ಕೊರೋನಾ ನಿಯಂತ್ರಣಕ್ಕೆ ಹಾಟ್‍ಸ್ಪಾಟ್ ಪ್ರದೇಶಗಳನ್ನು ಗುರುತಿಸಿ  

ತುಮಕೂರು  :        ಕೋವಿಡ್- 19 ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಿಸಲು ಹಾಗೂ ಸರಪಳಿಯನ್ನು ಮುರಿಯುವ ನಿಟ್ಟಿನಲ್ಲಿ ನಗರದಲ್ಲಿ ಅತಿ ಹೆಚ್ಚು ಕೊರೋನಾ ಪ್ರಕರಣಗಳಿರುವ ಪ್ರದೇಶಗಳನ್ನು ಹಾಟ್ ಸ್ಪಾಟ್‍ಗಳಾಗಿ ಗುರುತಿಸಿ ಹೆಚ್ಚು ಎಚ್ಚರಿಕೆಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಪರೆನ್ಸ್‍ನಲ್ಲಿ ಅವರು ಮಾತನಾಡಿದರು. ನಗರದ ಗೌಡರ ಬೀದಿ, ಗಾಂಧೀ ನಗರ, ಎಸ್‍ಐಟಿ ಲೇಔಟ್, ಎಸ್.ಎಸ್.ಪುರಂ, ವಿದ್ಯಾನಗರ, ವಿವೇಕಾನಂದ ನಗರ, ಪಿ.ಎಚ್. ಕಾಲೋನಿ, ಎಸ್‍ಐಟಿ(ಅಶೋಕ್ ನಗರ), ಪಿ.ಎನ್.ಆರ್.ಪಾಳ್ಯ, ಹೌಸಿಂಗ್ ಬೋರ್ಡ್, ಅರಳೀಮರದ ಪಾಳ್ಯ, ಬನಶಂಕರಿ ರಾಘವೇಂದ್ರ ನಗರ, ಮರಳೂರು ದಿಣ್ಣೆ, ರಾಜೀವ್ ಗಾಂಧಿನಗರ ಜೈಪುರ, ಗೋಕುಲ ಬಡಾವಣೆ, ಮಾರುತಿ ನಗರ, ನೃಪತುಂಗ ಬಡಾವಣೆ, ಜಯನಗರ ಸೌತ್, ಉಪ್ಪಾರಹಳ್ಳಿ ಮಸೀದಿ ರಸ್ತೆ ಹತ್ತಿರ, ಶ್ರೀರಾಮ್ ನಗರ, ಆದರ್ಶ ನಗರಗಳನ್ನು ಹಾಟ್ ಸ್ಪಾಟ್ ಪ್ರದೇಶವೆಂದು ಗುರುತಿಸಿ ಹೆಚ್ಚು ಕ್ರಮ…

ಮುಂದೆ ಓದಿ...

ತುಮಕೂರು : ತಂಬಾಕು ಮಾರಾಟ ಮತ್ತು ಬಳಕೆ ನಿಷೇಧ

ತುಮಕೂರು :         ಕೋವಿಡ್-19 ವ್ಯಾಪಕವಾಗಿ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಆದೇಶಿಸಿದ್ದಾರೆ.         ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ ಇತ್ಯಾದಿ ಬಳಕೆ ಮಾಡಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‍ಗಳು ದೇಹವನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ಸೋಂಕು ದೇಹದ ಇತರೆ ಭಾಗಗಳಿಗೆ ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು.        ಈ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕಿತರು ಪಾನ್‍ಮಸಾಲ, ತಂಬಾಕು ಉತ್ಪನ್ನಗಳನ್ನು ಜಿಗಿದು ಉಗುಳುವುದರಿಂದ ಕೋವಿಡ್-19 ಮತ್ತೊಬ್ಬರಿಗೆ ಹರಡುವ ಸಾಧ್ಯತೆಯಿದೆ. ಆದ್ದರಿಂದ ಸಾರ್ವಜನಿಕ ಆರೋಗ್ಯ…

ಮುಂದೆ ಓದಿ...

