ಮಳೆಗೆ ಕೆಸರು ಗದ್ದೆಯಾದ ರಸ್ತೆ

ಗುಬ್ಬಿ:       ತಾಲ್ಲೂಕಿನ ಜಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಜವರೇಗೌಡನಪಾಳ್ಯದಲ್ಲಿರುವ ರಸ್ತೆಯು ಮಳೆ ಬಂದರೆ ಸಾಕು ಕೆಸರು ಗದ್ದೆಯಾಗಿ ಪರಿವರ್ತನೆಯಾಗಿ ಜನ ಜಾನುವಾರುಗಳು ಓಡಾಡಲು ಯೋಗ್ಯವಿಲ್ಲದಂತಾಗುತ್ತದೆ. ಈ ಕುರಿತು ಅನೇಕ ಬಾರಿ ಅಧಿಕಾರಿಗಳಿಗೆ ದೂರು ಕೊಟ್ಟರೂ, ಎಷ್ಟೇ ಮನವಿ ಸಲ್ಲಿಸಿದರೂ ಯಾವೊಬ್ಬ ಅಧಿಕಾರಿಗಳು ಈ ಕಡೆ ತಲೆಹಾಕಿಲ್ಲ ಎಂದು ಊರಿನ ಜನ ಆರೋಪಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯವರು ಈ ರಸ್ತೆಯನ್ನು ನರೇಗಾ ಅಡಿಯಲ್ಲಿ ಸೇರಿಸಿ ರಸ್ತೆ ನಿರ್ಮಾಣ ಮಾಡಿಸಬಹುದಿತ್ತು. ಆದರೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇದರ ಕಡೆ ಗಮನ ಹರಿಸಿಲ್ಲವೆಂದು ಸ್ಥಳೀಯ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಆಪಾದಿಸಿದ್ದಾರೆ. ಸುಮಾರು ಇಪ್ಪತ್ತು ವರ್ಷಗಳಿಂದಲೂ ದುಸ್ಥಿತಿಯಲ್ಲಿದೆ. ಆದರೂ ನಮ್ಮ ಜನಪ್ರತಿನಿಧಿಗಳು ಈ ಬಗ್ಗೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಸ್ಥಳೀಯ ಶಾಸಕರನ್ನು ಕೇಳಿದರೆ ಸರ್ಕಾರ ನನಗೆ ಕೊಟ್ಟ ಅನುದಾನ ವಾಪಸ್ ತೆಗೆದುಕೊಂಡಿದೆ, ಇಲ್ಲದಿದ್ದಲ್ಲಿ ನಾನು ಈ ರಸ್ತೆಗೆ ಹಣ ಹಾಕುತ್ತಿದ್ದೆ…

ಮುಂದೆ ಓದಿ...

ಡಿವೈಗೆರೆ ಗ್ರಾಪಂನ ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ

ಹುಳಿಯಾರು:        ಹಂದನಕೆರೆ ಹೋಬಳಿಯ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿಯ ಉದ್ಯೋಗಖಾತ್ರಿಯಲ್ಲಿ ಅವ್ಯಹಾರ ನಡೆದಿದ್ದು ಮೇಲಧಿಕಾರಿಗಳು ಸೂಕ್ತ ತನಿಖೆ ನಡೆಸುವಂತೆ ತಾಪಂ ಸದಸ್ಯರ ಶ್ರೀಹರ್ಷ ಸೇರಿದಂತೆ ಗ್ರಾಪಂ ಸದಸ್ಯರು ಒತ್ತಾಯಿಸಿದ್ದಾರೆ. ದೊಡ್ಡಎಣ್ಣೇಗೆರೆಯ ಗ್ರಾಪಂ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಎನ್‍ಆರ್‍ಇಜಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 5 ಲಕ್ಷ ರೂ. ಅನುದಾನದಲ್ಲಿ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ಗಮನಕ್ಕೆ ತಂದು ಅವರ ಒಪ್ಪಿಗೆ ಪಡೆದು ಕಾಮಗಾರಿ ಆರಂಭಿಸದೆ ಏಕಾಏಕಿ ತಮಗಿಷ್ಟ ಬಂದವರಿಂದ ಕಾಮಗಾರಿ ಮಾಡಿಸುತ್ತಿದ್ದಾರೆ. ಕಾಮಗಾರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಗುತ್ತಿಗೆದಾರರೇ ತಂದು ಮಾಡಬೇಕಿದ್ದರೂ ಪಂಚಾಯ್ತಿಯಿಂದ ಪ್ರತ್ಯೇಕವಾಗಿ ಪೈಪ್‍ಲೈನ್ ಮಾಡಿ ಕಾಮಗಾರಿ ನೀರು ಪೂರೈಕೆ ಮಾಡುತ್ತಿದ್ದಾರೆ. ಗ್ರಾಪಂನ ಅನೇಕ ಹಳ್ಳಿಗಳಲ್ಲಿ ನಲ್ಲಿ ಹಾಕಿ ನೀರು ಕೊಡಿ ಎಂದು ಕೇಳುತ್ತಿದ್ದರೂ ಸಹ ಅವರಿಗೆ ನಲ್ಲಿ ಸಂಪರ್ಕ ಕೊಡದೆ ಗುತ್ತಿಗೆದಾರರಿಗೆ ನೀರು ಪೂರೈಸಲು ಲಕ್ಷಾಂತರ ರೂ. ವೆಚ್ಚ…

ಮುಂದೆ ಓದಿ...

ತುಮಕೂರು : ಸುಗಮವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ

ತುಮಕೂರು :       ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಜುಲೈ 19 ಹಾಗೂ 22ರಂದು 130 ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ನಂಜಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 21729 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 21672 ವಿದ್ಯಾರ್ಥಿಗಳು ಹಾಜರಾಗಿದ್ದು, 57 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಖಾಸಗಿಯಾಗಿ 326 ಮತ್ತು 1469 ಪುನಾರವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕೋವಿಡ್ ಮಾರ್ಗಸೂಚಿ ಅನ್ವಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿ, ಪ್ರತಿ ವಿದ್ಯಾರ್ಥಿಯನ್ನು ತಪಾಸಣೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಹಾಜರಾಗುವಂತೆ ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಇಲಾಖಾಧಿಕಾರಿಗಳು ಪೋಷಕರನ್ನು ಸಂಪರ್ಕಿಸಿ ಗರಿಷ್ಠ ಹಾಜರಾತಿಗೆ ಕ್ರಮ ವಹಿಸಿದ್ದರು. ಗುಬ್ಬಿ ತಾಲೂಕಿನಲ್ಲಿ ಜುಲೈ 19ರಂದು ಪರೀಕ್ಷೆಗೆ ಗೈರು ಹಾಜರಾಗಿದ್ದ…

ಮುಂದೆ ಓದಿ...