ಬಿಎಸ್‍ವೈ ಸಿಎಂ ಆಗಿ ಮುಂದುವರೆಯಲಿ : ವೀರಶೈವ ಸಮಾಜ

ತುಮಕೂರು: ತಮ್ಮ ಇಳಿ ವಯಸ್ಸನ್ನು ಲಕ್ಕಿಸದೆ ಕೋರೋನ ಸಂದರ್ಭದಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಸಮರ್ಥ ಆಡಳಿತ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸಲು ಅವಕಾಶ ನೀಡುವಂತೆ ಬಿಜೆಪಿ ಹೈಕಮಾಂಡ್‍ಗೆ ತುಮಕೂರು ಜಿಲ್ಲಾ ವೀರಶೈವ ಸಮಾಜ ಹಾಗೂ ವೀರಶೈವ ಸಮಾಜದ ವಿವಿಧ ಸಂಘಟನೆಗಳ ಒಕ್ಕೂಟದ ಪರವಾಗಿ ಟಿ.ಬಿ.ಶೇಖರ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಯಾರದೋ ಮಾತು ಕೇಳಿ ಅವರನ್ನು ಪದಚ್ಯುತಿಗೊಳಿಸಲು ಹೊರಟಿರುವುದು ಖಂಡನೀಯ. ಮುಂದಿನ ಎರಡು ವರ್ಷಗಳ ಅವಧಿಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆಂಬುದು ನಾಡಿನ ಹಲವು ಮಠಾಧೀಶರು, ಜನಸಾಮಾನ್ಯರ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ವೀರಶೈವ ಸಮಾಜವೂ ದ್ವನಿಗೂಡಿಸುತ್ತಿದೆ ಎಂದರು. ರಾಜ್ಯದಲ್ಲಿ ಬಿಜೆಪಿ ಪಕ್ಷ ವಿಧಾನಸಭೆಯಲ್ಲಿ ಎರಡು ಸ್ಥಾನಗಳನ್ನು ಗಳಿಸಲು ಕಷ್ಟವಾಗಿದ್ದ ಸಂದರ್ಭದಲ್ಲಿ ಅದರ ನಾಯಕತ್ವ ವಹಿಸಿಕೊಂಡ ಬಿ.ಎಸ್.ಯಡಿಯೂರಪ್ಪ ಹಗಲಿರುಳೆನ್ನದೆ ಪಕ್ಷ ಸಂಘಟನೆ ಮಾಡಿದ್ದರ ಫಲವಾಗಿ 2008 ರಿಂದ 2013 ಮತ್ತು ಪ್ರಸ್ತುತ ಬಿಜೆಪಿ ಸರಕಾರ ಅಧಿಕಾರದಲ್ಲಿರಲು…

ಮುಂದೆ ಓದಿ...

ದೊಡ್ಡಎಣ್ಣೇಗೆರೆ ಗ್ರಾಪಂ ಮುಂದೆ ಹರಿದ ರಾಷ್ಟ್ರಧ್ವಜ ಹಾರಾಟ

ಹುಳಿಯಾರು: ಹಂದನಕೆರೆ ಹೋಬಳಿಯ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿಯ ಮುಂದೆ ಕಳೆದ ಹದಿನೈದಿಪ್ಪತ್ತು ದಿನಗಳಿಂದ ಸತತವಾಗಿ ಹರಿದು ಹೋಗಿರುವ ತ್ರಿವರ್ಣ ಧ್ವಜವನ್ನೇ ಹಾರಿಸಿ ರಾಷ್ಟ್ರಧ್ವಜಕ್ಕೆ ಅಗೌರವ ಮಾಡಲಾಗುತ್ತಿದೆ. ಹೌದು ಸರ್ಕಾರ ಎಲ್ಲಾ ಗ್ರಾಮ ಪಂಚಾಯ್ತಿ ಕಛೇರಿಗಳ ಮುಂದೆ ಪ್ರತಿದಿನ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಬೇಕೆಂಬ ನಿಯಮ ಜಾರಿಗೆ ತಂದ ಮೇಲೆ ಧ್ವಜ್ಕಕೆ ಸಂಬಂಧಿಸಿದ ಅವಾಂತರಗಳು ಆಗುತ್ತಲೇ ಇವೆ. ಇದೀಗ ಅಂತದ್ದೇ ಅವಾಂತರದ ಪಟ್ಟಿಗೆ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿ ಸೇರಿದೆ. ಹರಿದ, ಕೊಳಕಾದ, ಹಾಳಾದ ರಾಷ್ಟ್ರಧ್ವಜ ಹಾರಿಸುವದು ಅಪರಾಧ. ರಾಷ್ಟ್ರ ಧ್ವಜಕ್ಕೆ ತನ್ನದೇಯಾದ ಗೌರವ ಘನತೆ ಇದೆ. ಆದರೆ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯ್ತಿ ಧ್ವಜಸ್ಥಂಭದಲ್ಲಿ ಹರಿದ ದ್ವಜ ಹಾರಾಡುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಊರಿನ ಮಧ್ಯಭಾಗದಲ್ಲಿರುವ ಈ ಗ್ರಾಪಂ ಕಛೇರಿಗೆ ನಿತ್ಯ ಅಪಾರ ಸಂಖ್ಯೆಯಲ್ಲಿ ಹಳ್ಳಿಗರು ಕೆಲಸದ ನಿಮಿತ್ತ ಬರುತ್ತಾರೆ. ಅಲ್ಲದೆ ಪಂಚಾಯ್ತಿ ಎದುರಿಗಿನ ರಸ್ತೆಯ ಮೂಲಕ ಹಂನಕೆರೆ,…