ಹುಳಿಯಾರು : ಜಿಲ್ಲೆಯ ಗಡಿಯಲ್ಲಿ ಚೆಕ್‍ಪೋಸ್ಟ್

ಹುಳಿಯಾರು :         ಲಾಕ್‍ಡೌನ್ ನಿಯಮ ಪಾಲನೆ ಅನ್ವಯ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗಡಿ ಭಾಗವಾದ ಹುಳಿಯಾರು ಹೋಬಳಿಯ ಯಳನಾಡು, ಕೆಂಕೆರೆ ಹಾಗೂ ಹಂದನಕೆರೆ ಹೋಬಳಿಯ ದೊಡ್ಡಎಣ್ಣೇಗೆರೆಯಲ್ಲಿ ಪೊಲೀಸ್ ಚೆಕ್ ಪೋಸ್ಟ್ ತೆರೆಯಲಾಗಿದೆ.       ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಯಿಂದ ಬರುವ ಎಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಅನಗತ್ಯವಾಗಿ ಓಡಾಡುವವರನ್ನು ಎಚ್ಚರಿಸಿ ಕಳುಹಿಸಲಾಗುತ್ತಿದೆ. ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ 8 ಗಂಟೆಗೆ ಒಂದು ಬ್ಯಾಚ್‍ನಂತೆ ಪಾಳಿಯ ಪ್ರಕಾರ ಈ ಚೆಕ್ ಪೋಸ್ಟ್‍ನಲ್ಲಿ ಕೆಲಸ ಮಾಡಲಿದ್ದಾರೆ. ಬೆಳಿಗ್ಗೆ 10 ಗಂಟೆ ವರೆವಿಗೂ ವಾಹನಗಳ ಓಡಾಟಕ್ಕೆ ಅವಕಾಶವಿದ್ದು ನಂತರ ಬರುವ ವಾಹನಗಳನ್ನು ತಡೆಹಿಡಿಯಲಾಗುತ್ತದೆ. ಹಾಲು, ಹಣ್ಣು, ಧಾನ್ಯ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ವಾಹನಗಳಿಗೆ ವಿನಾಯಿತಿ ಇದೆ. ತಾಲೂಕಿನ ನಿವಾಸಿಗಳ ಬೈಕ್ ಸಂಚಾರಕ್ಕೆ ಮಾತ್ರ…

ಮುಂದೆ ಓದಿ...

ಹುಳಿಯಾರು ಪಪಂ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

 ಹುಳಿಯಾರು:         ಏ.29 ರ ಗುರುವಾರ ನಡೆಯಬೇಕಿದ್ದ ಹುಳಿಯಾರು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ಕೊರೊನಾ ನೆಪವೊಡ್ಡಿ ಸರ್ಕಾರ ಅನಿರ್ದಿಷ್ಟಾವದಿಗೆ ಮುಂದೂಡಿದೆ. ಆದರೆ ರಾಜ್ಯದಲ್ಲಿ ನಗರಸಭೆಗಳ ಸಾರ್ವತ್ರಿಕ ಚುನಾವಣೆ ನಡೆಸಿರುವ ಸರ್ಕಾರ ಪಪಂ ಅಧ್ಯಕ್ಷರ ಚುನಾವಣೆ ಮುಂದೂಡಿರುವುದು ಸಾರ್ವಜನಿಕರ ಟೀಕೆ ಹಾಗೂ ಪಪಂ ನೂತನ ಸದಸ್ಯರ ಆಕ್ಷೇಪಕ್ಕೆ ಕಾರಣವಾಗಿದೆ.       ಹುಳಿಯಾರು ಗ್ರಾಮ ಪಂಚಾಯ್ತಿಯು ಪಟ್ಟಣ ಪಂಚಾಯ್ತಿಯಾಗಿ 3 ವರ್ಷಗಳ ನಂತರ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬಾರದೆ ಅತಂತ್ರವಾಗಿತ್ತು. ಪರಿಣಾಮ ಯಾವಯಾವ ಪಕ್ಷ ಕೂಡಿಕೆ ಮಾಡಿಕೊಂಡು ಅಧಿಕಾರ ಹಿಡಿಯುವುದೋ ಎನ್ನುವ ಕುತೂಹಲ ಪಟ್ಟಣ ನಿವಾಸಿಗಳಲ್ಲಿ ಮನೆಮಾಡಿತ್ತು.       ಮೊದಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಧಿಕಾರ ಹಿಡಿಯುವ ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಒಲವು ತೋರಿದ್ದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ…

ಮುಂದೆ ಓದಿ...

