45 ವರ್ಷ ಮೇಲ್ಪಟ್ಟ ವಿಕಲಚೇತನ- ಹಿರಿಯ ನಾಗರೀಕರಿಗೆ ಲಸಿಕೆ

 ತುಮಕೂರು  :     ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರು ಹಿರಿಯ ನಾಗರೀಕರು ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಉಚಿತವಾಗಿ ಕೋವಿಡ್ ಲಸಿಕೆ ಪಡೆಯಬೇಕು ಎಂದು ಜಿಲ್ಲಾ ವಿಕಲಚೇತನ ಹಾಗೂ ಹಿರಿಯನಾಗರೀಕರ ಕಲ್ಯಾಣಾಧಿಕಾರಿ ರಮೇಶ್.ಎಮ್. ಮನವಿ ಮಾಡಿದ್ದಾರೆ.        ಅಲ್ಲದೇ, 18 ವರ್ಷ ಪೂರ್ಣಗೊಂಡ ವಿಕಲಚೇತನರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಾಲತಾಣ <https://www.cowin.gov.in/home> ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿ ಕೋವಿಡ್ ಲಸಿಕೆ ಪಡೆಯುವಂತೆ ತಿಳಿಸಿದ್ದಾರೆ.

ಮುಂದೆ ಓದಿ...

ತುಮಕೂರು : ಕೋವಿಡ್ನೇ 2 ಅಲೆ ನಿಯಂತ್ರಣಕ್ಕೆ ಪಾಲಿಕೆಯಿಂದ ಕ್ರಮ

        ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆ ವತಿಯಿಂದ ಹಲವಾರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೇಯರ್ ಬಿ.ಜಿ. ಕೃಷ್ಣಪ್ಪ ತಿಳಿಸಿದ್ದಾರೆ. ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪಾಲಿಕೆಯ ಎಲ್ಲಾ ಅಧಿಕಾರಿ/ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಸೇರಿ ಒಟ್ಟು 851 ಮಂದಿಗೆ ಕೋವಿಡ್‍ಶೀಲ್ಡ್ ಲಸಿಕೆ ಹಾಕಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ 45 ವಯಸ್ಸು ಮೀರಿದ 44,000 ಸಾರ್ವಜನಿಕರಿಗೆ ಲಸಿಕೆ ಹಾಕಿಸುವ ಕಾರ್ಯ ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿ 35 ವಾರ್ಡ್‍ಗಳಲ್ಲಿ ಹೋಂ ಐಸೋಲೇಷನ್‍ನಲ್ಲಿ ಇರುವ ಕೋವಿಡ್ ಸೋಂಕಿತರ ಪ್ರದೇಶಗಳ ಬಳಿ ಕೋವಿಡ್-19 ಎಚ್ಚರಿಕೆ ಬ್ಯಾನರ್‍ಗಳನ್ನು ಅಳವಡಿಸಲಾಗಿದೆ. ಕೋವಿಡ್-19 2ನೇ ಅಲೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಪಾಲಿಕೆ ಅಧಿಕಾರಿ ಮತ್ತು ಸಿಬ್ಬಂದಿ ತಂಡ ರಚಿಸಿ ಮಾರ್ಚ್ ಮಾಹೆಯಿಂದ ಈವರೆಗೆ ಮಾಸ್ಕ್…

ಮುಂದೆ ಓದಿ...