ಆರ್‍ಟಿಓ ಇನ್ಸ್‍ಪೆಕ್ಟರ್ ಮನೆ ಮೇಲೆ ಎಸಿಬಿ ದಾಳಿ

ತುಮಕೂರು:      ಬೆಂಗಳೂರು ಆರ್‍ಟಿಓ ಇನ್ಸ್‍ಪೆಕ್ಟರ್ ಕೃಷ್ಣಮೂರ್ತಿ ಅವರ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ದೇವರ ಹಳ್ಳಿಯಲ್ಲಿರುವ ಫಾರಂ ಹೌಸ್ ಮೇಲೆ ಹತ್ತಕ್ಕೂ ಹೆಚ್ಚು ಮಂದಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಆಸ್ತಿ ಸಂಪಾದನೆಯ ಬಗ್ಗೆ ಪರಿಶೀಲನೆ ನಡೆಸಿದರು.       ಬೀದರ್, ತುಮಕೂರು, ದಾವಣಗೆರೆಯಲ್ಲಿ ಎಸಿಬಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದೆ. ದಾವಣಗೆರೆಯ ಯೋಜನಾ ನಿರ್ದೇಶಕ ಎಚ್.ಆರ್.ಕೃಷ್ಣಪ್ಪ ಹಾಗೂ ತುಮಕೂರಿನ ಆರ್‍ಟಿಓ ಇನ್ಸ್‍ಪೆಕ್ಟರ್ ಕೃಷ್ಣಮೂರ್ತಿ ಮನೆ ಹಾಗೂ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

ಮುಂದೆ ಓದಿ...

ತುಮಕೂರು: ನಗರ ಠಾಣಾ ಪಿಎಸ್‍ಐ ಅಮಾನತ್ತು

ತುಮಕೂರು: ತುಮಕೂರು ನಗರ ಠಾಣೆಯ ಪಿಎಸ್‍ಐ ಮಂಜುನಾಥ್ ಅಮಾನತ್ತಾಗಿರುತ್ತಾರೆ. ನಗರದ ಸಬ್‍ಇನ್ಸ್‍ಪೆಕ್ಟರ್ ಮಂಜುನಾಥ್‍ರವರನ್ನು ಅಮಾನತ್ತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತ್ತು ಆದೇಶವನ್ನು ಹೊರಡಿಸಿರುತ್ತಾರೆ. ಕರ್ತವ್ಯ ಲೋಪ ಮತ್ತು ಅಧಿಕಾರ ದುರ್ಬಳಕೆ ಮಾಡಿಕೊಂಡ ಬಗ್ಗೆ ದೂರು ನೀಡಿದ ಹಿನ್ನೆಲೆಯಲ್ಲಿ ದೂರನ್ನು ಆಧರಿಸಿ ಪ್ರಾಥಮಿಕ ತನಿಖೆ ಕೈಗೊಂಡು ತನಿಖಾ ವರದಿಯ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್‍ರವರು ಅಮಾನತ್ತು ಮಾಡಿರುತ್ತಾರೆ. ನೂತನ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ನಂತರ ಪಿಎಸ್‍ಐರವರನ್ನು ಅಮಾನತ್ತು ಮಾಡುವ ಮುಖೇನ ಕಾನೂನಿಗೆ ಯಾರೂ ದೊಡ್ಡವರಲ್ಲ, ಇಲಾಖೆಯೊಳಗಿನ ಅಧಿಕಾರಿಗಳು ಸಹ ಯಾವುದೇ ತಪ್ಪು ಮಾಡಬಾರದು, ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂಬ ಸ್ಪಷ್ಟ ಸಂದೇಶವನ್ನು ಈ ಆದೇಶದ ಮುಖಾಂತರ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದೀಗ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಎಸ್ಪಿರವರ ಈ ಕಾರ್ಯ ಕ್ಷಮತೆಗೆ…

ಮುಂದೆ ಓದಿ...

