ತುಮಕೂರು : ಹಾಟ್‍ಸ್ಪಾಟ್ ಗ್ರಾಮಗಳಿಗೆ ಸಿಇಒ ಭೇಟಿ

ತುಮಕೂರು:       ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಶಿರಾ ತಾಲ್ಲೂಕಿನ ಹಾಟ್‍ಸ್ಪಾಟ್ ಗ್ರಾಮಗಳಾದ ಹನುಮಂತನಗರ, ಮಾಯಸಂದ್ರ, ಗುಳಿಗೆ ನಹಳ್ಳಿ ಗ್ರಾಮಗಳಲ್ಲಿ ಕೋವಿಡ್ 19 ಪ್ರಕರಣಗಳು ಧೃಡಪಟ್ಟ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು ಹಾಗೂ ಸಾರ್ವಜನಿಕರಲ್ಲಿ ಕೋವಿಡ್ ನಿಯಂತ್ರಿಸುವ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.       ಮನೆಯಿಂದ ಹೊರ ಬರುವಾಗ ಎಲ್ಲರೂ ಸಹ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ನಿಯ ಮಿತವಾಗಿ ಸೋಪಿನಿಂದ ತಮ್ಮ ಕೈಗಳನ್ನು ಸ್ವಚ್ಛಗೊಳಿಸಿ ಕೊಳ್ಳುವುದು, ಅನಗತ್ಯವಾಗಿ ಅಕ್ಕಪಕ್ಕದ ಮನೆಗಳಿಗೆ ಹೋಗಿ ಬರುವುದು ಅಥವಾ ಬೇರೆ ಬೇರೆ ಗ್ರಾಮಗಳಿಗೆ ಹೋಗಿ ಬರುವುದು ಮಾಡಬಾರದು. ಅನಗತ್ಯವಾಗಿ ಮನೆಯಿಂದ ಹೊರ ಬಂದು ಓಡಾಡುವುದರಿಂದ ಕೋವಿಡ್-19 ಸೋಂಕಿಗೆ ತಾವು ಸಹ ಒಳಗಾಗುವ ಸಂಭವವಿದೆ. ಆದ್ದರಿಂದ ಕೆಲವು ದಿನಗಳ ಕಾಲ…

ಮುಂದೆ ಓದಿ...

ತುಮಕೂರು : 4 ಸಿ.ಟಿ. ಸ್ಕ್ಯಾನಿಂಗ್ ಆಸ್ಪತ್ರೆಗಳಿಗೆ ನೋಟಿಸ್

ತುಮಕೂರು: ಕೊರೋನಾ ಸೋಂಕು ಪತ್ತೆಗೆ ಸಿ.ಟಿ ಸ್ಕ್ಯಾನಿಂಗ್ ಮಾಡಲಾಗುತ್ತಿದ್ದು, ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚು ಹಣ ಪಡೆದಿರುವ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸುವಂತೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, 4 ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ. ಸಿ.ಟಿ ಸ್ಕ್ಯಾನಿಂಗ್ ಮಾಡಲು ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚು ಹಣ ಪಡೆಯಲಾಗುತ್ತಿದೆ. ಅಂತಹ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಆರೋಗ್ಯ ಸಚಿವರು, ಈವರೆಗೂ ಕ್ರಮ ಕೈಗೊಳ್ಳದಿರುವುದಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು. ದುಬಾರಿ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸಿ, ಅಗತ್ಯ ಕ್ರಮ ಕೈಗೊಂಡು ನನಗೆ ವರದಿ ಮಾಡಬೇಕು ಎಂದು ಸೂಚಿಸಿದ್ದರು. ಈಗಾಗಲೇ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು…

ಮುಂದೆ ಓದಿ...

