ಅನಧಿಕೃತ ಪ್ರಾಣಿ ಹತ್ಯೆ, ಸಾಗಾಣಿಕೆ ತಡೆಗಟ್ಟುವಂತೆ ಡಿಸಿ ಸೂಚನೆ

ತುಮಕೂರು:     ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಅನಧಿಕೃತ ಪ್ರಾಣಿಹತ್ಯೆ, ಸಾಗಾಣಿಕೆ ತಡೆಗಟ್ಟುವ ಸಮತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅನಧಿಕೃತ ಪ್ರಾಣಿ ಹತ್ಯೆ ಹಾಗೂ ಸಾಗಾಣಿಕೆ ಬಗ್ಗೆ ದೂರು ಬಂದರೆ ತಕ್ಷಣವೇ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಜಂಟಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ನಿರ್ದೇಶಿಸಿದರು ಜಾನುವಾರು ಖರೀದಿಸಿದ್ದರೆ ಅದಕ್ಕೆ ಮಾಲಿಕತ್ವದ ದಾಖಲೆ ಪಡೆದುಕೊಳ್ಳಬೇಕು. ಅನಧಿಕೃತ ಪ್ರಾಣಿ ಹತ್ಯೆ ಮತ್ತು ಸಾಗಾಣಿಕೆಗೆ ಸಂಪೂರ್ಣ ಕಡಿವಾಣ ಹಾಕಬೇಕು. ಮಾಲೀಕತ್ವ ಹಾಗೂ ಇಯರ್ ಟ್ಯಾಗ್ ಸೇರಿದಂತೆ ಜಾನುವಾರು ‘ನನ್ನ ಮಾಲಿಕತ್ವ’ದ್ದು ಎನ್ನುವುದಕ್ಕೆ ಜಾನುವಾರು ಮಾಲೀಕರ ಬಳಿ ದಾಖಲೆ ಇಲ್ಲದಿದ್ದರೆ ಹತ್ತಿರದ ಗೋಶಾಲೆ ವಶಕ್ಕೆ ಜಾನುವಾರುಗಳನ್ನು ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ಅನಧಿಕೃತ…

ಮುಂದೆ ಓದಿ...

ಅನುದಾನ ಸದ್ಬಳಕೆಯಲ್ಲಿ ತುಮಕೂರು ರಾಜ್ಯದಲ್ಲಿಯೇ ಪ್ರಥಮ- ಸಚಿವ

ತುಮಕೂರು :        ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಸದ್ಬಬಳಕೆಯಲ್ಲಿ ರಾಜ್ಯದಲ್ಲಿಯೇ ತುಮಕೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ನಾರಾಯಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಅನುದಾನ ಬಳಕೆ ವಿಚಾರದಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ. ಕೋವಿಡ್ ನಿಂದ ಲಾಕ್ ಡೌನ್ ಆಗಿದ್ದರೂ ಕೆಲಸ ವೇಗವಾಗಿ ನಡೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಆಸಕ್ತಿಯಿಂದ ಕೆಲಸ ಮಾಡಿದ್ದಾರೆ ಎಂದು ಪ್ರಶಂಸಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹತ್ವ ಏನು ಎನ್ನುವುದನ್ನು ರಾಜ್ಯಕ್ಕೇ ತೋರಿಸಿಕೊಡುತ್ತೇನೆ. ಹಿಂದೆಂದೂ ಆಗಿರದಂತಹ ಅಭಿವೃದ್ಧಿ ಕಾರ್ಯ ಮಾಡುತ್ತೇನೆ. ಪ್ರತಿ ತಾಲೂಕು, ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ಕ್ರೀಡಾಂಗಣ…

ಮುಂದೆ ಓದಿ...