ಬ್ಯಾಂಕ್ ಶಾಖೆ ಸ್ಥಳಾಂತರಕ್ಕೆ ಸಾರ್ವಜನಿಕರ ವಿರೋಧ

ಮಧುಗಿರಿ:     ವಿಶಾಲ ಕಟ್ಟಡದಲ್ಲಿರುವ ಸಿಂಡಿಕೇಟ್ ಬ್ಯಾಂಕನ್ನು ಮತ್ತೊಂದು ಕೆನರಾ ಬ್ಯಾಂಕ್ ಶಾಖೆಗೆ ವರ್ಗಾಯಿಸುತ್ತಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದ್ದು, ಮೂಲ ಶಾಖೆಯನ್ನೇ ಇಲ್ಲಿಗೆ ವರ್ಗಾಯಿಸ ಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.       ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ ಈ ಹಿಂದೆ ಸಿಂಡಿಕೇಟ್ ಬ್ಯಾಂಕ್ ಶಾಖೆಯು ಆರಂಭವಾಗಿ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲವಾಗಿತ್ತು. ಆದರೆ ಸಿಂಡಿಕೇಟ್ ಬ್ಯಾಂಕನ್ನು ಕೆನರಾ ಬ್ಯಾಂಕಿನಲ್ಲಿ ವಿಲೀನಗೊಳಿಸಿದ ನಂತರ ಮೂಲ ಕೆನರಾ ಬ್ಯಾಂಕ್ ಕಟ್ಟಡದಲ್ಲಿ ಸಿಂಡಿಕೇಟ್ ಶಾಖೆಯನ್ನು ವಿಲೀನಗೊಳಿಸಲಾಗುವುದು ಎಂದು ಬ್ಯಾಂಕಿನಲ್ಲಿ ಫ್ಲೆಕ್ಸ್ ಹಾಕಿ ಸಾರ್ವಜನಿಕರ ಗಮನಕ್ಕೆ ತಂದಿದ್ದು, ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.       ಸಿಂಡಿಕೇಟ್ ಬ್ಯಾಂಕಿನ ಶಾಖೆಯು ಮುಖ್ಯ ರಸ್ತೆಯಲ್ಲಿದ್ದು, ವಿಶಾಲವಾದ ಕಟ್ಟಡದ ಜೊತೆಗೆ ಎಲ್ಲಾ ಅನುಕೂಲಗಳಿದ್ದು, ಸೂಕ್ತ ಗಾಳಿ ಬೆಳಕಿನ ಜೊತೆಗೆ, ಭದ್ರತೆ, ಪಾರ್ಕಿಂಗ್ ವ್ಯವಸ್ಥೆಯೂ ಇದೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಆದರೆ ಕೆನರಾ…

ಮುಂದೆ ಓದಿ...

ಕೊರಟಗೆರೆ : ಜೂಜು ಅಡ್ಡದ ಮೇಲೆ ದಾಳಿ : 10 ಜನ ಬಂಧನ

ಕೊರಟಗೆರೆ:       ಇಸ್ಪೀಟ್ ಜೂಜು ಅಡ್ಡದಲ್ಲಿ ತೊಡಗಿದ್ದವರ ಮೇಲೆ ಸಿಪಿಐ ಸಿದ್ದರಾಮೇಶ್ವರ ರವರ ತಂಡ ದಾಳಿ ಮಾಡಿ 10 ಜನ ಆರೋಪಿಗಳನ್ನ ಬಂಧಿಸಿ ಪಣಕ್ಕಿಟ್ಟಿದ್ದ 10,700 ರೂಗಳನ್ನ ವಶಕ್ಕೆ ಪಡೆದಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.        ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದ ಖಲೀಲ್ ಸಾಬ್ ಎನ್ನುವವರ ಶೆಡ್‍ನ ಹತ್ತಿರ ಇಸ್ಪೀಟ್ ಜೂಜು ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಕೊರಟಗೆರೆ ಪೊಲೀಸರ ತಂಡ 10 ಆರೋಪಿಗಳನ್ನ ಜನರನ್ನ ಬಂಧಿಸಿ ಪಣಕ್ಕಿಟ್ಟದ್ದ 10,700 ರೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.      ದಾಳಿಯ ಸಂದರ್ಭದಲ್ಲಿ ಸಿಪಿಐ ಸಿದ್ದರಾಮೇಶ್ವರ್, ಎಎಸ್‍ಐ ಗಳಾದ ಯೋಗೀಶ್, ಮಂಜುನಾಥ್, ಪೇದೆಗಳಾದ ರಂಗನಾಥ್, ಧರ್ಮಪಾಲ್ ನಾಯ್ಕ್, ಪ್ರಶಾಂತ್, ನಜುರುಲ್ಲಾ ಖಾನ್ ಭಾಗಿಯಾಗಿದ್ದರು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದೆ ಓದಿ...

