ತುಮಕೂರು : ತಾಯಿ, ಶಿಶು ಮರಣ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿ : ಡಿಸಿ

 ತುಮಕೂರು :        ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕೇಂದ್ರಗಳಲ್ಲಿ ಪ್ರಸವ ಸಂದರ್ಭದಲ್ಲಿ ಸಂಭವಿಸುವ ತಾಯಿ ಹಾಗೂ ಶಿಶು ಮರಣವನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.        ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ನಡೆದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಒಟ್ಟು 27 ತಾಯಿಯ ಮರಣ ಹಾಗೂ ಒಟ್ಟು 113 ಶಿಶು ಮರಣ ಪ್ರಕರಣಗಳು ದಾಖಲಾಗಿವೆ.       2021ರ ಜುಲೈನಿಂದ ಅಕ್ಟೋಬರ್ ಮಾಹೆಯ ಅಂತರದಲ್ಲಿ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು, ಖಾಸಗಿ ಆಸ್ಪತ್ರೆಗಳಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ಚಿ.ನಾ.ಹಳ್ಳಿ, ಮಧುಗಿರಿ, ತಿಪಟೂರು ಹಾಗೂ ತುಮಕೂರು ತಾಲೂಕಿನಲ್ಲಿ ತಲಾ 1, ಪಾವಗಡ-3, ತುರುವೇಕೆರೆ-2 ಸೇರಿದಂತೆ ಒಟ್ಟು 9 ಮಂದಿ ತಾಯಂದಿರು ಸಾವನ್ನಪ್ಪಿರುತ್ತಾರೆ. ಮುಂದಿನ…

ಮುಂದೆ ಓದಿ...

ತುಮಕೂರು : ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಧಿಕಾರಿ -ಡಿಸಿ

ತುಮಕೂರು :       ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲು ನೋಂದಣಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದಿಂದ ಪ್ರತಿ ತಾಲ್ಲೂಕಿನ ಎಪಿಎಂಸಿ ಪ್ರಾಂಗಣದಲ್ಲಿ ನೋಂದಣಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿ ಮಾಡಲು ರೈತರ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ನಿರ್ದೇಶಿಸಿದರು.       ಉತ್ತಮ ಗುಣಮಟ್ಟದ ಸಾಮಾನ್ಯ ದರ್ಜೆಯ ಪ್ರತಿ ಕ್ವಿಂಟಾಲ್ ಭತ್ತಕ್ಕೆ 1940 ರೂ. ಹಾಗೂ ಪ್ರತಿ ಕ್ವಿಂಟಾಲ್ ಗ್ರೇಡ್-ಎ ಭತ್ತಕ್ಕೆ 1960 ರೂ.ಗಳ ಬೆಂಬಲ ಬೆಲೆಯನ್ನು ಸರ್ಕಾರ ನಿಗಧಿಗೊಳಿಸಿದ್ದು, ಬೆಂಬಲ ಬೆಲೆ ಯೋಜನೆಯಡಿ ಭತ್ತ ಮಾರಾಟ ಮಾಡಲಿಚ್ಛಿಸುವ ರೈತರು ನೋಂದಣಿ ಕೇಂದ್ರಗಳಿಗೆ ತಮ್ಮ ಈಖUIಖಿ Iಆ ಯೊಂದಿಗೆ ಭೇಟಿ ನೀಡಿ ತಮ್ಮ ಹೆಸರನ್ನು…

ಮುಂದೆ ಓದಿ...

ಒಮ್ರಿಕಾನ್ ವೈರಸ್ : ತುಮಕೂರು ನಗರದಲ್ಲಿ ಜಿಲ್ಲಾಡಳಿತ ಅಲರ್ಟ್!!

