ತುಮಕೂರು : ಪಂಚಾಯತಿ ಚುನಾವಣೆ : ಅಂತಿಮ ಮತದಾರರ ಪಟ್ಟಿ ಪ್ರಕಟ

 ತುಮಕೂರು  :      ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಕ್ಚೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಆಯಾ ತಾಲ್ಲೂಕು ಕಚೇರಿಯಲ್ಲಿ ಪ್ರಕಟಿಸಲಾಗಿದೆ.       ಅರ್ಹ ಮತದಾರರು ತಮ್ಮ ವಿವರಗಳನ್ನು ಈ ಅಂತಿಮ ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿ ಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದ್ದಾರೆ.

ಮುಂದೆ ಓದಿ...

ತುಮಕೂರು : ನರೇಗಾ ಯೋಜನೆಯ ಸಮಗ್ರ ಅನುಷ್ಠಾನಕ್ಕೆ ಆದ್ಯತೆ ನೀಡಲು ಸೂಚನೆ

ತುಮಕೂರು: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುμÁ್ಠನ, ಅನುದಾನದ ಸದ್ಬಳಕೆ, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗೆ ಉತ್ತೇಜನ, ಪರಿಶಿಷ್ಟ ಜಾತಿ- ಪಂಗಡದವರಿಗೆ ಆದ್ಯತೆ, ಶಾಲಾ ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣ, ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಕಾಲಮಿತಿಯಲ್ಲೇ ಕೂಲಿ ಪಾವತಿ ಸೇರಿ ಯೋಜನೆಯ ಸಮಗ್ರ ಅನುμÁ್ಠನಕ್ಕೆ ಆದ್ಯತೆ ಕೊಡಬೇಕು ಎಂದು ಸಂಸದ ಜಿ.ಎಸ್. ಬಸವರಾಜು ಹಾಗೂ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಜಂಟಿಯಾಗಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿ ಉದ್ದೇಶದಿಂದ ನರೇಗಾ ಯೋಜನೆ ಅನುμÁ್ಟನಕ್ಕೆ ತರಲಾಗಿದ್ದು, ಈ ಯೋಜನೆಯನ್ನು ಲೋಪದೋಷವಾಗದಂತೆ ಹಾಗೂ ಹಣ ದುರ್ಬಳಕೆಯಾಗದಂತೆ ಅನುμÁ್ಠನಗೊಳಿಸಬೇಕು. ಕೃಷಿ, ತೋಟಗಾ ರಿಕೆ ಸೇರಿದಂತೆ ನರೇಗಾ ಯೋಜನೆಯಡಿ ಅನುμÁ್ಟನಗೊಳಿಸಬಹುದಾದ ಎಲ್ಲವನ್ನೂ ಸಮಗ್ರವಾಗಿ ಅನುμÁ್ಟನಗೊಳಿಸಿ ಈ ಯೋಜನೆ ಯಶಸ್ವಿಯಾಗುವಂತೆ ಕ್ರಮ ವಹಿಸುವಂತೆ…

ಮುಂದೆ ಓದಿ...

ತುಮಕೂರು: ಸ್ಮಾರ್ಟ್‍ಸಿಟಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ – ಡಿಸಿ

ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಕಾಮಗಾ ರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾ ರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸ್ಮಾರ್ಟ್ ಸಿಟಿ ಯೋಜನೆ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಾಗರೀಕರಿಗೆ ಅತ್ಯವಶ್ಯಕವಾಗಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ ಜನರ ಬಳಕೆಗೆ ಅನುವು ಮಾಡಿಕೊಡಬೇಕು ಎಂದು ನಿರ್ದೇಶಿಸಿದರು. ಕೆಸ್ಸಾರ್ಟಿಸಿ ನಿಲ್ದಾಣ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಸರ್ಕಾರದ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾ ರಿಯನ್ನು ಚುರುಕುಗೊಳಿಸಲು ಕ್ರಮ ವಹಿಸಬೇಕು. ಜೊತೆಗೆ ಕುಡಿಯುವ ನೀರು ಒದಗಿಸುವ ಯೋಜನೆ, ಉದ್ಯಾನವನ, ರಸ್ತೆ ಅಭಿವೃದ್ಧಿ ಸೇರಿದಂತೆ ಜನರಿಗೆ ಅತ್ಯವಶ್ಯಕವಾಗಿರುವ ಕಾಮಗಾರಿಗಳನ್ನು ತುರ್ತಾಗಿ ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ರಾಜ್ಯದ ಏಳು ನಗರದಲ್ಲಿ ತುಮಕೂರು ಜಿಲ್ಲೆಯು ಸ್ಮಾರ್ಟ್‍ಸಿಟಿ ಕಾಮಗಾರಿ ಪ್ರಗತಿಯಲ್ಲಿ ಉತ್ತಮ ಸ್ಥಾನ ಪಡೆದಿರುವುದು ಶ್ಲಾಘನೀಯ. ಸ್ಮಾರ್ಟ್ ಸಿಟಿ ಯೋಜನೆಯ…

ಮುಂದೆ ಓದಿ...

ತುಮಕೂರು : ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ!!

ತುಮಕೂರು :      45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.    ರವಿಕುಮಾರ್ ಬಂಧಿತ ಆರೋಪಿ. ಈತ ಬೆಂಗಳೂರಿನ ನಿವಾಸಿಯಾಗಿದ್ದು, ಸುಲಿಗೆ ಮಾಡಲು ನಿಟ್ಟೂರು-ಸಂಪಿಗೆ ರಸ್ತೆಯ ಸಿಂಗಸಂದ್ರ ಗೇಟ್ ಬಳಿ ಶೆಡ್ ಬಳಿ ಮಡಿಕೆ ಕೊಳ್ಳಲು ಬಂದು, ಮಡಿಕೆ ಮಾರುವವರ ಕುತ್ತಿಗೆಗೆ ಲಾಂಗ್ ನಿಂದ ಹಲ್ಲೆ ನಡೆಸಿ ಅವರ ಬಳಿಯಿದ್ದ ಸುಮಾರು 45 ಗ್ರಾಂ ಮಾಂಗಲ್ಯ ಸರವನ್ನು ಕಿತ್ತುಕೊಂಡು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾನೆ.       ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪತ್ತೆಹಚ್ಚಲು ಸಹಕರಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ರವರು  ಅಭಿನಂದಿಸಿದ್ದಾರೆ.  

ಮುಂದೆ ಓದಿ...

ಅನೈತಿಕ ಸಂಬಂಧ ಪ್ರಶ್ನೆ ; ಸೊಸೆಯಿಂದಲೇ ಅತ್ತೆಯ ಕೊಲೆ

ಶಿರಾ :         ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅತ್ತೆಯನ್ನು ಸೊಸೆಯೇ ಪೆಟ್ರೋಲ್ ಸುರಿದು ಕೊಲೆ ಮಾಡಿರುವ ದುರ್ಘಟನೆ ತಾಲ್ಲೂಕಿನ ಗೌಡನಗೆರೆಯ ಉಜ್ಜನಕುಂಟೆ ಗ್ರಾಮದಲ್ಲಿ ನಡೆದಿದೆ.        ಗ್ರಾಮದ ಸರೋಜಮ್ಮ(65) ಕೊಲೆಯಾದ ದುರ್ದೈವಿ. ಇವರ ಸೊಸೆ ಸುಧಾಮಣಿ ಮತ್ತು ಈಕೆಯ ಪ್ರಿಯಕರ ಶ್ರೀರಂಗಪ್ಪ ಕೊಲೆಗೈದ ಆರೋಪಿಗಳು.      ಸರೋಜಮ್ಮ ರವರು ತಮ್ಮ ಮನೆಯಲ್ಲಿ ಸುಟ್ಟಗಾಯಗಳಿಂದ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಕುರಿತು ತಾವರೆಕೆರೆ ಪಿಎಸ್ಐ ಪಾಲಾಕ್ಷಪ್ರಭು ರವರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ ವೇಳೆ ಅನುಮಾನ ಬಂದು ಮೇಲಧಿಕಾರಿಗಳಿಗೆ  ಈ ಕುರಿತು ಮಾಹಿತಿ ನೀಡಿದ್ದಾರೆ.        ನಂತರ ಪೊಲೀಸ್ ಅಧೀಕ್ಷಕರು ಪರಿಶೀಲನೆ ನಡೆಸಿ ಎಫ್ಎಸ್ಎಲ್  ವೈಜ್ಞಾನಿಕ ತನಿಖೆ ನಡೆಸಲಾಗಿ ಇದು ಕೊಲೆ ಎಂದು ಶಂಕಿಸಿದ್ದಾರೆ. ಈ ಕುರಿತು ಸರೋಜಮ್ಮರ ಅಳಿಯ, ಸೊಸೆಯ ಮೇಲೆ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ…

