ಕೊರೋನಾ ನಿಗ್ರಹದಲ್ಲಿ ಪಾಲಿಕೆ ಸದಸ್ಯರ ಜವಾಬ್ದಾರಿ ಇದೆ : ಜೆಸಿಎಂ

ತುಮಕೂರು:      ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ನಿಗ್ರಹಕ್ಕೆ ಸದಸ್ಯರೆಲ್ಲರೂ ಹೆಚ್ಚಿನ ಜವಾಬ್ದಾರಿ ಹೊತ್ತು ಕಾರ್ಯ ನಿರ್ವಹಿಸುವ ಮುಖೇನ ನಗರವನ್ನು ಸೋಂಕಿನಿಂದ ಪಾರು ಮಾಡಲು ಸಹಕರಿಸಬೇಕು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು.      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ಪಾಲಿಕೆ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಟ್ಟುನಿಟ್ಟಿನ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸಿದ ಪರಿಣಾಮ ಕೆಂಪು ವಲಯದಲ್ಲಿದ್ದ ತುಮಕೂರು ಪ್ರಸ್ತುತ ಪಿಂಕ್ ವಲಯಕ್ಕೆ ಬಂದಿದೆ. ಆದರೂ, ಜಿಲ್ಲೆ ಸಮಾಧಾನದ ಸ್ಥಿತಿಗೆ ತಲುಪಬೇಕೆಂದರೆ ಸಂಪೂರ್ಣ ಕೋವಿಡ್ ನಿಗ್ರಹಕ್ಕೆ ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು.       ಸೋಂಕಿತರ ಆರೈಕೆಗಾಗಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಆದರೆ ಸೆಂಟರ್ ಗೆ ಸೋಂಕಿತರು ಬರಲು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಮುಂದೆ ಪಾಸಿಟಿವ್ ಬಂದ…

ಮುಂದೆ ಓದಿ...