ತುಮಕೂರು : ಪಾಸಿಟಿವ್ ಪ್ರಕರಣಗಳ ಶೇಕಡಾವಾರು ಪ್ರಮಾಣ ಇಳಿಕೆ

ತುಮಕೂರು :        ಜಿಲ್ಲೆಯಲ್ಲಿ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಶೇಕಡಾವಾರು ಪಾಸಿಟಿವ್ ಪ್ರಕರಣಗಳ ಪ್ರಮಾಣ ಇಳಿಕೆಯಾಗುತ್ತಿದೆ. ಆರಂಭದಲ್ಲಿ ಶೇ.45ರಷ್ಟಿದ್ದ ಪಾಸಿಟಿವ್ ಪ್ರಮಾಣ ಶೇ. 40ಕ್ಕೆ ತಗ್ಗಿದೆ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು.       ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವ್ಯಾಪಕವಾಗಿ ಹರಡುತ್ತಿದ್ದ ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತದಿಂದ ಹಾಸಿಗೆ, ಆಮ್ಲಜನಕ ಹಾಗೂ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಎಲ್ಲಾ ರೀತಿಯಲ್ಲಿಯೂ ಕ್ರಮ ಕೈಗೊಂಡ ಪರಿಣಾಮ ಕೋವಿಡ್ ನಿಯಂತ್ರಣದಲ್ಲಿ ಸುಧಾರಣೆ ಕಂಡು ಬಂದಿದೆ. ಸೋಂಕಿತರ ಚೇತರಿಕೆ ಪ್ರಮಾಣವೂ ಏರಿಕೆಯಾಗುತ್ತಿದೆ ಎಂದರು. ಬೆಂಗಳೂರು-ತುಮಕೂರು ಓಡಾಡುವವರ ಸಂಖ್ಯೆ ಹೆಚ್ಚಿದ್ದ ಕಾರಣ ಜಿಲ್ಲೆಯಲ್ಲಿ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗಿತ್ತು. ಆದರೆ, ಸರ್ಕಾರದ ಅನುಮತಿಯಿಲ್ಲದ ಕಾರಣ ಆರಂಭದಲ್ಲಿ ಈ…

ಮುಂದೆ ಓದಿ...

ತುಮಕೂರು : ಕೋವಿಡ್ ಚಿಕಿತ್ಸಾ ವಿಧಾನ ಪರಿಶೀಲನೆ ನಡೆಸಿದ ಸಚಿವ

 ತುಮಕೂರು :       ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜಿಲ್ಲಾಸ್ಪತ್ರೆ ಹಾಗೂ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸಾ ವಿಧಾನ, ಆರೈಕೆ ಸೇರಿದಂತೆ ಔಷಧೋಪಚಾರದ ಬಗ್ಗೆ ಪರಿಶೀಲನೆ ನಡೆಸಿದರು.       ಸೋಂಕಿತರಿಗೆ ಯಾವ್ಯಾವ ಆಸ್ಪತ್ರೆಗಳಲ್ಲಿ ಎμÉ್ಟಷ್ಟು ಪ್ರಮಾಣದಲ್ಲಿ ಹಾಸಿಗೆ ನೀಡಲಾಗಿದೆ? ಸೋಂಕಿತರ ಪ್ರಮಾಣ ಎಷ್ಟಿದೆ? ಸಮಸ್ಯೆಯಿಲ್ಲದೆ ಚಿಕಿತ್ಸೆ ನೀಡಲಾಗುತ್ತಿದೆಯಾ? ಎಂಬ ಬಗ್ಗೆಯೂ ಮಾಹಿತಿ ಪಡೆದರು.        ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಮಾಹಿತಿ ವಾರ್ ರೂಂ ಗೆ ತಲುಪಬೇಕು. ಇದರಿಂದ ಹಾಸಿಗೆ ಅವಶ್ಯಕತೆ ಇರುವವರಿಗೆ ತಕ್ಷಣ ಹಾಸಿಗೆ ವ್ಯವಸ್ಥೆ ಮಾಡಬಹುದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ಪರೀಕ್ಷೆ ಪ್ರಮಾಣ ಕಡಿಮೆಯಾಗಬಾರದು. ನಿಗಧಿಯಂತೆಯೇ ಪರೀಕ್ಷೆಗಳು ಸಕಾಲಕ್ಕೆ ನಡೆಯಬೇಕು.…

ಮುಂದೆ ಓದಿ...

