ಅರ್ಧಕ್ಕೆ ನಿಂತ ಒಳಚರಂಡಿ ಕಾಮಗಾರಿ ; ಹೆಚ್ಚಾದ ದುರ್ವಾಸನೆ

 ಹುಳಿಯಾರು:       ಪಟ್ಟಣದ 4ನೇವಾರ್ಡ್ ಇಂದಿರನಗರ ಬಡಾವಣೆಯ ರಸ್ತೆಯಲ್ಲಿ ಮತ್ತು ಮನೆಯ ಮುಂಭಾಗ ಒಳಚರಂಡಿಯ ಕೊಳಚೆ ನೀರು ಮತ್ತು ಮಳೆಯ ನೀರು ನಿಂತು ಜನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸುವಂತೆ ಸ್ಥಳಿಯ ನಿವಾಸಿಗಳು ಒತ್ತಾಯಿಸಿದ್ದಾರೆ.      ಹುಳಿಯಾರು ಇಂಧಿರನಗರ ಬಡಾವಣೆಯ ಈ ರಸ್ತೆಯಲ್ಲಿ ಒಳಚರಂಡಿ ಮತ್ತು ಸಿಸಿರಸ್ತೆ ಕಾಮಗಾರಿಯನ್ನ ನಡೆಸಲಾಗಿದೆ. ಆದರೆ ಈ ರಸ್ತೆಯ ಅಕ್ಕಪಕ್ಕದಲ್ಲಿ ಒಳಚರಂಡಿ ಕಾಮಗಾರಿಯನ್ನ ನಡೆಸಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಈ ಒಳಚರಂಡಿಯಲ್ಲಿ ಹರಿಯುವ ಕೊಳಚೆ ನೀರು ಕೊನೆಗೆ ಎಲ್ಲಿಗೆ ಹೋಗಿ ಸೆರಬೇಕು ಎಂದು ದಾರಿತೊರಿಸಿಲ್ಲ.       ಅಲ್ಲದೆ ಈ ರಸ್ತೆಯಲ್ಲಿ ನಿರ್ಮಾಣವಾಗಿರುವ ಒಳಚರಂಡಿ ಕಾಮಗಾರಿಯು ಪೂರ್ತಿಗೊಳ್ಳದೆ ಸ್ವಲ್ಪಭಾಗ ಕಾಮಗಾರಿಯೆ ನಡೆದಿಲ್ಲಾ. ಪರಿಣಾಮ ನೂತನವಾಗಿ ನಿರ್ಮಾಣಗೊಂಡಿರುವ ಒಳಚರಂಡಿ ಯಿಂದ ಹರಿಯುವ ಕೊಳಚೆ ನೀರು ಕಾಮಗಾರಿ ನಡೆಯದೆ ಇರುವ ಭಾಗದ ಮನೆಗಳ ಮುಂದೆ ಮತ್ತು…

ಮುಂದೆ ಓದಿ...

ಲಾಕ್‍ಡೌನ್ ಮಧ್ಯೆಯೂ ಪೊಲೀಸರ ಭರ್ಜರಿ ಭೇಟೆ

ತುಮಕೂರು:        ಜಿಲ್ಲೆಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿಯೂ ಅಕ್ರಮವಾಗಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಗಳ ಮೇಲೆ ಮೇ.1 ರಿಂದ 19 ರವರೆಗೆ ಪೊಲೀಸರ ಕಾರ್ಯಾಚರಣೆಯಲ್ಲಿ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ. ಜೂಜಾಟದಲ್ಲಿ ಭಾಗಿಯಾಗಿದ್ದ 203 ಜೂಜುಕೋರರನ್ನು ಬಂಧಿಸಿ 37 ಪ್ರಕರಣ ದಾಖಲಿಸಿ ಪಣಕ್ಕೆ ಇಟ್ಟಿದ್ದ 2,51, 190 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.       ಅದೇ ರೀತಿ ಮಟ್ಕಾ ದಂಧೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 2 ಪ್ರಕರಣಗಳನ್ನು ದಾಖಲಿಸಿ ಅವರಿಂದ 8,161 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ 71 ಜನರನ್ನು ಬಂಧಿಸಿ 286 ಲೀ. ಮಧ್ಯವನ್ನು ವಶಪಡಿಸಿಕೊಂಡು 66 ಪ್ರಕರಣ ದಾಖಲಿಸಲಾಗಿದೆ.       ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ 21 ಜನರ ಮೇಲೆ 9 ಪ್ರಕರಣ ದಾಖಲಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ…

ಮುಂದೆ ಓದಿ...

ತುಮಕೂರು : ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ

ತುಮಕೂರು:      ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ 18-44 ವರ್ಷದ ಒಳಗಿನ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಮಂಚೂಣಿ ಕಾರ್ಯಕರ್ತರ ಇಲಾಖಾ ಮುಖ್ಯಸ್ಥರೊಂದಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಭೆ ನಡೆಸಿದರು.        ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಭೆ ನಡೆಸಿ ಮಾತನಾಡಿ, ಜಿಲ್ಲಾಧಿಕಾರಿಗಳು ಕೋವಿಡ್ ನಿಗ್ರಹಕ್ಕೆ ಮಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಇಲಾಖೆ ಮುಖ್ಯಸ್ಥರು ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಬೇಕು. ನಿಗಧಿ ಪಡಿಸಿದ ದಿನಾಂಕಗಳಂದು ಆಯಾ ಇಲಾಖೆ ಮುಖ್ಯಸ್ಥರು ತಮ್ಮ ವ್ಯಾಪ್ತಿಯ ಕಾರ್ಯಕರ್ತರನ್ನು ಗುರುತಿಸಿ ಚಿಟಿಟಿexuಡಿe-3 ಅನುಬಂಧ ಪತ್ರದಲ್ಲಿ ಪ್ರಮಾಣೀಕರಿಸಿ ಅವರಿಗೆ ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದರು.       ಕೊರೋನಾ ಮುಂಚೂಣಿ ಕಾರ್ಯ ಕರ್ತರೆಂದು ಗುರುತಿಸಲಾದ ಅಂಗವೈಕಲ್ಯ ಹೊಂದಿರುವ ಫಲಾನುಭವಿಗಳು ಮತ್ತು ಒಬ್ಬ ಆರೈಕೆದಾರರು, ಖೈದಿಗಳು, ಚಿತಾಗಾರ, ಸ್ಮಶಾನ, ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ…

ಮುಂದೆ ಓದಿ...