ಮುಂದೆ ಓದಿ...

ಹಳ್ಳಿ ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು : ಸಚಿವ ಜೆಸಿಎಂ

ಹುಳಿಯಾರು: ಪಟ್ಟಣದ ಪ್ರಖ್ಯಾತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಓದಿದ ಪಠ್ಯ, ಬರೆಯುವ ಪರೀಕ್ಷೆ, ಪಡೆಯುವ ಪದವಿಯನ್ನೇ ಹಳ್ಳಿ ವಿದ್ಯಾರ್ಥಿಗಳೂ ಪಡೆಯುತ್ತಾರೆ. ಆದರೂ ಹಳ್ಳಿ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಇದೆ. ಇದನ್ನು ಬಿಟ್ಟು ಮುನ್ನುಗ್ಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‍ಗಳ ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಕೊರೊನಾ ಅಲೆಯಿಂದಾಗಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕ್ಲಾಸ್ ಅನಿವಾರ್ಯವಾಗಿದೆ. ಹಾಗಾಗಿ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಆನ್‍ಲೈನ್ ಶಿಕ್ಷಣಕ್ಕೆ ನೆರವಾಗಲೆಂದು ಆರ್ಥಿಕ ಸಂಕಷ್ಟದಲ್ಲೂ 165 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 1.58 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‍ಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಚಾಟಿಂಗ್ ಮಾಡಿ ಕಾಲಾಹರಣಕ್ಕೆ ಟ್ಯಾಬ್‍ಗಳನ್ನು ಬಳಸದೆ ಜ್ಞಾನಾರ್ಜನೆಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಜವಾಬ್ದಾರಿಯುತ ಪ್ರಜೆಗಳನ್ನಾಗಿ ಮಾಡಲು ಶಿಕ್ಷಣ ಕೊಡುತ್ತಿದ್ದೇವೆ. ಪರೀಕ್ಷೆಗಾಗಿ ಓದದೆ ಜ್ಞಾನ ಸಂಪಾದನೆಗಾಗಿ ವಿದ್ಯಾರ್ಥಿಗಳು ಓದಬೇಕಿದೆ. ವಿಷಯದ…

ಮುಂದೆ ಓದಿ...

