ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮವಹಿಸಿ : ಬಿ.ಸಿ.ಪಾಟೀಲ

ತುಮಕೂರು:      ಮುಂಗಾರು ಹಂಗಾಮಿನ ಕೃಷಿ ಪರೀಕ್ಷೆಯಲ್ಲಿ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ರೈತರಿಗೆ ಸಮರ್ಪಕವಾಗಿ ಹಂಚಿಕೆ ಮಾಡಲು ಕ್ರಮ ವಹಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲೆಯ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಹಾಗೂ ಪೂರ್ವ ಸಿದ್ಧತೆ ಕುರಿತು ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಕೃಷಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಬಿತ್ತನೆ ಬೀಜಗಳನ್ನು ವಿತರಿಸುವಾಗ ಗುಣಮಟ್ಟ ಖಾತ್ರಿಪಡಿಸಿಕೊಂಡೇ ರೈತರಿಗೆ ಪೂರೈಸಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆಯಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು ಎಂದು ನಿರ್ದೇಶಿದರು.       ಉತ್ತಮ ಗುಣಮಟ್ಟದ ಬಿತ್ತನೆ ಬೀಜ ವಿತರಣೆ ಮಾಡಬೇಕು. ಎಲ್ಲಿಯೂ ರೈತರಿಗೆ…

ಮುಂದೆ ಓದಿ...

ಹೊರ ರಾಜ್ಯದ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ತುಮಕೂರು:       ಕೊರೋನಾ ಲಾಕ್‍ಡೌನ್‍ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿರುವ ಹೊರ ರಾಜ್ಯದ ಸುಮಾರು 250 ಮಂದಿ ಕೂಲಿ ಕಾರ್ಮಿಕರಿಗೆ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸ್ವಾಮಿ ವಿವೇಕಾನಂದ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ನೀಡಲಾದ ಆಹಾರ ಪದಾರ್ಥದ ಕಿಟ್‍ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ವಿತರಿಸಿದರು.       ಕೋವಿಡ್ ಸಂಕಷ್ಟದ ಸಮಯದಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಈ ಕೂಲಿ ಕಾರ್ಮಿಕರು ಹೊರ ರಾಜ್ಯದವರಾಗಿರುವುದರಿಂದ ಈವರೆಗೆ ಯಾವುದೇ ಸಂಘ ಸಂಸ್ಥೆಗಳವರು ಇವರನ್ನು ಗುರುತಿಸಿ ನೆರವಿಗೆ ಧಾವಿಸಿರಲಿಲ್ಲ. ಆದರೆ ಸ್ವಾಮಿ ವಿವೇಕಾನಂದ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಸಂಸ್ಥೆ ಹೊರ ರಾಜ್ಯದಿಂದ ಬಂದು ಹಲವು ದಿನಗಳಿಂದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿರುವ ಈ ಕೂಲಿ ಕಾರ್ಮಿಕರ ಸಂಕಷ್ಟವನ್ನು ಅರಿತು ಜಿಲ್ಲಾ ಉಸ್ತುವಾರಿ…

ಮುಂದೆ ಓದಿ...

ತುಮಕೂರು : ಎಸ್ಪಿ ಕೋನ ವಂಶಿಕೃಷ್ಣ ವರ್ಗಾವಣೆ!!

ತುಮಕೂರು:       ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಕೋನ ವಂಶಿಕೃಷ್ಣರವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.       ಎರಡು ವರ್ಷಗಳಿಗೂ ಹೆಚ್ಚು ಕಾಲ ಪ್ರಾಮಾಣಿಕವಾಗಿ ಹಾಗೂ ದಕ್ಷ ಆಡಳಿತಗಾರರಾಗಿ ಕಾರ್ಯ ನಿರ್ವಹಿಸಿದ್ದ ಇವರು, ಇವರ ಅವಧಿಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಹಲವಾರು ಹೊಸ ಯೋಜನೆಗಳು ಮತ್ತು ವಿನೂತನ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಿದ್ದು, ಇವರ ವಿಶೇಷ ಕಾರ್ಯಕ್ರಮಗಳು ಜಿಲ್ಲೆಗೆ ಉತ್ತಮ ಕೆಲಸಗಳಾಗಿವೆ ಎಂಬುದು ಸಾರ್ವಜನಿಕರ ಮೆಚ್ಚುಗೆ ಆಗಿದೆ. ಭ್ರಷ್ಟತೆಯ ಕರಿ ನೆರಳು ತಮ್ಮ ಮೇಲೆ ಬೀಳದ ಹಾಗೆ ತಮ್ಮ ಅವಧಿಯನ್ನು ಪೂರ್ಣಗೊಳಿಸಿದ್ದು, ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಆತ್ಮೀಯವಾದ ಬಾಂಧÀವ್ಯ ಹೊಂದಿದ್ದರು. ಕಳೆದ ವರ್ಷ ಬಂದ ಕೋವಿಡ್‍ನ ಸಂದರ್ಭದಲ್ಲಿ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಜನಮನ್ನಣೆ ಗಳಿಸಿದ್ದರು. ಹಾಗೂ ತಮ್ಮ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಕೊರೋನಾ…

ಮುಂದೆ ಓದಿ...