ತುಮಕೂರು : 6 ಮೆಡಿಕಲ್ ಸ್ಟೋರ್ ವಿರುದ್ಧ ಮೊಕದ್ದಮೆ ದಾಖಲು

ತುಮಕೂರು:        ಕಾನೂನು ಮಾಪನಶಾಸ್ತ್ರ ಇಲಾಖೆಯು ಕೋವಿಡ್ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಆಕ್ಸಿಮೀಟರ್ ಗಳನ್ನು ಎಂಆರ್‍ಪಿ ಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ 6 ಮೆಡಿಕಲ್ ಸ್ಟೋರ್ ಗಳ ವಿರುದ್ಧ ಮೊಕದ್ದಮೆ ದಾಖಲಿಸಿದೆ. ಜಿಲ್ಲೆಯಲ್ಲಿ ಮೇ ಮಾಹೆಯಲ್ಲಿ ನಡೆಸಿದ ತಪಾಸಣೆಯಲ್ಲಿ ಈ ಮೊಕದ್ದಮೆ ದಾಖಲಿಸಲಾಗಿದೆ. ಸಹಾಯಕ ನಿಯಂತ್ರಕರ ನೇತೃತ್ವದಲ್ಲಿ ತುಮಕೂರು ಉಪವಿಭಾಗ-1 ಹಾಗೂ 2, ತಿಪಟೂರು ಉಪವಿಭಾಗ ಮತ್ತು ಮಧುಗಿರಿ ಉಪವಿಭಾಗದ ನಾಲ್ಕು ನಿರೀಕ್ಷಕರ ತಂಡ ತಪಾಸಣೆ ನಡೆಸಿದ್ದು, ಎಂಆರ್ ಪಿ ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ 6 ಔಷಧಿ ಮಳಿಗೆ ಸೇರಿದಂತೆ ಪೊಟ್ಟಣ ಸಾಮಾಗ್ರಿ ರೂಪದ ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ 4 ದಿನಸಿ ಅಂಗಡಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.       ಒಟ್ಟಾರೆ 26 ಔಷಧಿ ಮಳಿಗೆ, 64 ದಿನಸಿ ಅಂಗಡಿ ಹಾಗೂ 14 ನ್ಯಾಯ…

ಮುಂದೆ ಓದಿ...

20ಕ್ಕಿಂತ ಹೆಚ್ಚು ಕೋವಿಡ್ ಸೋಂಕಿತರಿರುವ ಗ್ರಾಮಗಳು ರೆಡ್‍ಝೋನ್

ತುಮಕೂರು:       ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಗಣನೀಯವಾಗಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 20ಕ್ಕಿಂತ ಹೆಚ್ಚು ಕೋವಿಡ್ ಸಕ್ರಿಯ ಸೋಂಕಿತರಿರುವ ಗ್ರಾಮಗಳನ್ನು ರೆಡ್ ಝೋನ್ ಎಂದು ಗುರುತಿಸಿ ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.       ಪ್ರತಿ ಗ್ರಾಮಗಳಲ್ಲಿ ಕೋವಿಡ್ ಸೋಂಕಿನ ನಿಗ್ರಹಕ್ಕಾಗಿ ಹೆಚ್ಚು 20ಕ್ಕಿಂತ ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ರೆಡ್‍ಝೋನ್ (ಕೆಂಪು ವಲಯ) ಪ್ರದೇಶವೆಂದು ಹಾಗೂ 11ಕ್ಕಿಂತ ಹೆಚ್ಚು 20ಕ್ಕಿಂತ ಕಡಿಮೆ ಸೋಂಕಿತರಿರುವ ಗ್ರಾಮಗಳನ್ನು ಹಾಟ್ ಸ್ಪಾಟ್ ಪ್ರದೇಶಗಳೆಂದು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.        ಕೆಂಪುವಲಯ ಹಾಗೂ ಹಾಟ್ ಸ್ಪಾಟ್ ವಲಯದ ಗ್ರಾಮಗಳಲ್ಲಿ ಸೋಂಕು ದೃಢಪಟ್ಟ ವ್ಯಕ್ತಿಯ ಕುಟುಂಬದ ಎಲ್ಲಾ ಸದಸ್ಯರು ಮತ್ತು ಸೋಂಕಿನ ಲಕ್ಷಣಗಳಿರುವ ಎಲ್ಲರಿಗೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡುವುದರ ಜೊತೆಗೆ…

ಮುಂದೆ ಓದಿ...