ತುಮಕೂರು : ಸ್ಮಾರ್ಟ್’ಸಿಟಿ ಡಿಜಿಟಲ್ ಲೈಬ್ರರಿ ಮುಡಿಗೆ ಮೂರನೇ ಪ್ರಶಸ್ತಿ ಗರಿ

 ತುಮಕೂರು :       ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರಮಟ್ಟದಲ್ಲಿ ಸ್ಮಾಟ್ರ್ಸಿಟಿ ಯೋಜನೆಗಳ 6ನೇ ವಾರ್ಷಿಕೋತ್ಸವ ನಿಮಿತ್ತ ನಡೆದ ಸ್ವರ್ಧೆಗಳಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಡಿಜಿಟಲ್ ಗ್ರಂಥಾಲಯಕ್ಕೆ 3ನೇ ಸ್ಥಾನ ದೊರಕಿದೆ. ತುಮಕೂರು ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಒಂದಾದ ಡಿಜಿಟಲ್ ಲೈಬ್ರರಿ ಯೋಜನೆಗೆ “Soಛಿiಚಿಟ ಂsಠಿeಛಿಣs” ವಿಭಾಗದಲ್ಲಿ ಈ ಪ್ರಶಸ್ತಿ ಲಭಿಸಿದೆ.       ಜೂನ್ 25ರಂದು ನಡೆದ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ(MoHUA) 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಳಲ್ಲಿ India Smart Cities Awards Contest 2020  (ISAC 2020) ದೇಶದ 100 ಸ್ಮಾರ್ಟ್ ಸಿಟಿಗಳಲ್ಲಿ ಅನುμÁ್ಠನಗೊಂಡಿರುವ ಉತ್ತಮ ಯೋಜನೆಗಳ ಪೈಕಿ “ಡಿಜಿಟಲ್ ಲೈಬ್ರರಿ”ಯೋಜನೆಗೆ ಪ್ರಶಸ್ತಿ ಲಭಿಸಿದೆ.        ಎಲ್ಲಿಂದಲಾದರೂ ಓದು- ಈ ಲೈಬ್ರರಿಯ ವಿಶೇಷತೆ: ಈ ಪ್ರಶಸ್ತಿಯು ವಿಶಿಷ್ಟ…

ಮುಂದೆ ಓದಿ...

ಕೊರೋನಾದಿಂದ ಒಂದೇ ದಿನ ಪತಿ-ಪತ್ನಿಯ ಸಾವು

ಹುಳಿಯಾರು:       ಕೊರೊನಾದಿಂದ ಪತಿ-ಪತ್ನಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿದ ಘಟನೆ ಹುಳಿಯಾರು ಹೋಬಳಿ ಕುರಿಹಟ್ಟಿಯಲ್ಲಿ ನಡೆದಿದೆ.        ಕುರಿಹಟ್ಟಿ ಗೊಲ್ಲರಹಟ್ಟಿ ಗ್ರಾಮದ ರಮೇಶ್ (52) ಹಾಗೂ ಪತ್ನಿ ತೊಳಸಮ್ಮ (45) ಇಬ್ಬರು ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ. ರಾತ್ರಿ 9 ಗಂಟೆ ಸಮಯಲ್ಲಿ ಪತಿ ಸಾವನ್ನಪ್ಪಿದರೆ, ಪತ್ನಿ ರಾತ್ರಿ 12 ಕ್ಕೆ ಸಾವನ್ನಪ್ಪಿದ್ದಾರೆ.        ತೊಳಸಮ್ಮ ಅವರಿಗೆ ಕೊರೊನಾ ದೃಢಪಟ್ಟು ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ರಮೇಶ್ ಕೂಡ ಕೊರೊನಾದಿಂದ ತಿಪಟೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಒಂದೇ ರಾತ್ರಿ ಬೇರೆ ಬೇರೆ ಕಡೆ ಸಾವನ್ನಪ್ಪಿದ್ದಾರೆ. ಮೃತರಿಗೆ ತಂದೆ, ತಾಯಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಮೃತರ ಸಂಸ್ಕಾರ ಮೃತರ ಜಮೀನಿನಲ್ಲಿ ನಡೆಯಿತು.

ಮುಂದೆ ಓದಿ...

