ದೇವೇಗೌಡರ ಸೋಲಿನ ಸೇಡು : ಕಾಂಗ್ರೆಸ್ ಅಭ್ಯರ್ಥಿಗೆ ಕೇಡು…!?

ತುಮಕೂರು  :       ವಿಧಾನ ಪರಿಷತ್ ಚುನಾವಣೆಯ ಮತದಾನದ ದಿನ ಸನ್ನಿಹಿತವಾಗುತ್ತಿದ್ದಂತೆ ಮೂರೂ ಪಕ್ಷಗಳಲ್ಲಿ ಚುನಾವಣೆ ರಂಗೇರುತ್ತಿದೆ. ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಗೆಲ್ಲುವ ತರಾತುರಿಯಲ್ಲಿದ್ದಾರೆ. ಆದರೆ, ಮತದಾರನ ಒಲವು ಯಾರೆಡೆ ಇದೆ ಎಂಬುದು ಇನ್ನೂ ಗೌಪ್ಯವಾಗೇ ಉಳಿಯುತ್ತದೆ.       5559 ಮತದಾರರನ್ನ ಹೊಂದಿದ್ದ ಈ ಕ್ಷೇತ್ರದಲ್ಲಿ 2623 ಪುರುಷ ಮತದಾರರು, 2936 ಮಹಿಳಾ ಮತದಾರರಿದ್ದಾರೆ.        328 ಗ್ರಾಮ ಪಂಚಾಯ್ತಿ, 1ಪಾಲಿಕೆ, 4 ಪುರಸಭೆ ಹಾಗೂ 4 ಪಟ್ಟಣ ಪಂಚಾಯ್ತಿಗಳನ್ನು ಹೊಂದಿದೆ.      ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣರ ಪುತ್ರ ಆರ್.ರಾಜೇಂದ್ರ ಕಣದಲ್ಲಿದ್ದರೆ, ಹಾಗಲವಾಡಿ ಜಿ.ಪಂ.ಸದಸ್ಯನ ಪುತ್ರ ಮಾಜಿ ಕೆಎಎಸ್ ಅಧಿಕಾರಿ ಅನಿಲ್ ಕುಮಾರ್ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿದರೆ,      ಬೆಂಗಳೂರಿನ ಕಾರ್ಪೋರೇಟರ್ ಲೋಕೇಶ್ ಗೌಡ ಬಿಜೆಪಿಯಿಂದ ಸ್ಪರ್ಧೆಗಿಳಿದಿದ್ದಾರೆ. ಮೂರೂ…

ಮುಂದೆ ಓದಿ...

ಡಿ.27 : ಶಿರಾ ನಗರಸಭೆ ಸಾರ್ವತ್ರಿಕ ಚುನಾವಣೆ ವೇಳಾ ಪಟ್ಟಿ ಪ್ರಕಟ

 ತುಮಕೂರು :       ರಾಜ್ಯ ಚುನಾವಣಾ ಆಯೋಗವು ಶಿರಾ ನಗರಸಭೆ 31 ವಾರ್ಡ್‍ಗಳ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ವೇಳಾಪಟ್ಟಿಯನ್ನು ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ. ವೇಳಾಪಟ್ಟಿಯನ್ವಯ ಡಿಸೆಂಬರ್ 8ರಂದು ಚುನಾವಣಾ ನೋಟೀಸನ್ನು ಪ್ರಕಟಿಸಲಾಗಿದ್ದು, ಡಿಸೆಂಬರ್ 15 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರಗಳ ಪರಿಶೀಲನೆಯನ್ನು ಡಿಸೆಂಬರ್ 16ರಂದು ನಡೆಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಡಿಸೆಂಬರ್ 18 ಕಡೆಯ ದಿನವಾಗಿದೆ. ಮತದಾನ(ಅವಶ್ಯವಿದ್ದರೆ)ದ ಡಿಸೆಂಬರ್ 27ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಹಾಗೂ ಮರು ಮತದಾನದ ಅವಶ್ಯವಿದ್ದಲ್ಲಿ ಡಿ.29ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಚುನಾವಣೆ ನಡೆಸಲಾಗುವುದು. ಮತಗಳ ಎಣಿಕೆಯು ಡಿಸೆಂಬರ್ 30ರ ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರದಲ್ಲಿ ನಡೆಯಲಿದ್ದು, ಡಿಸೆಂಬರ್ 30ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ. ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ…

ಮುಂದೆ ಓದಿ...

