ ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಶನ್ ಮಾಡಬೇಕು. ಆಯಾ ಕಾಲೇಜು ಆಡಳಿತವು ಕೇರಳ, ಮಹಾರಾಷ್ಟ್ರದಿಂದ ಬರುವ ವಿದ್ಯಾರ್ಥಿಗಳಿಂದ ಪ್ರಯಾಣದ ಮಾಹಿತಿ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳಿಂದ “ನನಗೆ…

ಮುಂದೆ ಓದಿ...