ಹುಳಿಯಾರು ಪ.ಪಂ.ಗೆ ಸಚಿವರ ಬೆಂಬಲಿಗರಿಗೆ ನಾಮಿನಿ

ಹುಳಿಯಾರು :       ಹುಳಿಯಾರು ಪಟ್ಟಣ ಪಂಚಾಯ್ತಿಗೆ ಸರ್ಕಾರದಿಂದ ಐವರು ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಸಿದ್ಧತೆ ನಡೆದಿದೆ. ಈ ಐವರೂ ಸಹ ಜಿಲ್ಲಾ ಉಸ್ತುವಾರಿ ಸಚಿವರ ಬೆಂಬಲಿಗರಾಗಿದ್ದಾರೆ. ಇವರಲ್ಲಿ ಮೂವರು ಮಾಜಿ ಸದಸ್ಯರಾಗಿದ್ದು ಇಬ್ಬರು ಹೊಸ ಸದಸ್ಯರಾಗಿದ್ದಾರೆ. 16 ಚುನಾಯಿತ ಸದಸ್ಯರ ಸಂಖ್ಯಾ ಬಲವುಳ್ಳ ಪಂಚಾಯ್ತಿಗೆ ಸರ್ಕಾರ ಐವರನ್ನು ನಾಮ ನಿರ್ದೇಶನ ಮಾಡಲು ಮುಂದಾಗಿದೆ. ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಶಿಫಾರಸ್ಸಿನಂತೆ ಪಪಂ ಮಾಜಿ ಸದಸ್ಯರುಗಳಾದ ಬಡ್ಡಿಪುಟ್ಟರಾಜು, ಗೀತಾಬಾಬು, ಗ್ರಾಪಂ ಮಾಜಿ ಸದಸ್ಯ ಕಾರ್ಪೆಂಟರ್ ದುರ್ಗಯ್ಯ ಹಾಗೂ ಬಳೆದಾಸಪ್ಪ, ಅಲ್ಲಾಭಕಶ್ ನಾಮ ನಿರ್ದೇಶನಗೊಳ್ಳಲಿದ್ದಾರೆ. ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ನಾಗರಾಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಈ ಐವರ ಮಾಹಿತಿ ಸಂಗ್ರಹಿಸಲು ನಿರ್ದೇಶನ ನೀಡಿದ್ದಾರೆ. ಅಲ್ಲದೆ ಸರ್ಕಾರದ ಕಾರ್ಯದರ್ಶಿ ಎ.ವಿಜಯ್‍ಕುಮಾರ್ ಅವರು ಹುಳಿಯಾರು ಪಟ್ಟಣ ಪಂಚಾಯ್ತಿಗೆ ಪತ್ರ ಬರೆದು…

ಮುಂದೆ ಓದಿ...

ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ : ಬಿ.ಎ.ಬಸವರಾಜ್

ತುಮಕೂರು :        ನಗರದಲ್ಲಿ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‍ಸಿಟಿ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬ ಮಾಡದೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.        ನಗರದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಕ್ರೀಡಾಂಗಣ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಎಂಪ್ರೆಸ್ ಕಾಲೇಜು ಸೇರಿದಂತೆ ಗ್ರಂಥಾಲಯ ಕಾಮಗಾರಿಗಳ ವೀಕ್ಷಣೆ ಮಾಡಿದ ಸಚಿವರು, ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಗಳನ್ನು ಮುಗಿಸುವಂತೆ ನಿರ್ದೇಶಿಸಿದರು. ವೀಕ್ಷಣೆ ವೇಳೆ ಸ್ಥಳದಲ್ಲೇ ಅಧಿಕಾರಿಗಳಿಂದ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ವಿಳಂಬಕ್ಕೆ ಆಸ್ಪದ ಕೊಡದೆ ಸಮನ್ವಯ ಸಾಧಿಸಿಕೊಂಡು ಹಗಲು ಮತ್ತು ರಾತ್ರಿ ಪಾಳಿಯಲ್ಲಿ ಕಾಮಗಾರಿಗಳನ್ನು ಶೀಘ್ರ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು. ಇದೇ ವೇಳೆ ಎಂಪ್ರೆಸ್ ಕಾಲೇಜಿನಲ್ಲಿ ನಡೆಯುತ್ತಿದ್ದ ಲಸಿಕಾಕರಣ ಕಾರ್ಯವನ್ನೂ ವೀಕ್ಷಿಸಿ, ಲಸಿಕಾಕರಣ…

ಮುಂದೆ ಓದಿ...