ಒತ್ತಡದಿಂದ ಹೊರಗೆ ಬರಲು ಸಂಗೀತ ಉತ್ತಮ ಸಾಧನ: ಡಾ.ವೀರಭದ್ರಯ್ಯ

 ತುಮಕೂರು :      ಇಂದಿನ ಆಧುನಿಕ ಜೀವನ ಶೈಲಿಯಿಂದ ಉಂಟಾಗುವ ಮಾನಸಿಕ ಒತ್ತಡಗಳಿಂದ ಹೊರಗೆ ಬರಲು ಸಂಗೀತ ಉತ್ತಮ ಸಾಧನವಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ಟಿ.ಎ. ವೀರಭದ್ರಯ್ಯ ಅಭಿಪ್ರಾಯಪಟ್ಟರು.       ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸ್ವರ ಸಿಂಚನ ಸುಗಮ ಸಂಗೀತ ಜನಪದ ಕಲಾಸಂಸ್ಥೆ ಹಾಗೂ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ‘ಯುವ ಸೌರಭ’ ಸಾಂಸ್ಕøತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಗೀತಕ್ಕೆ ಎಂಥಹ ನೋವನ್ನಾದರೂ ಕಡಿಮೆ ಮಾಡುವ ಅಪಾರವಾದ ಶಕ್ತಿಯಿದೆ. ಸಾಮಾಜಿಕ ಜಾಲತಾಣಗಳ ಬಳಕೆಯಿಂದ ದೈಹಿಕ ಚಟುವಟಿಕೆಗಳನ್ನೇ ಮರೆತಿರುವ ಇಂದಿನ ಯುವಕರಲ್ಲಿ ಕಲೆ ಮತ್ತು ದೇಸೀ ಸಂಸ್ಕøತಿಯ ಬಗೆಗಿನ ಆಸಕ್ತಿ ಹೆಚ್ಚುವಂತೆ ಮಾಡುವುದು ಅಗತ್ಯವಾಗಿದೆ ಎಂದರು. ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಮಲ್ಲಿಕಾರ್ಜುನ ಕೆಂಕೆರೆ ಮಾತನಾಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಪ್ರತಿ…

ಮುಂದೆ ಓದಿ...

ಮಧುಗಿರಿ : 280 ಗ್ರಾಂ ಗಾಂಜಾ ವಶ

 ಮಧುಗಿರಿ :      ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಪೋಲೀಸರು ದಾಳಿ ನಡೆಸಿ 280 ಗ್ರಾಂ ಗಾಂಜಾ ವಶ ಪಡಿಸಿಕೊಂಡ ಘಟನೆ ಬುಧವಾರ ನಡೆದಿದೆ.     ತಾಲೂಕಿನ ದೊಡ್ಡೇರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆ ಮುಂಭಾಗದ ರಸ್ತೆಯ ಬಳಿ ಗಾಂಜಾ ಸಾಗಿಸುತ್ತಿದ್ದ ಡಿ.ಎಸ್. ಅಮರ್ ಎಂಬ ವ್ಯಕ್ತಿಯನ್ನು ತಡೆದು ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.       ಅಬಕಾರಿ ಉಪ ಅಧೀಕ್ಷಕ ಆರ್. ಸುರೇಶ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ದಾಳಿಯಲ್ಲಿ ಅಬಕಾರಿ ನಿರೀಕ್ಷಕ ಹೆಚ್. ನಾಗರಾಜು, ಸಿಬ್ಬಂದಿಗಳಾದ ಯೋಗಾನಂದ, ರಾಜೇಶ್, ಶ್ರೀ ಶೈಲ ಪೂಜಾರಿ, ಮಹಂತೇಶ್, ಜಗದೀಶ್ ಭಾಗವಹಿಸಿದ್ದರು

ಮುಂದೆ ಓದಿ...