ಚೆನ್ನಾಗಿದ್ದ ರಸ್ತೆಗೆ ಮಣ್ಣು : ಕೆಸರು ಗದ್ದೆಯಂತಾದ ರಸ್ತೆ

ಹುಳಿಯಾರು: ಚೆನ್ನಾಗಿದ್ದ ಜಲ್ಲಿ ರಸ್ತೆಗೆ ಕೆರೆ ಮಣ್ಣು ಹಾಕಿ ಕೆಸರು ಗದ್ದೆ ಮಾಡಿ ಬಿಟ್ರು ಎಂದು ಹುಳಿಯಾರು ಹೋಬಳಿಯ ಬಿಳಿಕಲ್ಲು ಗೊಲ್ಲರಹಟ್ಟಿ ಗ್ರಾಮಸ್ಥರು ಆರೋಪಿಸಿದ್ದಾರೆ. ಯಳನಾಡು ಗ್ರಾಮ ಪಂಚಾಯ್ತಿಯ ತಮ್ಮಡಿಹಳ್ಳಿ ಗೊಲ್ಲರಹಟ್ಟಿ ವರೆವಿಗೂ ಉತ್ತಮವಾದ ಡಾಂಬಾರ್ ರಸ್ತೆ ಮಾಡಿದ್ದಾರೆ. ಅಲ್ಲಿಂದ ಕೇವಲ 2 ಕಿ.ಮೀ ದೂರದಲ್ಲಿ ಬಿಳಿಕಲ್ಲು ಗೊಲ್ಲರಹಟ್ಟಿಯಿದೆ. ಆದರೆ ಅಲ್ಲಿಗೆ ಡಾಂಬಾರ್ ರಸ್ತೆ ಮಾಡದೆ ನಿರ್ಲಕ್ಷ್ಯಿಸಿದ್ದಾರೆ. ಆದರೂ ಏಳೆಂಟು ವರ್ಷಗಳ ಹಿಂದೆ ಜಲ್ಲಿ ರಸ್ತೆ ಮಾಡಿದ್ದು ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಲ್ಲಿ ಎದ್ದು ಜನರ ಓಡಾಟಕ್ಕೆ ತೊಂದರೆಯಾಗಿತ್ತು. ಹಾಗಾಗಿ ಜನಪ್ರತಿನಿಧಿಗಳಿಗೆ ಬಿಳಿಕಲ್ಲು ಗೊಲ್ಲರಟ್ಟಿಯ ರಸ್ತೆಗೆ ಡಾಂಬಾರ್ ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಇಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ. ಆದರೂ ಏಳೆಂಟು ವರ್ಷ ಯಾರೊಬ್ಬರೂ ರಸ್ತೆ ದುರಸ್ಥಿಗಿ ಮುಂದಾಗಿರಲಿಲ್ಲ. ಆದರೆ ಇತ್ತೀಚೆಗಷ್ಟೆ ಜಿಪಂ ಸದಸ್ಯ ವೈ.ಸಿ.ಸಿದ್ಧರಾಮಯ್ಯ ಅವರು ರಸ್ತೆಗೆ ಮಣ್ಣು ಹಾಕಿದ್ದು ಹೇಗೋ ಓಡಾಡುವಂತಿದ್ದ ರಸ್ತೆ…

ಮುಂದೆ ಓದಿ...

 ತುಮಕೂರು : 540 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ

 ತುಮಕೂರು :       ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯಲ್ಲಿಂದು 2021-22ನೇ ಸಾಲಿನ ಲಿಂಕ್ ಡಾಕ್ಯುಮೆಂಡ್ ಕಾರ್ಯಕ್ರಮ, 15ನೇ ಹಣಕಾಸು ಯೋಜನೆ ಸೇರಿ ವಿವಿಧ ಕಾಮಗಾರಿಗಳಿಗೆ 540 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾಗಿ ಕಾರ್ಯದರ್ಶಿ ಡಾ. ರಾಜೇಶ್ ಸಿಂಗ್ ಅನಮೋದನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಿವಿಧ ಸ್ಥಾಯಿ ಸಮಿತಿ ಮತ್ತು ಸಾಮಾನ್ಯ ಸಭೆಯ ಅಧ್ಯಕ್ಷವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಯಡಿ ಕೈಗೊಂಡಿರುವ ಕಾರ್ಯಕ್ರಮಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಇಲಾಖಾವಾರು ರೂಪಿಸಿರುವ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುμÁ್ಟನಗೊಳಿಸಬೇಕು ಎಂದರು. ಶಾಲಾ ಮಕ್ಕಳಿಗಾಗಿ ರೂಪಿಸಿರುವ ಅಕ್ಷರ ದಾಸೋಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮಕ್ಕಳಿಗೆ ನೀಡಲಾಗುವ ಉಚಿತ ಆಹಾರ ಧಾನ್ಯಗಳ ವಿತರಣೆಗೆ ಸೂಕ್ತ ಕ್ರಮವಹಿಸಬೇಕು ಎಂದರಲ್ಲದೆ ಪರಿಶಿಷ್ಟ ಜಾತಿ/ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಸತಿ ನಿಲಯಗಳನ್ನು…

ಮುಂದೆ ಓದಿ...