ತುಮಕೂರು : ಕೋವಿಡ್ ಕೇರ್ ಸೆಂಟರ್’ಗೆ ಚಾಲನೆ

 ತುಮಕೂರು :        ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಳಕಳಿಗಾಗಿ ಸಿದ್ಧಗಂಗಾ ಮಠದ ವತಿಯಿಂದ ಸಿದ್ಧಗಂಗಾ ಆಸ್ಪತ್ರೆ ಸಹಯೋಗದೊಂದಿಗೆ ಶ್ರೀ ಸಿದ್ಧಗಂಗಾ ಮಠ ಕೋವಿಡ್ ಕೇರ್ ಸೆಂಟರ್ ಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿಯವರು ಹಾಗೂ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ಚಾಲನೆ ನೀಡಿದರು. ಸದರಿ ಕೋವಿಡ್ ಕೇರ್ ಸೆಂಟರ್ ಅನ್ನು ಸಿದ್ಧಗಂಗಾ ಮಠದ ಮುಖ್ಯರಸ್ತೆಯಲ್ಲಿರುವ ಯಾತ್ರಿ ನಿವಾಸದಲ್ಲಿ ತೆರೆಯಲಾಗಿದ್ದು 80 ಹಾಸಿಗೆಯುಳ್ಳದ್ದಾಗಿದೆ. ಜಿಲ್ಲಾ ಆಸ್ಪತ್ರೆಯಿಂದ ಸೂಚಿತಗೊಳ್ಳುವ ಕೋವಿಡ್ ಸೋಂಕಿತರಿಗೆ ಐಸೋಲೇಶನ್ ವ್ಯವಸ್ಥೆ ಮಾಡಲಾಗಿದ್ದು ಇಲ್ಲಿ ನೀಡಲಾಗುವ ಊಟ,ಔಷಧಿ ಸೇರಿದಂತೆ ಪ್ರತಿಯೊಂದು ಸೌಲಭ್ಯವೂ ಉಚಿತವಾಗಿರಲಿದೆ. ಜೊತೆಗೆ ತುರ್ತು ಸಂದರ್ಭದಲ್ಲಿ ಬಳಕೆಯಾಗುವಂತೆ ಸೀಮಿತ ಆಕ್ಸಿಜನ್ ವ್ಯವಸ್ಥೆ ಕೂಡ ಮಾಡಲಾಗಿದ್ದು ಸೋಮವಾರದಿಂದಲೇ ಸೋಂಕಿತರಿಗೆ ಲಭ್ಯವಾಗಿದೆ.       ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾಧಿಕಾರಿ…

ಮುಂದೆ ಓದಿ...

ತುಮಕೂರು : ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ : ಮೂವರ ಬಂಧನ

ತುಮಕೂರು :        ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ರೆಮಿಡಿಸಿವಿರ್ ಮಾರಾಟ ಮಾರುತ್ತಿದ್ದ ಸಿದ್ದಗಂಗಾ ಆಸ್ಪತ್ರೆಯ ಇಬ್ಬರು ಸಿಬ್ಬಂದಿ ಸೇರಿ ಮೂವರನ್ನು ಪೆÇಲೀಸರು ಬಂಧಿಸಿದ್ದಾರೆ.        ಸಿದ್ದಗಂಗಾ ಆಸ್ಪತ್ರೆಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸೈಯದ್ ಹರ್ಷದ್, ಸಿದ್ದಗಂಗಾ ಆಸ್ಪತ್ರೆಯಲ್ಲಿ ಸಿಟಿ ಎಕ್ಸ್‍ರೇ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಖೀಬ್, ಸೂರ್ಯ ಆಸ್ಪತ್ರೆಯಲ್ಲಿ ಒಟಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ರಂಗನಾಥ ಬಂಧಿತರು. ಸೋಂಕಿತರಿಗೆ ಅಗತ್ಯವಿರುವ ರೆಮಿಡಿಸಿವಿರ್ ಇಂಜೆಕ್ಷನ್ ಅನ್ನು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತುಮಕೂರು ಪೆÇಲೀಸರು ದಾಳಿ ನಡೆಸಿದ್ದರು. ನಗರದ ಗುಂಚಿ ವೃತ್ತದಲ್ಲಿ ಆರೋಪಿಗಳನ್ನು ಬಂಧಿಸಿ 3 ರೆಮಿಡಿಸಿವರ್ ಇಂಜೆಕ್ಷನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು 4700 ರೂ. ಬೆಲೆ ಬಾಳುವ ಇಂಜೆಕ್ಷನ್‍ಗಳನ್ನು 17 ಸಾವಿರ ರೂ. ಗೆ ಮಾರಾಟ ಮಾಡುತ್ತಿದ್ದರು. ಈ ಸಂಬಂಧ ನಗರ ಪೆÇಲೀಸ್…

ಮುಂದೆ ಓದಿ...

