ತುಮಕೂರು : ಬಾವಿಗೆ ಬಿದ್ದು ತಾಯಿ ಮಕ್ಕಳ ದುರಂತ ಸಾವು!!

ಕೋರ:      ಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ ಮತ್ತು ಇಬ್ಬರು ಮಕ್ಕಳು ಸೇರಿ ಮೂವರು ಗುರುವಾರ ಸಾವನ್ನಪ್ಪಿದ್ದಾರೆ.      ಹೋಬಳಿಯ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ಈ ದುರ್ಘಟನೆ ಜರುಗಿದೆ. ತಿರುಮಲಪಾಳ್ಯದ ಕುಮಾರ್ ಎಂಬುವರ ಪತ್ನಿ ಹೇಮಲತಾ (34) ಹಾಗೂ ಮಕ್ಕಳಾದ ಮಾನಸ (6), ಪೂರ್ವಿಕಾ (3) ಬಾವಿಗೆ ಬಿದ್ದು ಸಾವನ್ನಪ್ಪಿದವರು.       ಗುರುವಾರ ಹುಣ್ಣಿಮೆ ಪ್ರಯುಕ್ತ ತೋಟದಲ್ಲಿ ಮೊಸರನ್ನ ಎಡೆ ಹಾಕಲು ಹೋಗಿದ್ದಾರೆ. ಆ ಸಂದರ್ಭದಲ್ಲಿ ಮಾನಸ ಬಾವಿಯ ದಡದಲ್ಲಿದ್ದ ಸೀಬೆ ಹಣ್ಣಿನ ಮರದಲ್ಲಿ ಹಣ್ಣು ಕೀಳಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾಳೆ. ಜತೆಯಲ್ಲೇ ಇದ್ದ ಪೂರ್ವಿಕಾ ಸಹ ಅಕ್ಕನಂತೆ ಬಾವಿಗೆ ಬಿದ್ದಿದ್ದಾಳೆ. ತನ್ನ ಇಬ್ಬರು ಮಕ್ಕಳು ಬಾವಿಗೆ ಬಿದ್ದಿದ್ದನ್ನು ನೋಡಿದ ತಾಯಿ ಹೇಮಲತಾ ಅವರು ಮಕ್ಕಳನ್ನು ರಕ್ಷಿಸಲು ಬಾವಿಗೆ ಹಾರಿದ್ದಾರೆ. ಮೂವರು ಮೇಲೆ ಬರಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ.

ಮುಂದೆ ಓದಿ...

ಜಲ ಜೀವನ್ ಮಿಷನ್ ಯೋಜನೆ ಅನುಷ್ಟಾನಕ್ಕೆ ಕ್ರಿಯಾ ಯೋಜನೆ ತಯಾರಿಗೆ ಸೂಚನೆ

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಜಲ ಜೀವನ್ ಮಿಷನ್’ ಯೋಜನೆಯನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಅನುμÁ್ಠನಗೊಳಿಸಲು ಕ್ರಿಯಾ ಯೋಜನೆ ತಯಾರಿಸಿ ಮಾಹಿತಿ ಒದಗಿಸುವಂತೆ ಸಂಸದ ಜಿ.ಎಸ್. ಬಸವರಾಜು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಲ ಜೀವನ್ ಮಿಷನ್ ಯೋಜನೆಯ ಅನುμÁ್ಠನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಲಜೀವನ್ ಮಿಷನ್ ಯೋಜನೆಯ ಯಶಸ್ವಿ ಅನುμÁ್ಠನಕ್ಕಾಗಿ ಗ್ರಾಮವಾರು ಕ್ರಿಯಾ ಯೋಜನೆ ರೂಪಿಸಿ, ರೂಪು-ರೇμÉ ಸಿದ್ಧಪಡಿಸಿಸುವಂತೆ ನಿರ್ದೇಶಿಸಿದರು. ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 82 ಹಳ್ಳಿಗಳ 11671 ಮನೆಗಳಿಗೆ ಕಾರ್ಯಾತ್ಮಕ ನಳ ಅಳವಡಿಸುವ ಕಾಮಗಾರಿಯನ್ನು ಕಾಲಮಿತಿಯೊಳಗೆ ಮುಗಿಸಿ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು. ಜಿಲ್ಲೆಯ ಹತ್ತು ತಾಲೂಕಿನಲ್ಲೂ ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನಗೊಳಿಸಬೇಕು. ನೀರಿನ ಮೂಲವಿರುವ ಸ್ಥಳದಲ್ಲಿ ಆದ್ಯತೆ ಮೇರೆಗೆ ಯೋಜನೆಯನ್ನು ಸಮರ್ಪಕವಾಗಿ ಅನುμÁ್ಟನಗೊಳಿಸಬೇಕು ಎಂದು ತಾಕೀತು ಮಾಡಿದರು.…

ಮುಂದೆ ಓದಿ...

