ತುಮಕೂರು : SSLC ಪರೀಕ್ಷೆ: 23686 ವಿದ್ಯಾರ್ಥಿಗಳ ನೋಂದಣಿ

  ತುಮಕೂರು :        ಜಿಲ್ಲಾದ್ಯಂತ ಜುಲೈ 19 ಹಾಗೂ 22ರಂದು ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಚಿಕ್ಕನಾಯಕನಹಳ್ಳಿಯ 2534, ಗುಬ್ಬಿ ತಾಲ್ಲೂಕಿನ 3295, ಕುಣಿಗಲ್‍ನ 2856, ತಿಪಟೂರಿನ 2869, ತುಮಕೂರಿನ 10094, ಹಾಗೂ ತುರುವೇಕೆರೆಯ 2037 ಸೇರಿದಂತೆ ಒಟ್ಟು 23,686 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ನಂಜಯ್ಯ ತಿಳಿಸಿದ್ದಾರೆ.        ದಕ್ಷಿಣ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ 18, ಗುಬ್ಬಿ-22, ಕುಣಿಗಲ್-17, ತಿಪಟೂರು-14, ತುಮಕೂರು-53 ಹಾಗೂ ತುರುವೇಕೆರೆ 15 ಸೇರಿದಂತೆ ಒಟ್ಟು 139 ಪರೀಕ್ಷಾ ಕೇಂದ್ರಗಳಿದ್ದು, 13198 ಬಾಲಕರು ಹಾಗೂ 10488 ಬಾಲಕಿಯರು ಸೇರಿದಂತೆ ಒಟ್ಟು 23686 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲಾಡಳಿತದಿಂದ ಸಕಲ ಸಿದ್ಧತೆ :-         …

ಮುಂದೆ ಓದಿ...

ಡಿಜಿಟಲ್ ಸಹಿ ಮೂಲಕ ಜನನ-ಮರಣ ಪತ್ರ ವಿತರಣೆ : ಎಡಿಸಿ

ತುಮಕೂರು:       ಡಿಜಿಟಲ್ ಸಹಿಯ ಮುಖಾಂ ತರವೇ ಜನನ ಮರಣ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.       ನಾಗರಿಕ ನೋಂದಣಿ ಪದ್ಧತಿಯಡಿ ಜನನ-ಮರಣ ನೋಂದಣಿಯನ್ನು ಸುವ್ಯವಸ್ಥಿತವಾಗಿ ನಡೆಸುವ ಸಂಬಂಧ ಜೂಮ್ ಮೀಟ್ ಮೂಲಕ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಸಕಾಲಕ್ಕೆ ಸರಿಯಾಗಿ ಜನನ-ಮರಣ ಪ್ರಮಾಣ ಪತ್ರಗಳು ನೋಂದಣಿಯಾಗಲು ಸೂಕ್ತ ಕ್ರಮವಹಿಸಬೇಕು. ಜನನ ಮತ್ತು ಮರಣ ಪ್ರಮಾಣ ಪತ್ರಗಳ ನೋಂದಣಿಯಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಸೂಚಿಸಿದರು. ಮಾರ್ಗಸೂಚಿ ಅನ್ವಯ ಸಕಾಲಕ್ಕೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಬೇಕು.       ಇದರಿಂದ ಫಲಾನುಭವಿಗಳಿಗೆ ನೂರಕ್ಕೆ ನೂರರಷ್ಟು ಸೌಲಭ್ಯ ಲಭ್ಯವಾಗುತ್ತದೆ. ತಡವಾಗಿ ವಿತರಿಸಿದರೆ ಸೌಲಭ್ಯ ಕೈತಪ್ಪುವ ಸಾಧ್ಯತೆ ಇದೆ. ಹಾಗಾಗಿ ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮ…

ಮುಂದೆ ಓದಿ...

ಆತ್ಮಹತ್ಯೆಗೆ ಯತ್ನಿಸಿದ SSLC ವಿದ್ಯಾರ್ಥಿನಿ ಭೇಟಿಯಾದ ಶಿಕ್ಷಣ ಸಚಿವ

ಕೊರಟಗೆರೆ:       ಎಸ್‍ಎಸ್‍ಎಲ್‍ಸಿ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದೆ ಆತ್ಮಹತ್ಯೆಗೆ ಯತ್ನಿಸಿದ ಕೊರಟಗೆರೆ ಪಟ್ಟಣದ ವಿದ್ಯಾರ್ಥಿನಿಯೊಬ್ಬರ ಮನೆಗೆ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶನಿವಾರ ಬೆಳಿಗ್ಗೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.       ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿನಿ ಅಭ್ಯಾಸ ಮಾಡುತ್ತಿದ್ದರು. ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ್ದು, ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಗಮನಿಸಿ ಸಚಿವರು ಭೇಟಿ ನೀಡಿದರು. ಕೋವಿಡ್ ಲಾಕ್‍ಡೌನ್‍ನಿಂದಾಗಿ ವಿದ್ಯಾರ್ಥಿನಿ 10ನೇ ತರಗತಿಯ ಶುಲ್ಕ ಪಾವತಿಸಿ, ಪ್ರವೇಶ ಪಡೆಯಲು ಸಾಧ್ಯವಾಗಿಲ್ಲ. ಜತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಲ್ಕವನ್ನೂ ಪಾವತಿಸಿ ನೋಂದಣಿ ಮಾಡಿಸಿಲ್ಲ. ಕೋವಿಡ್‍ನಿಂದಾಗಿ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬಾಲಕಿ ಆತ್ಮಹತ್ಯೆಗೆ ಮುಂದಾಗಿದ್ದರು ಎಂದು ತಿಳಿದು ಬಂದಿದೆ.       ಬಾಲಕಿ ಮನೆಗೆ ಭೇಟಿ ನೀಡಿದ ಸಚಿವರು ಸಾಂತ್ವನ ಹೇಳಿದರು.…

ಮುಂದೆ ಓದಿ...

ಬಾಲ್ಯ ವಿವಾಹ ತಡೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ತುಮಕೂರು :       ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯದಂತೆ ತಡೆಯಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ, ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಅಧಿನಿಯಮ 2005ರಡಿಯ ಮತ್ತು ಸಖಿ ಯೋಜನೆಯ ಅನುಷ್ಠಾನ ಕುರಿತ ಜಿಲ್ಲಾ ಸಮನ್ವಯ ಸಮಿತಿ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನ, ಸ್ಥೈರ್ಯನಿಧಿ ಯೋಜನೆಯ ಸಮರ್ಪಕ ಅನುಷ್ಠಾನ ಕುರಿತ ಜಿಲ್ಲಾ ಸಮಿತಿ ಮತ್ತು ಜಿಲ್ಲಾ ಮಟ್ಟದ ವಿಧವಾ ಕೋಶ ಮತ್ತು ಶೆಲ್ಟರ್ ಹೋಮ್ಸ್‍ಗಳ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಮಟ್ಟದ ಅಧಿಕಾರಿಗಳು ಸೇರಿದಂತೆ ಬೀಟ್ ಪೆÇಲೀಸರು ಬಾಲ್ಯ ವಿವಾಹ ತಡೆಯವ ಕಾರ್ಯಕ್ಕೆ ಮೊದಲಾದ್ಯತೆ ನೀಡಬೇಕು ಎಂದು ನಿರ್ದೇಶಿಸಿದರು.       ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಹಾಗೂ ಸಮಾಜದಲ್ಲಿ ಅನಿಷ್ಟ…

ಮುಂದೆ ಓದಿ...