ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಬಿ.ಸುರೇಶ್ ಗೌಡ

ತುಮಕೂರು: ಊರ್ಡಿಗೆರೆ ಹೋಬಳಿ, ಅರೆಗುಜ್ಜನಹಳ್ಳ್ಳಿ ಗ್ರಾಮ ಪಂಚಾಯಿತಿ, ಸೀತಕಲ್ಲು ಗ್ರಾಮ ಪಂಚಾಯಿತಿ, ಊರ್ಡಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ವೈದ್ಯಕೀಯ ಸಿಬ್ಬಂದಿ, ಕೊರೋನ ಸೋಂಕಿತ ಕುಟುಂಬಳಿಗೆ ಹಾಗೂ ಆಟೋ ಚಾಲಕರಿಗೆ ಉಚಿತವಾಗಿ ಆಹಾರ ದಾನ್ಯಗಳ ಕಿಟ್‍ಗಳನ್ನು ಜಿಲ್ಲಾದ್ಯಕ್ಷರಾದ ಬಿ.ಸುರೇಶ್ ಗೌಡ ವಿತರಿಸಿ ಅವರ ಸೇವೆಯನ್ನು ಶ್ಲಾಘೀಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಬಿ.ಸುರೇಶ್ ಗೌಡ ಇಡೀ ದೇಶದಲ್ಲೇ ಮೊದಲ ಬಾರಿಗೆ ಕೊವಿಡ್-19 ಸೋಕಿಂನಿಂದ ಮೃತಪಟ್ಟ ಬಿಪಿಎಲ್ ಕುಟುಂಬ ವರ್ಗದ ಒಬ್ಬ ಸದಸ್ಯರಿಗೆ 1 ಲಕ್ಷ ರೂಪಾಯಿಯ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಘೋಷಣೆ ಮಾಡಿರುವುದು ಅತ್ಯಂತ ಸ್ವಾಗತಾರ್ಹ. ಇದರಿಂದ ರಾಜ್ಯದ ಬಿಪಿಎಲ್ ಕಾರ್ಡ್ ಹೊಂದಿರುವ ವ್ಯಕ್ತಿಗಳು ಮೃತ ಪಟ್ಟರೆ ಅಂತಹ ಕುಟುಂಬಗಳ ಒಬ್ಬರಿಗೆ ಅನ್ವಯವಾಗುವಂತೆ 1 ಲಕ್ಷ ರೂಪಾಯಿ ಪರಿಹಾರ ಘೋಷಣೆ…

ಮುಂದೆ ಓದಿ...

ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ಸಿಗುವಂತಾಗಬೇಕು : ಶಾಸಕ

ತುಮಕೂರು:       ನಗರದಲ್ಲಿ ಆಶ್ರಯ ಮನೆ ಯೋಜನೆಯಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಈ ಹಿಂದೆ ಅವಕಾಶ ಕಲ್ಪಿಸಲಾಗಿತ್ತು. ಸದರಿಯವರು 22 ಸಾವಿರಕ್ಕೂ ಹೆಚ್ಚು ಆನ್‍ಲೈನ್ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇದರಲ್ಲಿ 4 ಸಾವಿರ ಅರ್ಜಿಗಳು ಮಾತ್ರ ಅರ್ಹವಾಗಿರುತ್ತದೆ. ಮತ್ತೊಂದೆಡೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮಗೂ ಅರ್ಜಿ ಸಲ್ಲಿಸಲು ಅವಕಾಶ ಕೊಡಿ, ನಾವು ಅರ್ಹರು ಎಂದು ನೂರಾರು ಸಾರ್ವಜನಿಕರು ನನ್ನ ಬಳಿ ಬಂದು ಅಳಲು ತೋಡಿಕೊಂಡಿದ್ದಾರೆ. ಈ ಕಾರಣದಿಂದ ಈ ಸಭೆಯ ನಿರ್ಣಯದಂತೆ ಮತ್ತೊಮ್ಮೆ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲು ಮಾನ್ಯ ವಸತಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು ತಿಳಿಸಿದರು.       ತಮ್ಮ ಶಾಸಕ ಕಛೇರಿಯಲ್ಲಿ ನಗರ ಆಶ್ರಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ನಗರದಲ್ಲಿ…

ಮುಂದೆ ಓದಿ...

ಮೊದಲ ಡೋಸ್ ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದಿರುವವರೆಲ್ಲರಿಗೂ ಲಸಿಕೆ

ತುಮಕೂರು :       ಕೋವಿಡ್ ಮೊದಲನೇ ಲಸಿಕೆ ಪಡೆದು 84 ದಿನ ಪೂರೈಸಿ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದಿರುವ ಸಾರ್ವಜನಿಕರು ಸೇರಿದಂತೆ 21592 ಫ್ರಂಟ್‍ಲೈನ್ ಹಾಗೂ ಹೆಲ್ತ್ ಕೇರ್ ವರ್ಕರ್ಸ್‍ಗಳಿಗೆ ಆದ್ಯತೆ ಮೇರೆಗೆ ಶನಿವಾರ ಮತ್ತು ಭಾನುವಾರದಂದು ಹತ್ತಿರದ ಲಸಿಕಾ ಕೇಂದ್ರದಲ್ಲಿ ಲಸಿಕೆ ನೀಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ತಹಸೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜರುಗಿದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸರ್ಕಾರದಿಂದ ಲಸಿಕೆ ಪೂರೈಕೆಯಾಗಲಿದ್ದು, ಶನಿವಾರದಿಂದ ಮೂರು ದಿನಗಳ ಕಾಲ ಜಿಲ್ಲೆಯ ಎಲ್ಲಾ ಲಸಿಕಾ ಕೇಂದ್ರಗಳಲ್ಲಿಯೂ ಸಮರ್ಪಕವಾಗಿ ಲಸಿಕೆ ಲಭ್ಯವಾಗಲಿದೆ. ಹಾಗಾಗಿ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಜಿಲ್ಲೆಯಲ್ಲಿ ಈಗಾಗಲೇ 574781 ಮೊದಲ ಡೋಸ್, 123577 ಎರಡನೇ ಡೋಸ್…

ಮುಂದೆ ಓದಿ...