ತುಮಕೂರು : ಕೊರೋನಾ ಜಾಗೃತಿ ರಥಕ್ಕೆ ಚಾಲನೆ

ತುಮಕೂರು:       ತುಮಕೂರು ನಗರದ ಎಲ್ಲಾ ವಾರ್ಡ್‍ಗಳಲ್ಲಿ ಕೊರೋನಾ ನಿಯಂತ್ರಣ ಕುರಿತು ಜನ ಜಾಗೃತಿ ಮೂಡಿಸಲು ದಯಾಭವನ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಮಹಾನಗರ ಪಾಲಿಕೆ ಆವರಣದಲ್ಲಿಂದು ಹಮ್ಮಿಕೊಂಡಿದ್ದ ಕೊರೋನಾ ಜಾಗೃತಿ ರಥಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ ನೀಡಿದರು.       ನಂತರ ಮಾತನಾಡಿದ ಅವರು ಜನರಲ್ಲಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಈ ಕಾರ್ಯಕ್ರಮ ಶ್ಲಾಘನೀಯ ಎಂದರು.       ಮಹಾನಗರ ಪಾಲಿಕೆಯ ಮೇಯರ್ ಬಿ.ಜಿ. ಕೃಷ್ಣಪ್ಪ ಮಾತನಾಡಿ, ದಯಾಭವನ ಸಂಸ್ಥೆ ನೀಡುತ್ತಿರುವ ಈ ಸೇವೆಯನ್ನು ನಮ್ಮ ಎಲ್ಲಾ ಕಾರ್ಪೊರೇಟರ್‍ಗಳು ಉಪಯೋಗಿಸಿಕೊಂಡು ಅವರ ವಾರ್ಡ್‍ಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ಕೊಟ್ಟರು. ದಯಾಭವನ ಸಂಸ್ಥೆಯ ಮುಖ್ಯಸ್ಥ ಫಾದರ್ ಜಿನೇಶ್ ವರ್ಕಿ ಮಾತನಾಡಿ, ಈಗಾಗಲೇ ಸಂಸ್ಥೆ ವತಿಯಿಂದ ಕುಣಿಗಲ್ ತಾಲ್ಲೂಕಿನ ಎಲ್ಲಾ ಹಳ್ಳಿಗಳಲ್ಲಿ ಜಾಗೃತಿ ರಥದ ಮುಖಾಂತರ ಕೊರೋನಾ…

ಮುಂದೆ ಓದಿ...

ತುಮಕೂರು : Mucor Mycosis ಗೆ ಚಿಕಿತ್ಸೆ ನೀಡಲು ಅಗತ್ಯ ಕ್ರಮ

ತುಮಕೂರು:       ಸರ್ಕಾರದ ಮಾರ್ಗ ಸೂಚಿ ಯನ್ವಯ ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಒuಛಿoಡಿ ಒಥಿಛಿosisಗೆ ಸಂಬಂಧಿಸಿದಂತೆ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ನಡೆಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು Mucor Mycosis ಚಿಕಿತ್ಸೆ ಸಂಬಂಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳ ಇಎನ್‍ಟಿ ಹಾಗೂ Mucor Mycosis ಗೆ ಚಿಕಿತ್ಸೆ ನೀಡುವ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮಾತನಾಡಿ, ಒuಛಿoಡಿ ಒಥಿಛಿosisಗೆ ಈಗಾಗಲೇ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಶಸ್ತ್ರಚಿಕಿತ್ಸೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಎಲ್ಲಾ ರೀತಿಯಲ್ಲಿಯೂ ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ ತಿಳಿಸಿದರು.       ಈಗಾಗಲೇ ಖಾಸಗಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ Mucor Mycosis ಗೆ ಚಿಕಿತ್ಸೆ ಆರಂಭಿಸಲಾಗಿದ್ದು, ಚಿಕಿತ್ಸೆ ಯಶಸ್ವಿಯಾಗಿ ನಡೆಯುತ್ತಿರುವ ಬಗ್ಗೆ ವೈದ್ಯರಿಂದ ಮಾಹಿತಿ…

ಮುಂದೆ ಓದಿ...

