ಶಿರಾ: ಕೊಲೆ ನಡೆದ 24 ಗಂಟೆಯೊಳಗೆ ಆರೋಪಿಯ ಬಂಧನ

ಶಿರಾ:       ಏ.5ರಂದು ಬೆಳಿಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಶಿರಾ ತಾಲ್ಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣಾ ಸರಹದ್ದು ದೊಡ್ಡಗೂಳ ಗ್ರಾಮದಲ್ಲಿ ಕುಮಾರಿ ಕಾವ್ಯ ಬಿನ್ ಪಾಂಡುರಂಗಪ್ಪ ದೊಡ್ಡಗೂಲ ರವರು ಮನೆಯಿಂದ ಶಿರಾ ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದಾಗ ಅದೇ ಗ್ರಾಮದ ವಾಸಿ ಆರೋಪಿ ಈರಣ್ಣ ಎಂಬಾತನು ಬೈಕ್ ನಿಲ್ಲಿಸಿ ಕಾಲೇಜಿಗೆ ಹೋಗುತ್ತಿದ್ದ ಕಾವ್ಯಳನ್ನು ದೊಡ್ಡಗೂಳ ಕೆರೆಯ ಪಕ್ಕದಲ್ಲಿರುವ ಮಲ್ಲಯ್ಯರವರ ಬಾಬ್ತು ಸೀಮೆ ಜಾಲಿಗಿಡಗಳು ಬೆಳೆದಿರುವ ಜಮೀನಿಗೆ ಎಳೆದುಕೊಂಡು ಹೋಗಿ ತನ್ನ ಕೈನಲ್ಲಿದ್ದ ಕುಡುಗೋಲಿನಿಂದ ಆಕೆಯ ಮುಖ, ಕತ್ತು ಮತ್ತು ಕೈಗಳನ್ನು ಕೊಚ್ಚಿ ಕೊಲೆ ಮಾಡಿ ಕುಡುಗೋಲಿನ ಸಮೇತ ಓಡಿ ಹೋಗಿದ್ದು ಈ ಸಂಬಂಧ ಕಳ್ಳಬೆಳ್ಲ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.       ಸದರಿ ಕೊಲೆ ಪ್ರಕರಣದ ಪತ್ತೆಗಾಗಿ ಸಿಪಿಐಶಿರಾ ಗ್ರಾಮಾಂತರ ವೃತ್ತ ರವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು, ಸದರಿ ತಂಡವು…

ಮುಂದೆ ಓದಿ...

ತುಮಕೂರು: ಸಾರಿಗೆ ನೌಕರರ ಮುಷ್ಕರ : ಜಿಲ್ಲೆಗೂ ಮುಟ್ಟಿದ ಬಿಸಿ

ತುಮಕೂರು:       ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಸಂಘಟನೆ ಮುಷ್ಕರ ಕರೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಸ್ಥಗಿತವಾಗಿದೆ. ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಖಾಸಗಿ ಬಸ್ಸುಗಳು ಕಾರ್ಯಾಚರಣೆ ನಡೆಸುತ್ತಿದ್ದರೂ, ಪ್ರಯಾಣಿಕರಿಗೆ ಸಂಪೂರ್ಣ ತೃಪ್ತಿಕರ ಸೇವೆ ನೀಡಲು ಸಾಧ್ಯವಾಗಿಲ್ಲ. ಸಾರ್ವಜನಿಕರು ಎಂದಿನಂತೆ ಶಾಲಾ, ಕಾಲೇಜು, ಸರಕಾರಿ ಮತ್ತು ಖಾಸಗಿ ಕಚೇರಿಗಳಿಗೆ ತೆರಳಲು ಬಸ್ ನಿಲ್ದಾಣಕ್ಕೆ ಆಗಮಿಸಿದ್ದು, ಸರಕಾರಿ ಬಸ್ಸುಗಳಿಲ್ಲದೆ, ಅವುಗಳ ಸ್ಥಾನದಲ್ಲಿದ್ದ ಬೆರಳೆಣಿಕೆಯ ಖಾಸಗಿ ಬಸ್ಸುಗಳಿಗೆ ಹತ್ತಬೇಕೆ, ಬೇಡವೆ ಎಂಬ ಗೊಂದಲದಲ್ಲಿಯೇ ಇದ್ದಂತೆ ಕಂಡಬಂದಿದೆ. ಕೆಲವರು ಖಾಸಗಿ ಬಸ್ಸುಗಳಿಗೆ ಹತ್ತಲು ಹಿಂದೇಟು ಹಾಕಿರುವುದು ಕಂಡು ಬಂದಿದೆ.       ನಗರದಿಂದ ತುಮಕೂರು ಜಿಲ್ಲೆಯ 9 ತಾಲೂಕು ಕೇಂದ್ರಗಳಾದ ತಿಪಟೂರು, ಕುಣಿಗಲ್, ಪಾವಗಡ, ಮಧುಗಿರಿ, ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಶಿರಾ, ಗುಬ್ಬಿ, ತುರುವೇಕೆರೆಗಳಿಗೆ ತೆರೆಳಲು ಸರಿಯಾದ ಬಸ್ಸುಗಳಿಲ್ಲದ ಪ್ರಯಾಣಿಕರು ಪರದಾಡುವಂತಾಗಿದೆ. ಸಾರಿಗೆ…