ತುಮಕೂರು : ಕೋವಿಡ್-19 ನಿಯಂತ್ರಣ : ಉಸ್ತುವಾರಿ ಸಚಿವರಿಂದ ಪರಿಶೀಲನೆ

ತುಮಕೂರು :         ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಎಲ್ಲಾ ಕ್ಷೇತ್ರಗಳ ಶಾಸಕರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೋವಿಡ್-19 ನಿಯಂತ್ರಣದ ಹಿನ್ನೆಲೆಯಲ್ಲಿ ಕೈಗೊಂಡಿರುವ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದರು.        ತಾಲೂಕುಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ, ಆಮ್ಲಜನಕ ಮತ್ತು ರೆಮಿಡಿಸಿವರ್ ಸಮರ್ಪಕವಾಗಿ ಲಭ್ಯವಾಗುತ್ತಿರುವ ಮತ್ತು ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ಹಳ್ಳಿಗಳಲ್ಲಿ ಕೋವಿಡ್ ವ್ಯಾಪಕವಾಗುವುದಕ್ಕೆ ಕಡಿವಾಣ ಹಾಕಬೇಕು. ಹಾಗಾಗಿ ಹೋಂ ಕ್ವಾರಂಟೈನ್‍ನಲ್ಲಿರುವ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್‍ಗೆ ಸ್ಥಳಾಂತರಿಸಬೇಕು. ಹೋಂ ಕ್ವಾರಂಟೈನ್‍ನಲ್ಲಿರುವ ಸೋಂಕಿತರ ಮನೆಯವರ ಸ್ವಾಬ್ ಸಂಗ್ರಹ ಮಾಡಿ ವರದಿ ಬರುವವರೆಗೂ ಅವರನ್ನು ಕ್ವಾರಂಟೈನ್ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಆರ್ ಟಿಪಿಸಿಆರ್ ವರದಿ ಇಲ್ಲದೇ ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಇತರೆ…

ಮುಂದೆ ಓದಿ...

ಕೊರೋನಾ ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಸೆಂಟರ್‍ಗೆ ಸೇರಿಸಿ – ಜೆಸಿಎಂ

ಮಧುಗಿರಿ:       ಇತ್ತೀಚಿಗೆ ಕೋವಿಡ್ ಪಾಸಿಟಿವ್ ಬಂದಂತಹವರನ್ನು ಕೋವಿಡ್ ಕೇರ್ ಸೆಂಟರ್‍ಗೆ ಸೇರಿಸಿ ಆರೈಕೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ನಿರೀಕ್ಷಣಾ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ತಾಲೂಕಿನಲ್ಲಿ ಕೊರೋನ ಹರಡದಂತೆ ತೆಗೆದುಕೊಂಡಿರುವ ಮುಂಜಾ ಗ್ರತಾ ಕ್ರಮಗಳ ಬಗ್ಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.       ತಾಲೂಕಿನಲ್ಲಿ ನಾಲ್ಕು ಗ್ರಾಮ ಪಂಚಾಯತಿ ಮತ್ತು ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಅಧಿಕ ಸೋಂಕಿತರು ಪತ್ತೆಯಾಗಿರುವುದರಿಂದ ಹಾಟ್ ಸ್ಪಾಟ್ ಗಳೆಂದು ಗುರುತಿಸಲಾಗಿದೆ. ಮಧುಗಿರಿ ಪುರಸಭಾ ವ್ಯಾಪ್ತಿಯ ಶ್ರೀನಿವಾಸ ಬಡಾವಣೆ ಮಧುಗಿರಿ ಪುರಸಭಾ ವ್ಯಾಪ್ತಿಯ ಶ್ರೀನಿವಾಸ ಬಡಾವಣೆ, ಕೆ.ಆರ್ ಬಡಾವಣೆ, ರಾಘವೇಂದ್ರ ಕಾಲೋನಿ, ಮತ್ತು ತಾಲೂಕಿನ ಮಿಡಿಗೇಶಿ ಬ್ಯಾಲ್ಯಾ , ದೊಡ್ಡೇರಿ , ಚಂದ್ರಗಿರಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚು ಸೋಂಕಿತರು ಕಂಡು ಬಂದಿರುವುದರಿಂದ ಹಾಟ್‍ಸ್ಪಾಟ್‍ಗಳಾಗಿ ಘೋಷಿಸಲಾಗಿದ್ದು, ಗ್ರಾಮಾಂತರ ಭಾಗದಲ್ಲಿರುವ ಹಾಟ್ ಸ್ಪಾಟ್‍ನಲ್ಲಿರುವ ಸೋಂಕಿತರನ್ನು ತಕ್ಷಣವೇ…

ಮುಂದೆ ಓದಿ...