ತುಮಕೂರು: ಜಿಲ್ಲೆಗೆ ನೀಡಿದ ಗೊಬ್ಬರ ಜಿಲ್ಲೆಗೆ ಮಾತ್ರ ಮೀಸಲು

ತುಮಕೂರು:       ಜಿಲ್ಲೆಗೆ ನಿಗಧಿಪಡಿಸಿದ ರಸಗೊಬ್ಬರವನ್ನು ಜಿಲ್ಲಾ ವ್ಯಾಪ್ತಿಯ ಚಿಲ್ಲರೆ ಮಾರಾಟಗಾರರಿಗೆ ಮಾತ್ರ ನೀಡಬೇಕು. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ವಿತರಣೆ ಮಾಡಬಾರದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ಸೂಚಿಸಿದರು.       ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮುಂಗಾರು ಹಂಗಾಮಿನ ಕೃಷಿ ಪರಿಕರಗಳ ಪೂರ್ವ ಸಿದ್ಧತೆ ಕುರಿತು ಕೃಷಿ ಪರಿಕರಗಳ ಸರಬರಾಜುದಾರರ ಸಭೆ ನಡೆಸಿ ಮಾತನಾಡಿದರು.       ಹಳೆಯ ರಸಗೊಬ್ಬರಗಳು (ಮಾರ್ಚ್ 21ರ ಹಿಂದಿನ ದಾಸ್ತನು) ದಾಸ್ತನು ಇದ್ದಲ್ಲಿ ಅದನ್ನು ಹಳೆಯ ದರದಲ್ಲಿ ಮಾರಾಟ ಮಾಡಬೇಕು. ಎಲ್ಲಾ ಸರಬರಾಜು ದಾರರು ಪಾಯಿಂಟ್ ಆಫ್ ಸೇಲ್ (ಪಿಓಎಸ್) ಉಪಕರಣ ಹೊಂದಿರಬೇಕು. ಪ್ರತಿ ವಹಿವಾಟನ್ನು ಪಾಯಿಂಟ್ ಆಫ್ ಸೇಲ್ (ಪಿಓಎಸ್) ಉಪಕರಣ ಮೂಲಕವೇ ನಿರ್ವಹಿಸಬೇಕು. ರೈತರಿಗೆ ಕಡ್ಡಾಯವಾಗಿ ರಶೀದಿ ನೀಡಬೇಕು. ಯಾವುದೇ ರೀತಿಯ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ರಸ…

ಮುಂದೆ ಓದಿ...

ಕೋವಿಡ್ ನಿಯಂತ್ರಣದ ಬಗ್ಗೆ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮಾಹಿತಿ

ತುಮಕೂರು:       ಕೋವಿಡ್-19 ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಡೆಸಿದ ವಿಡಿಯೋ ಕಾನ್ಪರೆನ್ಸ್ ಸಭೆಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಮೂಲಕ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಭಾಗವಹಿಸಿದ್ದರು.         ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ನಿರ್ಧಾರ ತೆಗೆದುಕೊಳ್ಳಲು ಜಿಲ್ಲಾಡಳಿತಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.       ಬೆಂಗಳೂರಿನಿಂದ ಜಿಲ್ಲೆಗೆ ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಹಳ್ಳಿಗಳಲ್ಲಿ ಸೋಂಕು ಹರಡದಂತೆ ಕ್ರಮಕೈಗೊಳ್ಳಲು ಚೆಕ್‍ಪೆÇೀಸ್ಟ್ ಸ್ಥಾಪಿಸಲು ಅನುಮತಿ ನೀಡಬೇಕೆಂದು ಕೋರಿದರು.        ಕಳೆದ ಬಾರಿಯಂತೆ ಈ ಬಾರಿಯೂ ಜಿಲ್ಲಾ ಆಸ್ಪತ್ರೆಯನ್ನು…

ಮುಂದೆ ಓದಿ...

