ಕೋವಿಡ್‍ನಿಂದ ಅನಾಥವಾದ ಮಕ್ಕಳ ಭವಿಷ್ಯಕ್ಕೆ ಆದ್ಯತೆ ನೀಡಿ: ಸಚಿವೆ

ತುಮಕೂರು :      ಕೋವಿಡ್ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಮತ್ತು ಚಿಕಿತ್ಸೆ ನೀಡಲು ಸಕಲ ರೀತಿಯಲ್ಲಿಯೂ ಸಜ್ಜಾಗುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.       ಕೊರೋನಾ ಸಂಭಾವ್ಯ 3ನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಕೈಗೊಳ್ಳಬೇಕಾದ ಮುಂಜಾಗರೂಕ ಕ್ರಮಗಳ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಎದುರಾದಲ್ಲಿ ಮಕ್ಕಳಿಗೆ ಸಮರ್ಪಕವಾಗಿ ಚಿಕಿತ್ಸೆ ಒದಗಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಸಜ್ಜಾಗಿರಬೇಕು ಎಂದು ನಿರ್ದೇಶಿಸಿದರು.       ಕೋವಿಡ್ ಮೂರನೇ ಅಲೆಗೆ ಹೆಚ್ಚಿನ ಮಕ್ಕಳು ಬಾಧಿತರಾಗುವ ನಿರೀಕ್ಷೆಯಿದ್ದು, ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‍ಗಳ ವ್ಯವಸ್ಥೆ, ಆಮ್ಲಜನಕ, ವೆಂಟಿಲೇಟರ್ ಸೇರಿದಂತೆ ಅಗತ್ಯ ಸಿದ್ಧತೆ ಕೈಗೊಳ್ಳುವುದರೊಂದಿಗೆ…

ಮುಂದೆ ಓದಿ...

ಇಂಧನ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಂಕಷ್ಟ:

      ಇಂಧನ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಂಕಷ್ಟ  ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ  ಕೆ.ಎನ್. ರಾಜಣ್ಣ ತಿಳಿಸಿದರು.       ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂಧನ ಬೆಲೆ ಹೆಚ್ಚಳದಿಂದ ರೈತರು ಸೇರಿದಂತೆ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ರೈತರು ಟ್ರಾಕ್ಟರ್‍ಗೆ ಡೀಸೆಲ್ ಹಾಕಿಸಲು ಯೋಚನೆ ಮಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಒಂದು ಬ್ಯಾರಲ್ ಖಚ್ಚಾ ತೈಲ ಬೆಲೆ 125 ಡಾಲರ್ ಇತ್ತು, ಆಗ 60 ರೂ.ಗೆ ಪೆಟ್ರೋಲ್, 50 ರೂ.ಗೆ ಡೀಸೆಲ್ ಸಿಗುತ್ತಿತ್ತು. ಈಗ ಒಂದು ಬ್ಯಾರಲ್ ಖಚ್ಚಾ ತೈಲ ಬೆಲೆ 71 ಡಾಲರ್ ಇದೆ. ಇವರು ಅರ್ಧದಷ್ಟು ಇಳಿಸಬೇಕಿತ್ತು. ಅದನ್ನು ಬಿಟ್ಟು ಪ್ರತಿದಿನ ಇಂಧನ ಬೆಲೆ ಹೆಚ್ಚು ಮಾಡುತ್ತಿದ್ದಾರೆ. ಇದು ಯಾರೂ ಒಪ್ಪುವಂತಹುದಲ್ಲ, ಸರ್ಕಾರ ತೆರಿಗೆಗಳನ್ನು ರದ್ದುಪಡಿಸಿದರೆ ಕೇವಲ…

ಮುಂದೆ ಓದಿ...