ಮುಂದೆ ಓದಿ...

ರೈತ ಮಕ್ಕಳಿಗೆ ಉಚಿತ ಬಸ್‍ಪಾಸ್ ನೀಡುವ ಭರವಸೆ ನೀಡಿದ ರಾಜಣ್ಣ

ಮಧುಗಿರಿ:       ಜಿಲ್ಲೆಯಲ್ಲಿರುವ ರೈತ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲು ಉಚಿತ ಬಸ್ ಪಾಸ್ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ಎನ್ ರಾಜಣ್ಣ ತಿಳಿಸಿದರು.       ಪಟ್ಟಣದಲ್ಲಿರುವ ಸ್ವಗೃಹದಲ್ಲಿ ಗುರುವಾರ ವಿಎಸ್ಸೆಸ್ಸೆನ್ ಕಾರ್ಯದರ್ಶಿಯಾಗಿ ಟಿ ವಿ ಎಸ್ ಮಂಜುನಾಥ್ ಅವರನ್ನು ನೇಮಿಸಿದ ಹಿನ್ನೆಲೆಯಲ್ಲಿ ಮರುವೇಕೆರೆ, ಗಂಜಲಗುಂಟೆ, ವಿಎಸ್ಸೆಸ್ಸೆನ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಕೆ.ಎನ್ ರಾಜಣ್ಣರನ್ನು ಅಭಿನಂದಿಸಿದ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.        ರೈತರಿಗೆ ಮತ್ತು ಅತಿ ಸಣ್ಣ ರೈತರಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ನೀಡಲಾಗುವ ಸಾಲ ಪಡೆದು ಮೀಟರ್ ಬಡ್ಡಿಯಿಂದ ಪಾರಾಗಿ ಅಭಿವೃದ್ಧಿ ಹೊಂದುವಂತೆ ತಿಳಿಸಿ, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ರೈತರಿಗೂ ಸಾಲ ನೀಡಲಾಗುವುದು. ಡಿಸಿಸಿ ಬ್ಯಾಂಕ್ ವತಿಯಿಂದ ಈಗಾಗಲೇ ಮೃತಪಟ್ಟ ರೈತರ ಕುಟುಂಬದ 1ಲಕ್ಷದವರೆಗಿನ ಸಾಲ ಮನ್ನಾ ಮಾಡಲಾಗುತ್ತಿದ್ದು, ಕೊರೋನಾ…

ಮುಂದೆ ಓದಿ...

