45ವರ್ಷ ಮೇಲ್ಪಟ್ಟವರು ಕೋವಿಡ್ ಲಸಿಕೆ ಪಡೆಯುವಂತೆ ಮನವಿ

ತುಮಕೂರು :        ರಾಷ್ಟ್ರದಾದ್ಯಂತ ಆತಂಕದ ಅಲೆ ಸೃಷ್ಟಿಸಿರುವ ಕೋವಿಡ್-19 ಎರಡನೇ ಅಲೆಯನ್ನು ಸಮರ್ಪಕವಾಗಿ ತಡೆಯುವ ನಿಟ್ಟಿನಲ್ಲಿ 45 ವರ್ಷ ಮೇಲ್ಮಟ್ಟ ಪ್ರತಿಯೊಬ್ಬರು ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಶಾರದ ನರಸಿಂಹಮೂರ್ತಿ ಮನವಿ ಮಾಡಿದ್ದಾರೆ.     45 ವರ್ಷ ತುಂಬಿದ ಎಲ್ಲರೂ ಲಸಿಕೆಯನ್ನು ಸ್ವಯಂ ಪ್ರೇರಿತವಾಗಿ ಪಡೆದುಕೊಂಡು ಕೋವಿಡ್ ಮಹಾಮಾರಿಯನ್ನು ದೇಶದಿಂದ ತೊಲಗಿಸಿ, ದೇಶವನ್ನು ಅಭಿವೃದ್ದಿ ಪಥದತ್ತ ತೆಗೆದುಕೊಂಡು ಹೋಗಲು ಸಹಕರಿಸುವಂತೆ ಮನವಿ ಮಾಡಿದರು.       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಮಾತನಾಡಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಶಾರದ ನರಸಿಂಹಮೂರ್ತಿ ಹಾಗೂ ಗೂಳೂರು ಜಿ.ಪಂ ಕ್ಷೇತ್ರದ ಸದಸ್ಯ ಶಿವಕುಮಾರ್ ಲಸಿಕೆ ಪಡೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸರಕಾರದ ತೀರ್ಮಾನದಂತೆ ಶೇ.25ರಷ್ಟು ಜನರಿಗೆ ಲಸಿಕೆ ನೀಡಬೇಕೆಂಬ ಅಭಿಯಾನಕ್ಕೆ ಪುಷ್ಠಿ ದೊರೆತಂತಾಗಿದೆ. ಇದೇ ಮಾದರಿಯಲ್ಲಿ 45…

ಮುಂದೆ ಓದಿ...

ಅನರ್ಹ ಪಡಿತರ ಚೀಟಿ ಹಿಂದಿರುಗಿಸಿ : ಜಿಲ್ಲಾಧಿಕಾರಿ ಮನವಿ

ತುಮಕೂರು :        ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅನರ್ಹರು ಹೊಂದಿರುವ ಅಂತ್ಯೋದಯ, ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಗಳನ್ನು ಹಿಂದಿರುಗಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮನವಿ ಮಾಡಿದ್ದಾರೆ.        ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳು ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆಯನ್ನು ಪಾವತಿಸುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‍ಗಿಂತ ಹೆಚ್ಚಿನ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶ ಹೊರತುಪಡಿಸಿ ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಮನೆ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತ…

ಮುಂದೆ ಓದಿ...