ತುಮಕೂರು : ರೆಡ್ ಜೋನ್’ನಿಂದ ಕಾರೆಂಜ್ ಜೋನ್’ಗೆ

  ತುಮಕೂರು:       ಕೋವಿಡ್ ಸೋಂಕು ಪ್ರಕರಣ ಪ್ರಮಾಣದಲ್ಲಿ ಕೆಂಪುವಲಯದಲ್ಲಿದ್ದ ಜಿಲ್ಲೆಯು ಕಿತ್ತಲೆ ವಲಯಕ್ಕೆ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲಾ ಜಿಲ್ಲೆಗಳ ಪರಿಶೀಲನೆ ಕೈಗೊಂಡ ಸಂದರ್ಭದಲ್ಲಿ ಜಿಲ್ಲೆಯಲ್ಲಿ 27,000 ಇದ್ದ ಸೋಂಕು ಪ್ರಕರಣಗಳ ಸಂಖ್ಯೆ ಪ್ರಸ್ತುತ 17,000 ಕ್ಕೆ ಇಳಿದಿದೆ ಎಂದರು. ಜಿಲ್ಲಾಡಳಿತ ಮತ್ತು ಅಧಿಕಾರಿಗಳ ಉತ್ತಮ ಕಾರ್ಯ ನಿರ್ವಹಣೆಯಿಂದಾಗಿ ಕೊರೋನಾ ಅಬ್ಬರ ದಿನೇ ದಿನೇ ತಗ್ಗಿ ಕಿತ್ತಲೆ ವಲಯಕ್ಕೆ ಬಂದಿರುವುದು ಒಳ್ಳೆಯ ಸೂಚನೆ ಎಂದು ತಿಳಿಸಿದರಲ್ಲದೆ ಮೇ 15 ರಿಂದ ವರದಿಯಾಗಿರುವ ಕೋವಿಡ್ ಸೋಂಕು ಪ್ರಕರಣಗಳನ್ನು ಅವಲೋಕಿಸಿದಾಗ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿವೆ. ಕಳೆದ ಮೇ 15 ರಂದು 42.29%ರಷ್ಟಿದ್ದ ಸೋಂಕಿತರ ಸಂಖ್ಯೆ ಮೇ 23ರಂದು 31.66%ಕ್ಕೆ ಇಳಿದಿದೆ ಎಂದರು. ಗ್ರಾಮಗಳಲ್ಲಿ…

ಮುಂದೆ ಓದಿ...

ಪ್ರತಿ ದಿನ 7000 ಕೋವಿಡ್ ಪರೀಕ್ಷೆ ಮಾಡಿ- ಸಚಿವ ಜೆಸಿಎಂ

 ತುಮಕೂರು :       ಕೋವಿಡ್ ಟೆಸ್ಟ್‍ಗಳನ್ನು ಹೆಚ್ಚುಗೊಳಿಸಿ ಅಗತ್ಯ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪಾಸಿಟಿವಿಟಿ ಪ್ರಮಾಣ ಇಳಿಕೆಗೆ ಕ್ರಮವಹಿಸುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಸಚಿವರು, ಸರ್ಕಾರ ಜಿಲ್ಲೆಯಲ್ಲಿ ನಿತ್ಯ 5,400 ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಗುರಿ ನಿಗಧಿಪಡಿಸಿದೆ. ಆದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ 7000 ಕೋವಿಡ್ ಟೆಸ್ಟ್‍ಗಳನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸೂಚನೆ ನೀಡಿದರು. ಖಾಸಗಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರಿದ್ದರೆ ಅವರನ್ನು ಜಿಲ್ಲಾಸ್ಪತ್ರೆಗೆ ನಿಯೋಜಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಸೂಚಿಸಿದರು. ಕೊರೋನಾ ಸೋಂಕಿತರ ಆರೈಕೆ ಕೇಂದ್ರಗಳಲ್ಲಿನ ಆಹಾರ ವಿತರಣೆ ಬಗ್ಗೆ ಪರಿಶೀಲನೆ ನಡೆಸಿದ ಸಚಿವರು, ಪ್ರತಿ ಕೋವಿಡ್ ಆರೈಕೆ ಕೇಂದ್ರಕ್ಕೆ ವೈದ್ಯರು…

ಮುಂದೆ ಓದಿ...