ಕೊರಟಗೆರೆ : ಇಸ್ಪೀಟ್ ದಂಧೆ : 12 ಮಂದಿ ಬಂಧನ, 1ಲಕ್ಷ ವಶ

ಕೊರಟಗೆರೆ :        ಕಾಟೇನಹಳ್ಳಿ ಕೆರೆ ಅಂಗಳದಲ್ಲಿ ಪ್ರತಿನಿತ್ಯ ನಡೆಯುತ್ತಿದ್ದ ಅಕ್ರಮ ಜೂಜು ಅಡ್ಡೆಯ ಮೇಲೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪಿಎಸೈ ಮಹಾಲಕ್ಷ್ಮೀ ನೇತೃತ್ವದ ಪೊಲೀಸರ ತಂಡ 12ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.       ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ಕಾಟೇನಹಳ್ಳಿ ಕೆರೆ ಅಂಗಳದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದ 12ಜನ ಜೂಜು ಕೋರರಿಂದ 1ಲಕ್ಷ 11ಸಾವಿರ ನಗದನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ, ತ್ಯಾಮಗೊಂಡ್ಲು, ದಾಸಬ್‍ಪೇಟೆ, ತುಮಕೂರು ಮತ್ತು ಕೊರಟಗೆರೆ ಮೂಲದ ದೇವರಾಜು, ಶಿವರಾಜು, ಶ್ರೀನಿವಾಸ, ನರಸೀಯಪ್ಪ, ನಾರಾಯಣ, ಕುಮಾರ, ಸಂಜೀವರಾಜು, ನಾಗರಾಜು, ಮಂಜಣ್ಣ, ರೇಣುಕಾಮೂರ್ತಿ, ವಾಹಿದ್, ಕೃಷ್ಣಪ್ಪ ಬಂಧಿತ ಆರೋಪಿಗಳು. ಇನ್ನೂಳಿದ ಕೆಂಪ, ಸಂಜು, ಪ್ರಜ್ವಲ್ ಎಂಬ 3ಜನರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.      …

ಮುಂದೆ ಓದಿ...

ಮೂರನೇ ಅಲೆಗೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ

ತುಮಕೂರು :       ಕೋವಿಡ್-19 ಮೂರನೇ ಅಲೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು.       ಅವರು ತಮ್ಮ ಕಚೇರಿಯಲ್ಲಿಂದು ಮಾಹಿತಿ ನೀಡುತ್ತಾ ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ತಗುಲುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಶಿಶು ವೈದ್ಯಕೀಯ ವ್ಯವಸ್ಥೆ ಕಲ್ಪಿಸಿಕೊಳ್ಳಲಾಗುತ್ತಿದೆ ಎಂದರು. ಈಗಾಗಲೇ ಜಿಲ್ಲೆಯಲ್ಲಿ 16 ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ಸುಮಾರು 60 ಕ್ಕಿಂತ ಹೆಚ್ಚು ಶಿಶು ವೈದ್ಯರಿದ್ದು ಎಲ್ಲಾ ತಾಲೂಕುಗಳಲ್ಲಿಯೂ ಶಿಶುವೈದ್ಯರ ವ್ಯವಸ್ಥೆ ಮಾಡಲು ಸಿದ್ಧರಾಗಿದ್ದೇವೆ. ಇದಲ್ಲದೆ ಅವಶ್ಯಕತೆಗನುಗುಣವಾಗಿ ಶಿಶು ವೈದ್ಯಕೀಯ ವಿಭಾಗಕ್ಕೆ ಸಂಬಂಧಿಸಿದ ಸಿದ್ದಾರ್ಥ ಕಾಲೇಜಿನ 8 ಪಿಜಿ ವಿದ್ಯಾರ್ಥಿಗಳು ಹಾಗೂ ಡಿಎನ್‍ಬಿ ಕೋರ್ಸ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಜಿಲ್ಲೆಯಲ್ಲಿ ಒಟ್ಟು 3600 ಹಾಸಿಗೆಗಳಿವೆ. ಈ ಪೈಕಿ 528 ಹಾಸಿಗೆಗಳನ್ನು ಪಿಡಿಯಾಟ್ರಿಕ್…

ಮುಂದೆ ಓದಿ...