ಸಂಚಾರಿ ತರಕಾರಿ ಮಾರಾಟ ವಾಹನಕ್ಕೆ ಚಾಲನೆ

ತುಮಕೂರು:       ಕೊರೊನಾ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಜನಸಾಮಾನ್ಯರ ಮನೆ ಬಾಗಿಲಿಗೆ ತಾಜಾ ತರಕಾರಿ ತಲುಪಿಸಲು ತೋಟಗಾರಿಕೆ ಇಲಾಖೆ ಹಾಗೂ ಹಾಪ್‍ಕಾಮ್ಸ್ ಮುಂದಾಗಿದ್ದು, ಸಂಚಾರಿ ತರಕಾರಿ, ಹಣ್ಣು ಮಾರಾಟದ ವಾಹನಕ್ಕೆ ಚಾಲನೆ ನೀಡಲಾಯಿತು.        ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಜನಸಾಮಾನ್ಯರಿಗೆ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ತರಕಾರಿ, ದಿನ ಪದಾರ್ಥ ಖರೀದಿಸಲು ಅವಕಾಶ ನೀಡಲಾಗಿದೆ. ಆದರೆ ಜನರು ಕೊರೊನಾ ಸೋಂಕಿನ ಭೀತಿಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ನಗರದ ಜನರ ಮನೆ ಬಾಗಿಲಿಗೆ ತರಕಾರಿ ತಲುಪಿಸಲು ಸಂಚಾರಿ ತರಕಾರಿ ಮಾರಾಟ ಮಳಿಗೆ ಕಾರ್ಯಾರಂಭ ಮಾಡಿದೆ.       ಸಂಚಾರಿ ತರಕಾರಿ ಮಾರಾಟ ವಾಹನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಹಾಪ್‍ಕಾಮ್ಸ್ ಅಧ್ಯಕ್ಷ ವಿಜಯಗೌಡ, ಕಳೆದ ಬಾರಿ ಕೊರೊನಾ ಲಾಕ್‍ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸುಮಾರು 40 ರಿಂದ 45…

ಮುಂದೆ ಓದಿ...

ಗ್ರಾಮಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ತುಮಕೂರು :       ಗ್ರಾಮಗಳು ಕೊರೋನಾ ಬಾಧಿತ ಪ್ರದೇಶಗಳಾಗದಂತೆ ಸೋಂಕಿನ ಸಂಪೂರ್ಣ ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಸೋಂಕು ಪತ್ತೆಯಾಗಿರುವ ಗ್ರಾಮಗಳಲ್ಲಿ ಸೋಂಕಿನ ನಿಯಂತ್ರಣಕ್ಕೆ ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ನಿರ್ದೇಶಿಸಿದರು.       ಸೋಂಕಿತರನ್ನು ಕಡ್ಡಾಯವಾಗಿ ಕೊರೋನಾ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಕೊರೋನಾ ಆರೈಕೆ ಕೇಂದ್ರಕ್ಕೆ ಬರಲು ಹಿಂದೇಟು ಹಾಕುವ ಸೋಂಕಿತರಿಗೆ ಆಯಾ ಸ್ಥಳೀಯ ಜನಪ್ರತಿನಿಧಿಗಳು ಅವರಿಗೆ ಮನವರಿಕೆ ಮಾಡಿ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಲು ಹೆಚ್ಚು ಜವಾಬ್ದಾರಿವಹಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.       ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ಸಂಪೂರ್ಣ ಲಾಕ್ ಮಾಡಿ,…

ಮುಂದೆ ಓದಿ...