ತುಮಕೂರು :  ಡಿಸಿ, ಎಸ್ಪಿಯಿಂದ ಕಫ್ರ್ಯೂ ಪರಿಶೀಲನೆ

ತುಮಕೂರು :         ಕೋವಿಡ್ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ವಯ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿರುವ ಕಫ್ರ್ಯೂ ಕುರಿತು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಕೆ.ವಂಶಿಕೃಷ್ಣ ಅವರು ತುಮಕೂರು ನಗರದಲ್ಲಿ ಪರಿಶೀಲನೆ ನಡೆಸಿದರು.       ನಗರದ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ ಸೇರಿದಂತೆ ನಗರದ ವಿವಿಧೆಡೆ ಸಂಚರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಪರಿಶೀಲನೆ ನಡೆಸಿ, ವಾಹನಗಳ ತಪಾಸಣೆ ಮಾಡಿದರು. ಇದಕ್ಕೂ ಮುನ್ನ ಕಫ್ರ್ಯೂ ಸಮಯದಲ್ಲಿ ಜನರು ಹಾಗೂ ವಾಹನಗಳ ಸಂಚಾರದ ಮೇಲೆ ನಿಗಾವಹಿಸಲು ಡ್ರೋನ್ ಕ್ಯಾಮರಾಕ್ಕೆ ಚಾಲನೆ ನೀಡಿದರು.

ಮುಂದೆ ಓದಿ...

ಕೋವಿಡ್ ತಡೆಯಲು ಸಾಮೂಹಿಕ ಸಾನಿಟೈಜಿಂಗ್‍ಗೆ ಮುಂದಾದ ಪಾಲಿಕೆ

ತುಮಕೂರು:       ನಗರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳದ ಸಹಕಾರದೊಂದಿಗೆ ನಗರದ ವಿವಿಧಡೆ ಸಾನಿಟೈಜರ್ ಸಿಂಪಡಿಸುವ ಕಾರ್ಯ ನಡೆದಿದ್ದು, ಬುಧವಾರ 15ನೇ ವಾರ್ಡಿನ ಸಿಎಸ್‍ಐ ಲೇಔಟ್‍ನಲ್ಲಿ ರಸ್ತೆಗಳಿಗೆ ಸಾನಿಟೈಜರ್ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.       ಬೆಂಗಳೂರು ನಗರಕ್ಕೆ ಹತ್ತಿರವಾಗಿರುವ ತುಮಕೂರು ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರಪಾಲಿಕೆ ಆರೋಗ ಸ್ಥಾಯಿ ಸಮಿತಿಯ ಸಭೆಯಲ್ಲಿ ಪ್ರಕರಣ ಹೆಚ್ಚಿರುವ ಬಡಾವಣೆಗಳಿಗೆ ಸಾನಿಟೈಜರ್ ನಡೆಸಲು ತೀರ್ಮಾನ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣ, ನಗರಪಾಲಿಕೆಗಳಿಗೆ ಹತ್ತಿರದಲ್ಲಿಯೇ ಇರುವ, ವ್ಯಾಪಾರಸ್ಥರ ಕುಟುಂಬಗಳೇ ವಾಸವಾಗಿರುವ ಸಿಎಸ್‍ಐ ಬಡಾವಣೆಗೆ ಸಾನಿಟೈಜರ್ ಸಿಂಪಡಿಸುವ ಕಾರ್ಯ ಕೈಗೊಳ್ಳಲಾಯಿತು.        ಈ ವೇಳೆ ಮಾತನಾಡಿದ ನಗರಪಾಲಿಕೆ 15ನೇ ವಾರ್ಡಿನ ಕೌನ್ಸಿಲರ್ ಶ್ರೀಮತಿ ಗಿರಿಜಾ ಧನಿಯಕುಮಾರ್ ಮಾತನಾಡಿ, ಸಿಎಸ್‍ಐ ಲೇಔಟ್‍ನಲ್ಲಿ 9…

ಮುಂದೆ ಓದಿ...

ಹುಳಿಯಾರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ

 ಹುಳಿಯಾರು :          ಕೊರೊನಾ ನಿಯಂತ್ರಣಕ್ಕೆ ಹುಳಿಯಾರು ಪಟ್ಟಣ ಪಂಚಾಯಿತಿ ವತಿಯಿಂದ ವ್ಯಾಪ್ತಿಯಲ್ಲಿ ರೋಗ ನಿರೋಧಕ ಸಿಂಪಡಣೆ ಮತ್ತು ಅಂಗಡಿಗಳಲ್ಲಿ ಖರೀದಿಗೆ ಅಂತರ ಕಾಯ್ದುಕೊಳ್ಳಲು ಗುರುತು ಮಾಡಲಾಯಿತು.       ಹುಳಿಯಾರು ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ವಾರದಿಂದ ಹೆಚ್ಚಾಗಿರುವುದರಿಂದ ನಿವಾಸಿಗಳು ಭಯಭೀತರಾಗಿದ್ದಾರೆ. ಹಾಗಾಗಿ ಪ್ರಥಮ ಹಂತದಲ್ಲಿ ಸೋಂಕು ತಗುಲಿರುವ ವ್ಯಕ್ತಿಯ ಮನೆಯ ಸುತ್ತ ಸ್ಯಾನಿಟೈಸರ್ ಮಾಡಲಾಗಿತ್ತು.       ಎರಡನೇ ಹಂತವಾಗಿ ಹುಳಿಯಾರು ಪಟ್ಟಣದಲ್ಲಿನ ಅಂಗಡಿ, ಮುಂಗಟ್ಟು, ದೇವಸ್ಥಾನ ಆವರಣ, ರಸ್ತೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಸಿಂಪಡಣೆ ಮಾಡಲಾಯಿತು. ನಂತರ ಬಡಾವಣೆಗಳಲ್ಲಿ ಸಿಂಪಡಣೆ ಮಾಡಲಾಗುವುದು.        ಬೆಳಗ್ಗೆ 6 ರಿಂದ 10 ಗಂಟೆಯವರೆವಿಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿರುವುದರಿಂದ ಪಟ್ಟಣದಲ್ಲಿ ಜನಸಂದಣೆ ಹೆಚ್ಚಾಗುತ್ತದೆ. ಹಾಗಾಗಿ ವ್ಯಾಪಾರಕ್ಕೆ ಬರುವ ಜನರಲ್ಲಿ ಅಂತರ…

ಮುಂದೆ ಓದಿ...

ತುಮಕೂರು :ಕಫ್ರ್ಯೂ ಮಾರ್ಗಸೂಚಿ ಪಾಲಿಸಲು ಡಿಸಿ ಸೂಚನೆ

ತುಮಕೂರು:          ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಏಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮಾರ್ಚ್ 12ರ ಬೆಳಿಗ್ಗೆ 6ಗಂಟೆಯವರೆಗೆ ಜಾರಿಗೊಳಿಸಿರುವ ಕಫ್ರ್ಯೂ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.          ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಮೂಲಕ ತಹಸೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕಿನ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ ಅವರು ಸೂಚನೆಗಳನ್ನು ನೀಡಿದರು.          ಕಫ್ರ್ಯೂ ಅವಧಿಯಲ್ಲಿ ಮಾರ್ಗಸೂಚಿಗಳು ಉಲ್ಲಂಘನೆಯಾಗದಂತೆ ಯಾವ್ಯಾವ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆಯೋ ಅವುಗಳಿಗೆ ಅವಕಾಶ ಮಾಡಿಕೊಡಿ. ಅನಗತ್ಯವಾಗಿ ತಿರುಗಾಡುವವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ನಿರ್ದೇಶಿಸಿದರು.        ಯಾವುದೇ ಕಾರಣಕ್ಕೂ ಯಾವುದಕ್ಕೂ ಯಾರಿಗೂ…

ಮುಂದೆ ಓದಿ...