ತುಮಕೂರು : 7 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣ

 ತುಮಕೂರು :       ಜಿಲ್ಲೆಯಲ್ಲಿ ಏಳು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು ಉನ್ನತೀಕರಣಕ್ಕೆ ಆಯ್ಕೆಯಾಗಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ‘ವಿಶ್ವ ಯುವ ಕೌಶಲ್ಯ ದಿನಾಚರಣೆ’ ಅಂಗವಾಗಿ ನಡೆದ ವಚ್ರ್ಯುಯಲ್ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೈಗಾರಿಕಾ ಸಂಸ್ಥೆಗಳು ಮತ್ತು ಉದ್ಯಮಗಳ ನಡುವಿನ ಸ್ಕಿಲ್ ಗ್ಯಾಪ್‍ನ್ನು ಹೊಂದಿಸಿಕೊಳ್ಳಲು ಅಗತ್ಯವಾದ ಕೌಶಲ್ಯ ಅಭಿವೃದ್ಧಿ ಪಡಿಸುವ ಸಲುವಾಗಿ ಟಾಟಾ ಟೆಕ್ನಾಲಜಿ ಲಿಮಿಟೆಡ್ ಸಹಭಾಗಿತ್ವದೊಂದಿಗೆ ಪ್ರಥಮ ಹಂತದಲ್ಲಿ ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣ ಕಾರ್ಯ ಪಾರಂಭವಾಗಿದ್ದು, ಜಿಲ್ಲೆಯ 7 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು ಉನ್ನತೀಕರಣಕ್ಕೆ ಆಯ್ಕೆಯಾಗಿವೆ ಎಂದರು. ಸ್ವಾತಂತ್ರ್ಯ ಪೂರ್ವದಿಂದಲೂ ಕೌಶಲ್ಯ ತರಬೇತಿ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರಸ್ತುತ ದಿನಗಳಲ್ಲಿ ಕೌಶಲ್ಯ ಸಂಬಂಧಿತ ಚಟುವಟಿಕೆಗಳಿಗಿರುವ ಮಹತ್ವವನ್ನು ಅರಿತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೌಶಲ್ಯಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಗಳನ್ನು ಪ್ರಾರಂಭಿಸಿವೆ…

ಮುಂದೆ ಓದಿ...

ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ನೀಡಲು ಆದ್ಯತೆ ಕೊಡಿ; ಸಿಇಒ

 ತುಮಕೂರು :      ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ನೀಡಲು ಹೆಚ್ಚು ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯಿತಿಯಲ್ಲಿಂದು ಎಸ್‍ಬಿಐ ಪ್ರಾಯೋಜಿಸಲ್ಪಟ್ಟ ಗ್ರಾಮೀಣ ಅಭಿವೃದ್ಧಿ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ನಡೆದ ಲೋಕಲ್ ಅಡ್ವೈಸರಿ ಕಮಿಟಿ ಮೀಟಿಂಗ್‍ನ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿವಿಧ ವಾಹನಗಳಿಗೆ ಮಹಿಳಾ ಚಾಲಕಿಯರನ್ನು ನೇಮಿಸುವ ಸಲುವಾಗಿ ಜಿಲ್ಲಾ ಪಂಚಾಯತ್‍ನಿಂದ ಮಹಿಳಾ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಈ ಅಭ್ಯರ್ಥಿಗಳಿಗೆ ಸೂಕ್ತ ಚಾಲನಾ ತರಬೇತಿ ನೀಡಬೇಕು ಎಂದು ನಿರ್zೀಶಿಸಿದರು. ತರಬೇತಿ ಸಂಸ್ಥೆಯಿಂದ ಕೌಶಲ್ಯ ಪಡೆದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ಜೊತೆಗೆ ಮಾರುಕಟ್ಟೆ, ಬ್ರಾಂಡಿಂಗ್ ಮತ್ತು ಲೇಬಲಿಂಗ್ ಕೌಶಲ್ಯತೆಯ ಬಗ್ಗೆಯೂ ತರಬೇತಿ ನೀಡಬೇಕು. ತರಬೇತಿ ಪಡೆದ ಬಳಿಕ ಅವರು ಸ್ವಯಂ ಉದ್ಯೋಗ ಕಟ್ಟಿಕೊಳ್ಳಲು ಸಾಧ್ಯವಾದಷ್ಟು ಸಹಕಾರ ನೀಡಬೇಕು. ತರಬೇತಿ ಪಡೆದ ಬಳಿಕ ಅವರು ಸ್ವಯಂ ಉದ್ಯೋಗದಲ್ಲಿ…

ಮುಂದೆ ಓದಿ...

ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿ ನಿರ್ಮಾಣಕ್ಕೆ ಶಿಲಾನ್ಯಾಸ

ತುಮಕೂರು:      ನಗರದ ಸರಸ್ವತಿಪುರಂ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ರಸ್ತೆಯಲ್ಲಿ ಕರ್ನಾಟಕ ಬ್ಯಾಂಕ್‍ನ ತುಮಕೂರು ಪ್ರಾದೇಶಿಕ ಕಚೇರಿ ಕಟ್ಟಡಕ್ಕೆ ಕರ್ನಾಟಕ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ್ ಅವರು ಪೂಜೆ ಸಲ್ಲಿಸುವ ಮೂಲಕ ಮೂಲಕ ಗುರುವಾರ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ್ ಅವರು, ಜುಲೈ 15 ಕರ್ನಾಟಕ ಬ್ಯಾಂಕಿಗೆ ಸ್ಮರಣೀಯವಾದ ದಿನ. ಕಾರಣ ತುಮಕೂರು ವಲಯದ ರಚನೆ ನಂತರ ಪ್ರಥಮ ಭಾರಿಗೆ ಈ ವಲಯಕ್ಕೆ ವಲಯ ಕಚೇರಿ ನಮ್ಮದೇ ಸ್ವಂತ ಕಟ್ಟಡ ಕಟ್ಟುವಂತಹ ಕಾರ್ಯದ ಶಿಲಾನ್ಯಾಸ ನೆರವೇರಿದೆ. ಈ ಕಟ್ಟಡ ನಿರ್ಮಾಣ 15ರಿಂದ 18 ತಿಂಗಳಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂಬ ಭರವಸೆಯನ್ನು ನೀಡಿದರು. ಬೆಂಗಳೂರಿನ ಪ್ರಾದೇಶಿಕ ಕಚೇರಿ, ಮೈಸೂರಿನ ಪ್ರಾದೇಶಿಕ ಕಚೇರಿಯ ನಂತರ ತುಮಕೂರಿನಲ್ಲಿ ನಿರ್ಮಾಣವಾಗುತ್ತಿರುವುದು ಮೂರನೇ ಪ್ರಾದೇಶಿಕ ಕಚೇರಿಯಾಗಿದ್ದು, ಪ್ರದಾನಿಯವರ ಆತ್ಮನಿರ್ಭರ…

ಮುಂದೆ ಓದಿ...

ಏಳು ವರ್ಷದಲ್ಲಿ ದೇಶವನ್ನು ಮಾರಿದ ಕೇಂದ್ರ ಸರ್ಕಾರ

ತುಮಕೂರು:       ಎಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಕಟ್ಟಿದ ಭಾರತವನ್ನು ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಮಾರಾಟ ಮಾಡಿದ್ದು, ಕೇಂದ್ರ ಸ್ವಾಮ್ಯದ ಕೈಗಾರಿಕೆಗಳ ಖಾಸಗೀಕರಣ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಹೈರಾಣಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಶಫೀವುಲ್ಲಾ ಅಭಿಪ್ರಾಯಪಟ್ಟರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಕಾರ್ಮಿಕ ಘಟಕ, ಎಸ್ಸಿ ಘಟಕ, ಕಿಸಾನ್ ಘಟಕ ಸೇರಿದಂತೆ ವಿವಿಧ ಮಂಚೂಣಿ ಘಟಕಗಳೊಂದಿಗೆ ತೈಲಬೆಲೆ ಏರಿಕೆ ವಿರೋಧಿಸಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಹಮ್ಮಿಕೊಂಡಿದ್ದ ಸೈಕಲ್ ಜಾಥಾವನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸರ್ಕಾರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಿರುವುದರಿಂದ ಜನಸಾಮಾನ್ಯರ ಕೊಳ್ಳುವ ಶಕ್ತಿಯನ್ನು ಕಿತ್ತುಕೊಂಡಂತೆ ಆಗಿದೆ, ಯುಪಿಎ ಸರ್ಕಾರದ ಅವಧಿಯಲ್ಲಿದ್ದ ತೆರಿಗೆಯನ್ನು ದುಪ್ಪಟ್ಟು ಮಾಡುವ ಮೂಲಕ ಜನರ ಜೇಬನ್ನು ಲೂಟಿ ಮಾಡುತ್ತಿದ್ದು, ಜನ ವಿರೋಧಿ ಧೋರಣೆ ಹೊಂದಿರುವ ಕೇಂದ್ರ ಸರ್ಕಾರ ಬೆಲೆ ಏರಿಕೆಗೆ ನಿಯಂತ್ರಣ ಹಾಕದೇ…

ಮುಂದೆ ಓದಿ...

ವಿದ್ಯಾರ್ಥಿಗಳು ಗೈರಾಗದಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ – ಸಚಿವ

ತುಮಕೂರು:       ಯಾವೊಬ್ಬ ವಿದ್ಯಾರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗದಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.        ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ತುಮಕೂರು ತಾಲೂಕಿಗೆ ಸಂಬಂಧಿಸಿದಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಎಲ್ಲಾ ವಿದ್ಯಾರ್ಥಿಗಳು ಬೆಳಿಗ್ಗೆ 8 ಗಂಟೆಯೊಳಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕು. ನಿಗದಿತ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶಿಸಿದರು. ಕಾರಣಾಂತರಗಳಿಂದ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸಮಸ್ಯೆ ಉಂಟಾದ ಮಕ್ಕಳನ್ನು ಸರ್ಕಾರಿ ವಾಹನದಲ್ಲಿಯೇ ಕೇಂದ್ರಕ್ಕೆ ಕರೆತರಬೇಕು. ಸಕಾರಣವಿಲ್ಲದೆ ಮಕ್ಕಳು ಪರೀಕ್ಷೆಗೆ ಗೈರು ಹಾಜರಾದರೆ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಗೈರು ಹಾಜರಾಗಲು ಸಕಾರಣ ಇದ್ದರೆ ಅಂತಹ ಮಕ್ಕಳ ಪಟ್ಟಿಯನ್ನು ಡಿಡಿಪಿಐ ಅಥವಾ ಬಿಇಒಗಳಿಗೆ…

ಮುಂದೆ ಓದಿ...