4,000 ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ

  ತುಮಕೂರು :      ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ಹಾಗೂ ನವ್ಯದಿಶಾ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಜಿಲ್ಲೆಯ 4000 ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ಇಂದು ವಿತರಿಸಲಾಯಿತು. ಮಾಸ್ಕ್ ವಿತರಿಸಿದ ನಂತರ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ಸಂಚಾಲಕ ಶಿವಲಿಂಗಯ್ಯ ಮಾತನಾಡಿ ಕೋವಿಡ್-19ರ ಫ್ರೆಂಟ್‍ಲೈನ್ ಕಾರ್ಯಕರ್ತೆಯರಾದ ಅಂಗನವಾಡಿ ಸಿಬ್ಬಂದಿಗಳು ತಮ್ಮ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಕೋವಿಡ್ ಸೋಂಕು ಹರಡದಂತೆ ಹಾಗೂ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವುದರಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ನಟರಾಜ್ ಮಾತನಾಡಿ ಕೋವಿಡ್-19ರ ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಈ ಸೇವೆಯನ್ನು ಗಮನಿಸಿ ಗ್ರಾಮೀಣ ಕೂಟದಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ…

ಮುಂದೆ ಓದಿ...

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಿ – ಸಚಿವ

 ತುಮಕೂರು :       ಜಿಲ್ಲೆಯಲ್ಲಿ ಜುಲೈ 19 ರಿಂದ 22ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆ ತುಮಕೂರು(ದ) ಜಿಲ್ಲೆ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ನಡೆಯಲಿರುವ ಪರೀಕ್ಷೆಯನ್ನು ಶಿಕ್ಷಣ ಇಲಾಖೆಯೊಂದಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕು. ಯಾವುದೇ ಕಾರಣಕ್ಕೂ ಎಲ್ಲಿಯೂ ಸಮಸ್ಯೆಯಾಗದಂತೆ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು ಎಂದು ನಿರ್ದೇಶಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಪರೀಕ್ಷೆಯ ಮುನ್ನ ಮತ್ತು ನಂತರ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳು, ಪೀಠೋಪಕರಣ ಹಾಗೂ ಇನ್ನಿತರ ವಸ್ತುಗಳನ್ನು ಸ್ಯಾನಿಟೈಜ್…

ಮುಂದೆ ಓದಿ...