ನೂತನ ಸಿಇಓ ಆಗಿ ವಿದ್ಯಾಕುಮಾರಿ ಕೆ. ಅಧಿಕಾರ ಸ್ವೀಕಾರ

 ತುಮಕೂರು  :        ತುಮಕೂರು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರು ಗುರುವಾರ ಅಧಿಕಾರ ವಹಿಸಿಕೊಂಡರು.       ನಿಕಟಪೂರ್ವ ಸಿಇಓ ಜಿ.ಎಂ.ಗಂಗಾಧರಸ್ವಾಮಿ ಅವರಿಂದ ನೂತನ ಸಿಇಓ ವಿದ್ಯಾಕುಮಾರಿ.ಕೆ ಅವರು ಅಧಿಕಾರ ಸ್ವೀಕರಿಸಿದರು.

ಮುಂದೆ ಓದಿ...

ತುಮಕೂರು : ಶಿವಕುಮಾರ ಸ್ವಾಮೀಜಿಯವರ 114ನೇ ಜನ್ಮ ಜಯಂತಿ

ತುಮಕೂರು :         ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಬದುಕಿಗೆ ಬೆಳಕಾಗಿದ್ದ ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಹೆಸರುವಾಸಿಯಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 114ನೇ ಜನ್ಮ ಜಯಂತಿಯನ್ನು ಯಾವುದೇ ಅದ್ದೂರಿ, ಆಡಂಬರ ಇಲ್ಲದೆ ಅತ್ಯಂತ ಸರಳವಾಗಿ ಎಂದಿನಂತೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.       ಮಹಾಮಾರಿ ಕೊರೊನಾ 2ನೇ ಅಲೆ ಹರಡದಂತೆ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ಲಿಂಗೈಕ್ಯ ಶ್ರೀಗಳ 114ನೇ ಜನ್ಮ ಜಯಂತಿ ಅದ್ದೂರಿ ಆಚರಣೆ ಇಲ್ಲದೆ ಎಂದಿನಂತೆ ಶ್ರೀಗಳ ಗದ್ದುಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹರಗುರುಚರಮೂರ್ತಿಗಳ ಸಮ್ಮುಖದಲ್ಲಿ ರುದ್ರಾಭಿಷೇಕ ಹಾಗೂ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮುಂಜಾನೆಯೇ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಇಷ್ಟಲಿಂಗ ಪೂಜೆ ನೆರವೇರಿಸಿ ಶ್ರೀಗಳ ಗದ್ದುಗೆಗೆ…

ಮುಂದೆ ಓದಿ...

ಭೂ-ಸ್ವಾಧೀನಕ್ಕೆ ಹೆಚ್ಚಿನ ಪರಿಹಾರ ಒದಗಿಸಲಾಗುವುದು;ಸಚಿವ

 ತುಮಕೂರು  :        ಜಿಲ್ಲೆಯ ಗುಬ್ಬಿ ತಾಲೂಕಿನ ಬಿಕ್ಕೆಗುಡ್ಡ ಕುಡಿಯುವ ನೀರು ಯೋಜನೆಗೆ ಭೂ ಸ್ವಾಧೀನ ಮಾಡಿಕೊಳ್ಳುವ ಜಮೀನಿಗೆ ಹಾಗೂ ಗಿಡ-ಮರ ಬೆಳೆಗಳಿಗೆ ಹೆಚ್ಚಿನ ಪರಿಹಾರ ಒದಗಿಸಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಬಿಕ್ಕೆಗುಡ್ಡ ಕುಡಿಯುವ ನೀರಿನ ಯೋಜನೆಯ ಸಂಬಂಧ ಆ ಭಾಗದ ರೈತರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರಂಭದಲ್ಲಿ ತೆರೆದ ಕಾಲುವೆ ಮೂಲಕ ನೀರು ಹರಿಸಲು 15 ಮೀಟರ್ ಭೂ-ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಈಗ ಪೈಪ್ ಲೈನ್ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ 6 ಮೀಟರ್ ಭೂಮಿಯನ್ನು ಮಾತ್ರ ಸ್ವಾಧೀನ ಪಡಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.       ನೀರು ಹರಿಸುವ ಪೈಪ್‍ಲೈನ್ ಕಾಮಗಾರಿ ವೇಳೆ ಜಮೀನಿನಲ್ಲಿರುವ ಗಿಡ-ಮರ, ಬೆಳೆಗಳಿಗೆ…

ಮುಂದೆ ಓದಿ...