ಮುಂದೆ ಓದಿ...

ನರೇಗಾ ಯೋಜನೆ ಮನೆ ಮನೆ ತಲುಪಿಸಲು ಸಿಇಓ ಕರೆ

ತುಮಕೂರು: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ಸಲುವಾಗಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಮಹಿಳೆಯರನ್ನೇ ಆಯ್ಕೆ ಮಾಡಲಾಗಿದ್ದು, ಅವರು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಜನರಿಗೆ ತಲುಪುವಂತೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಕರೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಮೊದಲನೇ ಸುತ್ತಿನ ಗ್ರಾಮ ಕಾಯಕ ಮಿತ್ರರ ಬುನಾದಿ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಬಯಸುವ ಗ್ರಾಮೀಣ ಜನರಿಂದ ನಮೂನೆ-1ರಲ್ಲಿ ಅರ್ಜಿಗಳನ್ನು ಸ್ವೀಕರಿಸುವುದು, ಸ್ವೀಕೃತಿ ನೀಡುವ ಮತ್ತು ಉದ್ಯೋಗ ಚೀಟಿ ದೊರಕಿಸಿಕೊಡುವಲ್ಲಿ ಗ್ರಾಮ ಕಾಯಕ ಮಿತ್ರರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಅಂತೆಯೇ ಕೂಲಿ ಕೆಲಸ ಬಯಸುವ ಕೂಲಿಕಾರರಿಂದ ನಮೂನೆ-6ರಲ್ಲಿ ಕೆಲಸದ ಬೇಡಿಕೆ ಸ್ವೀಕರಿಸುವುದರೊಂದಿಗೆ ಕಾಲಮಿತಿಯೊಳಗೆ…

ಮುಂದೆ ಓದಿ...

ತಿಂಗಳಿಗೊಮ್ಮೆ ತಾಲೂಕುಗಳ ಪ್ರವಾಸ ಕೈಗೊಳ್ಳಿ – ಸಚಿವ ಜೆ.ಸಿ.ಎಂ

  ತುಮಕೂರು :       ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಿಂಗಳಲ್ಲಿ ಕನಿಷ್ಟ ಒಂದು ಬಾರಿಯಾದರೂ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ತಾಲೂಕು ಪ್ರವಾಸ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರವಾಸ ಕೈಗೊಳ್ಳುವ ಮಾಹಿತಿಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು. ತಾಲೂಕು ಪ್ರವಾಸ ಕೈಗೊಳ್ಳದಿದ್ದರೆ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಮಾಜ ಕಲ್ಯಾಣ ಇಲಾಖೆಯಿಂದ ಕೈಗೊಂಡಿರುವ ಮೆಟ್ರಿಕ್ ಪೂರ್ವ /ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ಹಾಗೂ ಭವನ ನಿರ್ಮಾಣಗಳ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಕ್ತ ಕ್ರಮ ವಹಿಸಬೇಕು. ಹಾಸ್ಟೆಲ್ ಅಥವಾ ಭವನ ನಿರ್ಮಾಣಕ್ಕೆ ಜಾಗದ ಸಮಸ್ಯೆ ಎದುರಾದಲ್ಲಿ…

ಮುಂದೆ ಓದಿ...