ತುಮಕೂರು : ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಆರಂಭಿಸಿ

 ತುಮಕೂರು : ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಗೋಚರಿಸಿದ್ದು, ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸದ್ಯ ಸೋಂಕಿನ ಹರಡುವಿಕೆ ಮತ್ತು ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರಕಾರದ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಹೇಳಿದರು. ಜಿಲ್ಲೆಗೆ ನಾಲ್ಕು ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಆದೇಶಿಸಲಾಗಿತ್ತು. ಉಸ್ತುವಾರಿ ಸಚಿವರು ಹೆಚ್ಚುವರಿಯಾಗಿ ಮಧುಗಿರಿಗೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಅಲ್ಲಿಗೆ ಒಂದು ಸೇರಿ ಒಟ್ಟು ಐದು ಪ್ಲಾಂಟ್ ಕೊಡಲಾಗುವುದು. ಅಲ್ಲದೆ 25 ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದೆ. ಹೆಚ್ಚುವರಿಯಾಗಿ ಅಗತ್ಯವಿರುವ ಎಲ್ಲಾ ಔಷಧಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

ಮುಂದೆ ಓದಿ...

ವರ್ಷದ ಅಂತ್ಯದೊಳಗೆ ಎಲ್ಲರಿಗೂ ಲಸಿಕೆ: ಸಚಿವ ಡಾ||ಕೆ.ಸುಧಾಕರ್

ತುಮಕೂರು:       ರಾಜ್ಯದ ಎಲ್ಲರಿಗೂ 2021ರ ವರ್ಷದ ಅಂತ್ಯದೊಳಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಪೋರ್ಟಲ್‍ನಲ್ಲಿ ಯಾರು ಎಲ್ಲಿಯಾದರೂ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬಹುದಾದ ವ್ಯವಸ್ಥೆಯಿರುವುದರಿಂದ ಬೆಂಗಳೂರಿಗರು ಅಕ್ಕಪಕ್ಕದ ನೆರೆಯ ಜಿಲ್ಲೆಯಲ್ಲಿ ಲಸಿಕೆ ಪಡೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಆಯಾ ಜಿಲ್ಲೆಯ ಜನರು ಜಿಲ್ಲೆಯಲ್ಲಿ ಮಾತ್ರ ಲಸಿಕೆ ಪಡೆಯುವಂತೆ ಮಾಡುವ ಸಲುವಾಗಿ ರಾಜ್ಯಮಟ್ಟದ ಪೋರ್ಟಲ್ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.       ರಾಜ್ಯದಲ್ಲಿ 2015 ವೈದ್ಯರ ನೇಮಕಾತಿ ಆದೇಶ ಆಗಿದ್ದು, ನೇಮಕಾತಿ ಆದೆ ೀಶ ನೀಡಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲಿಯೂ ಖಾಲಿ ಇರುವ ಎಲ್ಲಾ ಹುದ್ದೆಗಳಿಗೆ ವೈದ್ಯರು ನೇಮಕಗೊಳ್ಳಲಿದ್ದಾರೆ. ಸೋಮವಾರದಿಂದ ಬುಧವಾರದೊಳಗೆ ನೇಮಕಗೊಂಡ…

ಮುಂದೆ ಓದಿ...

ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ನಿರ್ವಹಣೆ ಕುರಿತು ಪರಿಶೀಲಿಸಿದ ಸಚಿವ ಡಾ.ಕೆ. ಸುಧಾಕರ್

 ತುಮಕೂರು  :       ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಮತ್ತು ನಿರ್ವಹಣೆಯ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪರಿಶೀಲನೆ ನಡೆಸಿದರು.         ಜಿಲ್ಲಾಸ್ಪತ್ರೆಗಿಂದು ಭೇಟಿ ನೀಡಿದ ಸಚಿವರು, ಜಿಲ್ಲಾಧಿಕಾರಿ, ಡಿಎಚ್‍ಒ, ಡಿಎಸ್ ಹಾಗೂ ಸಂಬಂಧಿಸಿದ ವೈದ್ಯಾಧಿಕಾರಿಗಳಿಂದ ಕೋವಿಡ್-19 ಸಂಬಂಧದ ಸಂಪೂರ್ಣ ಮಾಹಿತಿ ಪಡೆದು ಬಳಿಕ ಕೆಲವು ಸೂಚನೆ ನೀಡಿದರು. ಈ ವೇಳೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರೂ ಸಚಿವರಿಗೆ ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಕೈಗೊಂಡಿರುವ ಸಮರ್ಪಕ ಮಾಹಿತಿ ಹೇಳಿದರು.       ಬಳಿಕ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್ ಅವರು, ಆಸ್ಪತ್ರೆಯಲ್ಲಿ ಐಸಿಯು, ಆಮ್ಲಜನಕ ಹಾಸಿಗೆಗಳಲ್ಲಿ ಎಷ್ಟು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿಯನ್ನು ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಮಾಹಿತಿ ಫಲಕದಲ್ಲಿ ಪ್ರದರ್ಶಿಸಬೇಕು. ಟ್ರಯಾಜ್ ಗೆ ಮೊದಲ ಆದ್ಯತೆ ಕೊಡಬೇಕು. ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿಯೂ…

ಮುಂದೆ ಓದಿ...