ಉತ್ತಮ ಶಿಕ್ಷಣ ಆಮ್ ಆದ್ಮಿ ಧ್ಯೇಯ : ಪೃಥ್ವಿ ರೆಡ್ಡಿ

ತುಮಕೂರು: ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದ್ದು, ಉತ್ತಮ ಪರ್ಯಾಯ ರಾಜಕೀಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದೆಹಲಿಯಲ್ಲಿ ಆಗಿರುವ ಬದಲಾವಣೆಯನ್ನು ತುಮಕೂರು ಜಿಲ್ಲೆಯಲ್ಲಿ ಕಾಣಬೇಕು ಎನ್ನುವ ಕಾರಣಕ್ಕೆ ಆಮ್ ಆದ್ಮಿ ಜನರ ಬಳಿಗೆ ತೆರಳುತ್ತಿದೆ, ದೆಹಲಿಯಲ್ಲಿರುವ ಕ್ರೇಜಿವಾಲ್ ನೇತೃತ್ವದ ಸರ್ಕಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಜಾರಿಗೆ ತಂದಿರುವ ಕ್ರಾಂತಿಕಾರಿ ಬದಲಾವಣೆಗಳು ದೇಶಕ್ಕೆ ಅವಶ್ಯಕವಾಗಿದ್ದು, ಉನ್ನತ ವ್ಯಾಸಂಗ, ಉತ್ತಮ ಆರೋಗ್ಯ ಕಲ್ಪಿಸುವುದೇ ಆಮ್‍ಆದ್ಮಿ ಪಕ್ಷದ ಧ್ಯೇಯವಾಗಿದೆ ಎಂದು ಹೇಳಿದರು. ಪಕ್ಷದ ಜಿಲ್ಲಾ ಉಸ್ತುವಾರಿ ಬಿ.ಟಿ.ನಾಗಣ್ಣ ಮಾತನಾಡಿ ಜಿಲ್ಲೆಯಲ್ಲಿ ತೆಂಗು ಪ್ರಮುಖ ಬೆಳೆಯಾಗಿದ್ದು, ಬೆಳೆಗೆ ತಕ್ಕಂತೆ ಬೆಲೆ ಸಿಗದೇ ರೈತರು ಪರದಾಡುತ್ತಿದ್ದಾರೆ. ಕಳೆದ ಮೂವತ್ತು ವರ್ಷಗಳಿಂದಲೂ ಹೇಮಾವತಿ ನೀರಿನ ಲಭ್ಯತೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಜಿಲ್ಲೆ ವಿಫಲವಾಗಿದೆ, ಇಂದಿಗೂ ಪಾವಗಡ ಸೇರಿದಂತೆ ಅನೇಕ…

ಮುಂದೆ ಓದಿ...

ತೈಲ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ತುಮಕೂರು: ಪ್ರಧಾನಿ ನರೇಂದ್ರ ಮೋದಿಯವರು ಜನರನ್ನ ಮೂರ್ಖರನ್ನಾಗಿಸಿದ್ದಾರೆ. ಸಬ್ಕಾ ವಿಕಾಸ್ ಹೆಸರಲ್ಲಿ ಯಾರ ವಿಕಾಸ ಮಾಡಲು ಹೊರಟಿದ್ದಾರೆಂಬುದು ತಿಳಿಯುತ್ತಿಲ್ಲ.ಈಗಾಗಲೇ ದಿನನಿತ್ಯದ ಗೃಹ ಬಳಕೆ ವಸ್ತುಗಳು, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವ ಬೆನ್ನಲ್ಲೇ ವಿದ್ಯುತ್ ದರ ಏರಿಕೆಯು ಬಡಜನರಿಗೆ ಗಾಯದ ಮೇಲೆ ಉಪ್ಪು ಸುರಿದಂತಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಪರವಾಗಿವೆ. ದೀನ ದಲಿತರ, ರೈತರ ಹಾಗೂ ಆರ್ಥಿಕವಾಗಿ ಹಿಂದುಳಿದವರ ಪಾಲಿಗೆ ಗೋಮುಖ ವ್ಯಾಘ್ರದಂತಾಗಿವೆ. ಜನರು ಕೊರೊನಾ ಸಂಕಷ್ಟದಲ್ಲಿ ಸಿಲುಕಿ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಪರಿಸ್ಥಿತಿ ಭೀಕರ ಸ್ವರೂಪ ಪಡೆದಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿದೆ. ಕಷ್ಟದಲ್ಲಿ ಇರುವವರಿಗೆ ಮತ್ತಷ್ಟು ಕಷ್ಟ ಕೊಡುತ್ತಿದೆ. ಕಷ್ಟದಲ್ಲಿರುವ ಜನತೆಯ ಸಮಸ್ಯೆ ಆಲಿಸಿಲ್ಲ. ಅವೈಜ್ಞಾನಿಕವಾಗಿ ವಿದ್ಯುತ್, ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ಬೆಲೆ ಏರಿಕೆ ನೀತಿಯನ್ನು…

ಮುಂದೆ ಓದಿ...