ತುಮಕೂರು :        ಒಂದೆಡೆ ತುಮಕೂರು ನಗರಕ್ಕೆ ಹೊಂದಿಕೊಂಡಂತೆ ಇರುವ ಬೆಂಗಳೂರಿನಲ್ಲಿ ಇಬ್ಬರಿಗೆ ರೂಪಾಂತರಿ ಒಮ್ರಿಕಾನ್ ವೈರಸ್ ತಗುಲಿದೆ.       ಸುದ್ದಿ ತಿಳಿಯುತ್ತಿದ್ದಂತೆ ತುಮಕೂರು ನಗರದಲ್ಲಿ ಜಿಲ್ಲಾಡಳಿತ ಅಲರ್ಟ್ ಆಗಿದೆ. ಖುದ್ದು ರಸ್ತೆಗಿಳಿದಿರುವ ಜಿಲ್ಲಾಧಿಕಾರಿ ಪಾಟೀಲ್ ಅವರು ವ್ಯಾಕ್ಸಿನ್ ನೀಡುವಿಕೆಯ ಕಾರ್ಯಕ್ಕೆ ಭರದಿಂದ ಚಾಲನೆ ನೀಡಿದ್ದಾರೆ.       ಮೊದಲ ವ್ಯಾಕ್ಸಿನ್ ತೆಗೆದುಕೊಂಡು ಎರಡನೇ ವ್ಯಾಕ್ಸಿನ್ ತೆಗೆದುಕೊಳ್ಳದೆ ಇರುವವರನ್ನು ಪತ್ತೆ ಹಚ್ಚಿರುವ ಜಿಲ್ಲಾ ಆರೋಗ್ಯ ಇಲಾಖೆ ಅವರ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದೆ.        ಹೀಗಾಗಿ, ಜಿಲ್ಲಾಧಿಕಾರಿ ಅಂತಹ ಜನವಸತಿ ಪ್ರದೇಶಗಳ ಕಡೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಹಾಗೂ ಪಾಲಿಕೆ ಆಯುಕ್ತರು ಹಾಗೂ ಪಾಲಿಕೆ ಸಿಬ್ಬಂದಿ ಜತೆಗೆ ತೆರಳಿ ಲಸಿಕೆ ಪಡೆದುಕೊಳ್ಳುವಂತೆ ಅವರ ಮನವೊಲಿಸುವಲ್ಲಿ ತೊಡಗಿದ್ದರು.       ಮುಂಜಾಗ್ರತಾ ಕ್ರಮವಾಗಿ ಎರಡನೇ ವ್ಯಾಕ್ಸಿಂಗ್ ಅನ್ನು ಕಡ್ಡಾಯವಾಗಿ…

ಮುಂದೆ ಓದಿ...

ತುಮಕೂರು : ರಾಜ್ಯದಲ್ಲಿ ಬಿಜೆಪಿ ವಿರುದ್ಧದ ಅಲೆ ಎದ್ದಿದೆ – ಚೆಲುವನಾರಾಯಣ ಸ್ವಾಮಿ

ತುಮಕೂರು :        ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ವಿರುದ್ಧದ ಅಲೆ ಎದ್ದಿದೆ ಈ ಮೂಲಕ ಮುಂದಿನ ದಿನದಲ್ಲಿ ದೇಶ ಹಾಗೂ ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ತಿರಸ್ಕಾರ ಮಾಡಲಿದ್ದಾರೆ ಎಂದು ನಾಗಮಂಗಲದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಚೆಲುವನಾರಾಯಣ ಸ್ವಾಮಿ ತಿಳಿಸಿದ್ದಾರೆ.       ಮಧುಗಿರಿಯ ಮಾಜಿ ಶಾಸಕ ಕೆ ಎನ್ ರಾಜಣ್ಣ ರವರ ಮನೆಗೆ ಭೇಟಿ ನೀಡಿದ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.       ಬೆಲೆ ಏರಿಕೆ ,ರೈತರ ವಿರೋಧಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ ಸಮಯದಲ್ಲಿ ಮೃತಪಟ್ಟ ರೈತರು ಹಾಗೂ ಇತ್ತೀಚಿಗೆ ನಡೆದ ವಿವಿಧ ಉಪಚುನಾವಣೆಯಲ್ಲಿ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಜನತೆ ತಿರಸ್ಕರಿಸಿರುವುದು ಇದಕ್ಕೆ ಸಾಕ್ಷಿ ಎಂದರು.  …

ಮುಂದೆ ಓದಿ...

ದೇವೇಗೌಡರ ಕುಟುಂಬ ಅನ್ಯಾಯ ಮಾಡಿದೆ : ರಾಜೇಂದ್ರ

ತುಮಕೂರು :        ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆಯಲ್ಲಿ ದೇವೇಗೌಡರ ಕುಟುಂಬ ಅನ್ಯಾಯ ಮಾಡಿದೆ ಎಂದು ವಿಧಾನ ಪರಿಷತ್​ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ದೂರಿದರು.       ನಗರದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ನಾವು ಕಾರಣರಲ್ಲ. ಅನೇಕ ವರ್ಷಗಳಿಂದ ತುಮಕೂರು ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆ ವಿಷಯದಲ್ಲಿ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಅವರಿಗೆ ಸೋಲು ಉಂಟಾಯಿತು ಎಂದು ಹೇಳಿದರು.       ಕಳೆದ 3 ತಿಂಗಳಿನಿಂದ ಹಾಗೂ ನಿರಂತರ ಸೋಲಿನ ನಂತರ ಜನರೊಂದಿಗೆ ಬೆರೆತು ಹಾಗೂ ಮತದಾರರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ಹೀಗಾಗಿ ಈ ಬಾರಿ ನಾನು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ರಾಜೇಂದ್ರ ಅವರು ವಿಶ್ವಾಸ…

ಮುಂದೆ ಓದಿ...