ತುಮಕೂರು : 83 ಗ್ರಾಮಗಳ ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲು ನಿರ್ಣಯ

ತುಮಕೂರು:       ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಸುಸ್ಥಿರ ಜಲಮೂಲ ಹೊಂದಿರುವ 83 ಗ್ರಾಮಗಳ ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲು ನಿರ್ಣಯ ಕೈಗೊಳ್ಳಲಾಯಿತು.     ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.       ಈ ಸಭೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 7 ಬಹುಗ್ರಾಮ ಕುಡಿಯುವ ಯೋಜನೆ ಮೂಲಕ 83 ಸುಸ್ಥಿರ ಜಲಮೂಲ ಹೊಂದಿರುವ ಗ್ರಾಮಗಳ ಪ್ರತಿ ಮನೆ ಮನೆಗೂ 24*7 ನೀರು ಒದಗಿಸಲು ಕಾರ್ಯಾತ್ಮಕವಾಗಿ ನಳ ಅಳವಡಿಕೆಗಾಗಿ ಕ್ರಿಯಾ ಯೋಜನೆಗೆ ಒಪ್ಪಿಗೆ ತೆಗೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಣಯ ತೆಗೆದುಕೊಳ್ಳಲಾಯಿತು.       ನಂತರ ಜಿಲ್ಲಾ ಪಂಚಾಯತ್ ಮುಖ್ಯ…

ಮುಂದೆ ಓದಿ...

ಮಾವು ವ್ಯಾಪಾರಸ್ಥರಿಗೆ ಭಾರಿ ನಷ್ಟ

ಹುಳಿಯಾರು:      ಕೊರೋನಾ ಕಾರಣ ಮಾವಿನ ಹಣ್ಣಿನ ವ್ಯಾಪಾರ ಸಂಪೂರ್ಣ ಕುಸಿದಿದೆ. ಮಾವು ಖರೀದಿಸುವವರ ಸಂಖ್ಯೆ ಬಹಳ ವಿರಳವಾಗಿದೆ. ಹೀಗಾಗಿ ವ್ಯಾಪಾರಸ್ಥರು ನಷ್ಟ ಅನುಭವಿಸುವಂತಾಗಿದೆ.      ಸರ್ಕಾರ ತಳ್ಳು ಗಾಡಿಗಳಲ್ಲಿ ಹಣ್ಣಿನ ವ್ಯಾಪಾರಕ್ಕೆ ಅವಕಾಶ ನೀಡಿರುವುದರಿಂದ, ಅನೇಕರು ಅಂಗಡಿ ಮುಚ್ಚಿ ತಳ್ಳು ಗಾಡಿಗಳಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ. ಅಲ್ಲದೇ ಮಹಿಳೆಯರು ಬುಟ್ಟಿಯಲ್ಲಿ ಮಾರುತ್ತಿದ್ದಾರೆ. ಆದರೂ ವ್ಯಾಪಾರದ ಅವಧಿ 6 ರಿಂದ 10 ರ ವರೆವಿಗೆ ಮಾತ್ರ ಇರುವುದರಿಂದ ವ್ಯಾಪಾರವೂ ಉತ್ತಮವಾಗಿಲ್ಲ. ಫ್ರೂಟ್ಸ್ ವ್ಯಾಪಾರವನ್ನೇ ನೆಚ್ಚಿಕೊಂಡಿರುವ ಅನೇಕ ಕುಟುಂಬಗಳು ಜೀವನ ನಡೆಸುತ್ತಿವೆ. ಕಳೆದ ಎರಡು ತಿಂಗಳ ಹಿಂದೆ ದ್ರಾಕ್ಷಿ ವ್ಯಾಪಾರ ಮಾಡಿ ಅಲ್ಪಸ್ಪಲ್ಪ ಆದಾಯ ಗಿಟ್ಟಿಸಿಕೊಂಡಿದ್ದ ವ್ಯಾಪಾರಿಗಳು ಈಗ ಕೋವಿಡ್ ಲಾಕ್‍ಡೌನ್ ಕಾರಣ ಮಾವು ಮಾರಲಾಗದೆ ಚಿಂತಾಕ್ರಾಂತರಾಗಿದ್ದಾರೆ. ಕೆಲವರು ಮಾವಿನ ಮರದಲ್ಲೇ ವ್ಯಾಪಾರ ಮಾಡಿ ನಂತರ ಹಣ್ಣು ಮಾಡಿ ಮಾರುವವರಿದ್ದಾರೆ. ಇವರಿಗೆ ವ್ಯಾಪಾರವಾಗದ ಹಣ್ಣುಗಳು ಕೊಳೆಯುತ್ತಿರುವುದು ಮತ್ತಷ್ಟು…

ಮುಂದೆ ಓದಿ...

ಕೇಂದ್ರ ಸರ್ಕಾರದ 7 ವರ್ಷದ ಸಾಧನೆ ಶೂನ್ಯ : ಪರಮೇಶ್ವರ್

ತುಮಕೂರು:        ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 7 ವರ್ಷದ ಸಾಧನೆ ಶೂನ್ಯವಾಗಿದ್ದು, ದೇಶದ ಆರ್ಥಿಕತೆ ಉತ್ತಮ ಪಡಿಸುವಲ್ಲಿ, ಯುವಕರಿಗೆ ಉದ್ಯೋಗ ಸೃಷ್ಠಿಸುವಲ್ಲಿ, ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವೈಫಲ್ಯವಾಗಿದೆ. ಎಲ್ಲ ಕ್ಷೇತ್ರಗಳ ಅಭಿವೃದ್ಧಿಯಲ್ಲೂ ವಿಫಲವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಟೀಕಿಸಿದರು. 2014 ರಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾದಾಗ ದೇಶದ ಜನ ಹೊಸ ಚಿಂತನೆ, ಹೊಸ ಯೋಜನೆ, ಆವಿಷ್ಕಾರಗಳ ನಿರೀಕ್ಷೆಯಲ್ಲಿದ್ದರು. ಆದರೆ ಬಹು ಬೇಗ ಆ ನಿರೀಕ್ಷೆಗಳು ಹುಸಿಯಾಗ ತೊಡಗಿದವು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನರೇಂದ್ರ ಮೋದಿಯವರು ಪ್ರಧಾನಿಯಾದ ಸಂದರ್ಭದಲ್ಲಿ ದೇಶದಲ್ಲಿ ಜಿಡಿಪಿ ಶೇ. 8.1 ರಷ್ಟಿತ್ತು. ಕ್ರಮೇಣ ಇದು ಕುಸಿಯುತ್ತಾ ಬಂದಿತು. ಈಗ ಈ ಜಿಡಿಪಿ ಮೈನಸ್‍ಗೆ ಹೋಗುವಂತಹ ಕುಸಿತವನ್ನು ಕಾಣುತ್ತಿದ್ದೇವೆ. ಇದು ಕೇಂದ್ರ ಸರ್ಕಾರದ ದೊಡ್ಡ ಸಾಧನೆಯಾಗಿದೆ ಎಂದರು. ಒಂದು…

ಮುಂದೆ ಓದಿ...