ತುಮಕೂರು : ಕೋವಿಡ್ ಜಾಗೃತಿ ಅಭಿಯಾನ

ತುಮಕೂರು:       ನಗರದ ಶ್ರೀದೇವಿ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರವು ಕೋವಿಡ್-19 ಹಾಗೂ ಆರೋಗ್ಯ ವೃದ್ಧಿಯ ಕಾಳಜಿಯ ಕುರಿತಾಗಿ ನುರಿತ ತಜ್ಞ ವೈದ್ಯರೊಂದಿಗೆ ಆನ್‍ಲೈನ್ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ರಾಯಚೂರು ಸರ್ಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿಯಾದ ಡಾ.ಅಜಯ್ ಪವಾರ್, ಕೊರಟಗೆರೆ ಸರ್ಕಾರಿ ಆಸ್ಪತ್ರೆ ಡಾ.ಪುರುಷೋತ್ತಮ್ ಇವರುಗಳ ಮುಖೇನ ನೂರಾರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕೋವಿಡ್-19 ಬಗ್ಗೆ ಉತ್ತಮ ಸಲಹೆಗಳನ್ನು ನೀಡಲಾಯಿತ್ತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆಗಳನ್ನು ಪಡೆಯುವುದರ ಜೊತೆಗೆ ವೈದ್ಯರೊಂದಿಗೆ ಕೋವಿಡ್-19 ಮತ್ತು ವ್ಯಾಕ್ಸಿಲೇಷನ್ ಬಗ್ಗೆ ಚರ್ಚಿಸಿ ತಮ್ಮ ಸಲಹೆಗಳನ್ನು ಪರಿಹರಿಸಿಕೊಂಡರು.       ಈ ಪ್ರಪಂಚವನ್ನೇ ನಡುಗಿಸಿದ ಈ ಕೊರೋನ ರೋಗದ ಲಕ್ಷಣಗಳನ್ನು ಸೇರಿದಂತೆ, ಬ್ಯಾಕ್ ಫಂಗಸ್, ಶ್ವಾಸಕೋಶದ ಸಂಬಂಧಿಸಿದ ಪರಿಣಾಮಗಳ ಬಗ್ಗೆ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯ…

ಮುಂದೆ ಓದಿ...

ಗ್ರಾಮೀಣ ಭಾಗದಲ್ಲಿ ಸೋಂಕಿನ ಪ್ರಮಾಣ ಇಳಿಸಲು ಜಿಲ್ಲಾಡಳಿತಕ್ಕೆ ಸಿಎಂ ಸೂಚನೆ

ತುಮಕೂರು :        ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಹಳ್ಳಿಗಳ ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯ್ತಿ ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು.        ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೋವಿಡ್-19 ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕಿನ ಪಾಸಿಟಿವ್ ಪ್ರಮಾಣದ ಇಳಿಕೆಗೂ ಸೂಚನೆ ನೀಡಿದರು.       ಕೋವಿಡ್ 19 ಎರಡನೇ ಅಲೆ ರಾಜ್ಯವನ್ನು ತೀವ್ರವಾಗಿ ಬಾಧಿಸಿದೆ. ಬೆಂಗಳೂರಿನ ನೆರೆಯ ಜಿಲ್ಲೆಯಾದ ತುಮಕೂರಿನಲ್ಲಿಯೂ ಪರಿಸ್ಥಿತಿ ಗಂಭೀರವಾಗಿತ್ತು. ಸಮರ್ಪಕ ನಿರ್ವಹಣೆಯಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಸುಧಾರಣೆ ಕಂಡುಬಂದಿದೆ ಎಂದರು.        ಜಿಲ್ಲೆಯಲ್ಲಿ ಕಳೆದ ಏಪ್ರಿಲ್ ಮಾಹೆಯಲ್ಲಿ 18,749 ಕೋವಿಡ್ ಪ್ರಕರಣ ದೃಢವಾಗಿದ್ದು, 131 ಮಂದಿ ಮೃತಪಟ್ಟಿದ್ದಾರೆ. ಅದೇ ರೀತಿ ಮೇ…

ಮುಂದೆ ಓದಿ...