ತುಮಕೂರು : ಕೊರೋನ ಲಸಿಕೆ ಆಂದೋಲನಕ್ಕೆ ಶಾಸಕರಿಂದ ಚಾಲನೆ

ತುಮಕೂರು:       ನಗರದ ರೈಲ್ವೆ ನಿಲ್ದಾಣ ರಸ್ತೆಯ ಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಿರುವ ಕೋವಿಡ್ ಲಸಿಕೆ ಹಾಕುವ ಕೇಂದ್ರದಲ್ಲಿ 2ನೇ ಹಂತದ ಲಸಿಕೆ ನೀಡುವ ಕಾರ್ಯಕ್ಕೆ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಚಾಲನೆ ನೀಡಿದರು.       ನಗರಪಾಲಿಕೆ, ಆರೋಗ್ಯ ಇಲಾಖೆ ಹಾಗೂ 15ನೇ ವಾರ್ಡಿನ ಕಾರ್ಪೋರೇಟರ್ ಗಿರಿಜಾ ಧನಿಯಕುಮಾರ್ ಅವರ ಒತ್ತಾಸೆಯ ಮೇರೆಗೆ ನಗರದ ಐದಾರು ವಾರ್ಡುಗಳಿಗೆ ಕೇಂದ್ರ ಸ್ಥಾನದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಸಿಕಾ ಕೇಂದ್ರ ಆರಂಭಗೊಂಡಿದ್ದು, 74 ವರ್ಷದ ಸರಸ್ವತಿ ಎಂಬ ಮಹಿಳೆಯೊಬ್ಬರಿಗೆ ಲಸಿಕೆ ನೀಡುವ ಮೂಲಕ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಯಿತು.        ಈ ವೇಳೆ ಮಾತನಾಡಿದ ಶಾಸಕ ಜಿ.ಬಿ. ಜೋತಿಗಣೇಶ್, ಸಾರ್ವಜನಿಕರ ಹಿತದೃಷ್ಟಿಯಿಂದ ಕಾಲೇಜಿನ ಪ್ರಾಂಶುಪಾಲ ರಾದ ಪ್ರೊ.ಜಗದೀಶ್ ಅವರು ಒಂದು ಕೊಠಡಿಯನ್ನು ಲಸಿಕಾ ಕೇಂದ್ರವಾಗಿ ಬಳಸಿಕೊಳ್ಳಲು…

ಮುಂದೆ ಓದಿ...

ಬಿಜೆಪಿ ಶಾಸಕ ಮಸಾಲೆ ಜಯರಾಮ್ ಪುತ್ರನ ಹತ್ಯೆಗೆ ಯತ್ನ

ತುಮಕೂರು :        ತುರುವೇಕೆರೆ ಶಾಸಕ ತೇಜು ಮಸಾಲೆ ಮಾಲೀಕ ಹಾಗೂ ಕರ್ನಾಟಕ ಸಾಂಬಾರ ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಸಾಲೆ ಜಯರಾಮ್ ಅವರ ಪುತ್ರ ತೇಜು ಜಯರಾಂ ಅವರ ಮೇಲೆ ಮಂಗಳವಾರ ರಾತ್ರಿ ಹತ್ಯೆಗೆ ಪ್ರಯತ್ನ ನಡೆದಿದೆ. ಬೆಂಗಳೂರಿನಿಂದ ತುರುವೇಕೆರೆಯ ಅಂಕಲಕೊಪ್ಪ ಗ್ರಾಮಕ್ಕೆ ತೆರಳುತ್ತಿದ್ದ ತೇಜು ಅವರ ಮೇಲೆ ಗುಬ್ಬಿ ತಾಲ್ಲೂಕಿನ ನೆಟ್ಟೆಕೆರೆ ಬಳಿ ದಾಳಿ ನಡೆದಿದೆ.        ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತೇಜು ಅವರನ್ನು ಮಾರ್ಗ ಮಧ್ಯದಲ್ಲಿ ಅಡ್ಡಗಟ್ಟಿದ ಕಿಡಿಗೇಡಿಗಳು ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ. ದಾಳಿಯ ಉದ್ದೇಶ ಅರಿತ ತೇಜು ಜಯರಾಮ್ ಕೂಡಲೇ ಎಚ್ಚೆತ್ತು ಕಿಡಿಗೇಡಿಗಳಿಂದ ತಪ್ಪಿಸಿಕೊಂಡಿದ್ದಾರೆ. ಕೂಡಲೇ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ದಾಳಿಕೋರರು ತಾವು ಬಂದಿದ್ದ ಎರಡು ಕಾರುಗಳನ್ನು ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾರೆ.        ದಾಳಿಕೋರರ ಕಾರಿನಲ್ಲಿ ಕಾರದ…

ಮುಂದೆ ಓದಿ...