ರಾಜ್ಯದಲ್ಲಿ 10 ಲಕ್ಷ ಮನೆ ನಿರ್ಮಿಸುವ ಗುರಿ : ಸಚಿವ ವಿ.ಸೋಮಣ್ಣ

ತುಮಕೂರು:      ಸರ್ಕಾರವು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಗಳ ಮನೆಗಳನ್ನು ನಿರ್ಮಿಸುವ ಮಹತ್ತರ ಗುರಿ ಹೊಂದಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.      ನಗರದ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆರ್ಶೀವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವವರ ಜೊತೆಗೆ ಸರ್ಕಾರ ಸದಾ ಇರುತ್ತದೆ. ಈಗಾಗಲೇ ಕೊರೋನಾ ಪರಿಹಾರವನ್ನೂ ಸಹ ಘೋಷಿಸಿದ್ದು, ಸೋಂಕು ನಿಯಂತ್ರಣ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.     ರಾಜ್ಯದಲ್ಲಿ ಆದ್ಯತೆಗನುಸಾರವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸುಮಾರು ಮೂರು ಲಕ್ಷ ಮನೆಗಳನ್ನು ನಿರ್ಮಿಸಿ ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗದ ವಸತಿರಹಿತ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದರು.  …

ಮುಂದೆ ಓದಿ...

ತುಮಕೂರು : ಅಧಿಕಾರಿಗಳ ಕೃಪಾಕಟಾಕ್ಷಕ್ಕೆ ಪೇದೆಗಳು ಬಲಿಪಶು..!?

ತುಮಕೂರು :       ಜೂಜು ಅಡ್ಡೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದ್ದು, ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಗುಬ್ಬಿ ಪೊಲೀಸ್ ಪೇದೆ ಸಿದ್ದರಾಜು ಮತ್ತು ಜಿಲ್ಲಾ ಅಪರಾಧ ಪತ್ತೆ ದಳದ ಪೇದೆ ಮಲ್ಲೇಶ್ ಅವರುಗಳನ್ನು ಅಮಾನತು ಮಾಡಲಾಗಿದೆ. ಇದರ ಬಹುಮುಖ್ಯ ಭಾಗವಾಗಿದ್ದ ಜಿಲ್ಲಾ ಅಪರಾಧ ಪತ್ತೆ ದಳದ ಇನ್ಸ್‍ಪೆಕ್ಟರ್ ಎಂ.ವಿ ಶೇಷಾದ್ರಿ ಮತ್ತು ಅಂದಿನ ಗುಬ್ಬಿ ವೃತ್ತ ನಿರೀಕ್ಷಕ ರಾಮಕೃಷ್ಣ ಮತ್ತು ಇತರರನ್ನು ಅಮಾನತು ಮಾಡಿರುವುದಿಲ್ಲ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ.       ಗುಬ್ಬಿ ತಾಲ್ಲೂಕಿನ ಹಲವು ಭಾಗಗಳಲ್ಲಿ ಜೂಜಿನ ಅಡ್ಡೆಗಳು ಎಗ್ಗಿಲ್ಲದೆ ಸಾಗುತ್ತಿವೆ, ಇಡೀ ತಾಲ್ಲೂಕಿನಾದ್ಯಂತ ನಡೆಯುತ್ತಿರುವ ಇಸ್ಪೀಟ್ ಅಡೆÀ್ಡಗಳಿಗೆ ಅವುಗಳನ್ನು ನಡೆಸುವ ಜೂಜುಕೋರರ ರಕ್ಷಣೆಗೆ ನಿಂತಿದ್ದು ಮತ್ತಿನ್ಯಾರೂ ಅಲ್ಲ, ಅಂದಿನ ಇನ್ಸ್‍ಪೆಕ್ಟರ್ ರಾಮಕೃಷ್ಣ. ಇವರು ಗುಬ್ಬಿ ತಾಲ್ಲೂಕಿನ ವೃತ್ತ ನೀರಿಕ್ಷಕರ ಖುರ್ಚಿಯಲ್ಲಿ ಕೂತ ದಿನದಿಂದ ಜೂಜು ಅಡೆÀ್ಡಗಳು ನಾಯಿ ಕೊಡೆಗಳಂತೆ ತಲೆ ಎತ್ತಿದ್ದವು. ವೃತ್ತ…

ಮುಂದೆ ಓದಿ...