ತುಮಕೂರು ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ : ಸಂಸದ

ತುಮಕೂರು:       ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ ಅಗತ್ಯಕ್ಕಿಂತ ಹೆಚ್ಚಿನ ಆಮ್ಲಜನಕ ಲಭ್ಯವಿದ್ದು ಯಾರು ಭೀತಿ ಪಡುವ ಅಗತ್ಯವಿಲ್ಲ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು.        ನಗರದ ಪಾಲಿಕೆ ಆವರಣದಲ್ಲಿ ಪಾಲಿಕೆ ವತಿಯಿಂದ ಪೌರ ಕಾರ್ಮಿಕರಿಗೆ ಮೆಡಿಕಲ್ ಕಿಟ್ ವಿತರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಎಲ್ಲ ಪಿಎಚ್‍ಸಿಗಳಿಗೂ ಆಮ್ಲಜನಕದ ವ್ಯವಸ್ಥೆಯನ್ನು ಮಾಡಲಾಗಿತ್ತು, ಆದರೆ ಅದನ್ನು ನಿರ್ವಹಿಸುವ ತಂತ್ರಜ್ಞರ ಕೊರತೆ ಇರುವುದರಿಂದ ಅವುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.        ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 450 ಪೌರ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೂ ಉಚಿತವಾಗಿ ಮೆಡಿಕಲ್ ಕಿಟ್ ವಿತರಿಸುವಂತೆ ಪಾಲಿಕೆ ಆಯುಕ್ತೆ ರೇಣುಕಮ್ಮ ಅವರಿಗೆ ಸೂಚಿಸಿದ ಅವರು, ಲಾಕ್‍ಡೌನ್‍ನಿಂದ ಊಟಕ್ಕೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.  …

ಮುಂದೆ ಓದಿ...

ಆಧಾರ್ ಓಟಿಪಿ ಮೂಲಕ ಪಡಿತರ ವಿತರಿಸುವಂತೆ ಸೂಚನೆ

ತುಮಕೂರು :        ಕೋವಿಡ್-19 ಎರಡನೇ ಅಲೆ ವ್ಯಾಪಿಸಿರುವ ಕಾರಣ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ‌ ಮಾಲೀಕರ ಆರೋಗ್ಯದ ಹಿತದೃಷ್ಟಿಯಿಂದ 2021ರ ಮೇ ಮಾಹೆಯ ಪಡಿತರವನ್ನು ನ್ಯಾಯಬೆಲೆ ಅಂಗಡಿ ಮಾಲೀಕರು ಆಧಾರ್ ಓಟಿಪಿ ಮೂಲಕ ವಿತರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದ್ದಾರೆ.       ಪಡಿತರ ಚೀಟಿದಾರರನ್ನು ಬಯೋ ದೃಢೀಕರಣಕ್ಕಾಗಿ ಒತ್ತಾಯಿಸಬಾರದು. ಬಯೋ ದೃಢೀಕರಣಕ್ಕಾಗಿ ಒತ್ತಾಯಿಸಿದಲ್ಲಿ ಗ್ರಾಹಕರು ಅವರ ವಿರುದ್ಧ ಆಯಾ ತಾಲೂಕಿನ ತಹಸೀಲ್ದಾರ್/ಆಹಾರ ಶಿರಸ್ತೇದಾರ್/ಆಹಾರ ನಿರೀಕ್ಷಕರಿಗೆ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಮುಂದೆ ಓದಿ...