ಜಲ ಜೀವನ ಮಿಷನ್: ಸಮುದಾಯದ ಸಹಭಾಗಿತ್ವ ಮುಖ್ಯ


ತುಮಕೂರು: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಜಲಜೀವನ ಮಿಷನ್ ಯೋಜನೆ ಯಸಸ್ವಿಯಾಗಬೇಕೆಂದರೆ ಸಮುದಾಯದ ಸಹಭಾಗಿತ್ವ ಮುಖ್ಯವಾಗಿರುತ್ತದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಜೋಸೆಫ್ ತಿಳಿಸಿದರು. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ನೇಹ ಜೀವನ ಫೌಂಡೇಶನ್ (ಗುಬ್ಬಿ) ಇವರ ಸಹಯೋಗದಲ್ಲಿಂದು ಕುಣಿಗಲ್ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಜೀವನ್ ಮಿಷನ್ ಯೋಜನೆಗೆ ಸಮುದಾಯದವರು ಸಹಕಾರ ನೀಡಬೇಕು. ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಜಲಜೀವನ್ ಮಿಷನ್ ಕಾರ್ಯಕ್ರಮ ನಮ್ಮಲ್ಲಿ ತಡವಾಗಿ ಪ್ರಾರಂಭವಾಗಿದೆ ಕೇಂದ್ರ ಸರ್ಕಾರ 2024ರೊಳಗಾಗಿ ಪ್ರತಿ ಮನೆಗೆ ನಳ ಸಂಪರ್ಕ ನೀಡಿ ಶುದ್ಧ ನೀರನ್ನು ಒದಗಿಸಬೇಕು ಎಂಬ ಗುರಿ ಹೊಂದಿದೆ. ಇದಕ್ಕೆ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಎಲ್ಲಾ…


ಮುಂದೆ ಓದಿ...

ದಲಿತ ಮುಖಂಡನ ಕೊಲೆ: 13 ಮಂದಿ ಆರೋಪಿಗಳ ಬಂಧನ!


ತುಮಕೂರು: ಜಿಲ್ಲೆಯ ಗುಬ್ಬಿ ಪಟ್ಟಣದ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಕೊಲೆ ಪ್ರಕರಣದ 13 ಮಂದಿಯನ್ನು ಗುಬ್ಬಿ ಪೆÇಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಜೂನ್ 15 ರಂದು ಹಾಡು ಹಗಲೇ ರಸ್ತೆಯಲ್ಲಿ ಕುರಿ ಮೂರ್ತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದು ಕೊಲೆಗಾರರು ತಲೆಮರೆಸಿಕೊಂಡಿದ್ದರು. ಏಳು ಮಂದಿ ಆರೋಪಿಗಳು ಗುಬ್ಬಿ ಪಟ್ಟಣದ ವರಾಗಿದ್ದು ಉಳಿದ ಆರು ಮಂದಿ ವಿವಿಧ ಜಿಲ್ಲೆಗಳವರೆಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಿಯಲ್ ಎಸ್ಟೇಟ್ ವಿವಾದವೇ ಘಟನೆಗೆವೆನ್ನಲಾಗಿದೆ. ಶಿರಾ ಡಿವೈಎಸ್ಪಿ ಕುಮಾರಪ್ಪ ಇನ್ಸ್ ಪೆಕ್ಟರ್ ಗಳಾದ ನದಾಫ್, ಅವಿನಾಶ್, ರವಿಕುಮಾರ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚಲು ಶ್ರಮಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಆರು ಮಂದಿ ಆರೋಪಿಗಳು ರೌಡಿಶೀಟರ್ ಗಳೆಂದು ಹೇಳಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಬಂದಿಸಿ ಕೊಲೆ ಪ್ರಕರಣ ಬೆಳಕಿಗೆ ತರುವಲ್ಲಿ ಶ್ರಮಿಸಿದ ಡಿವೈಎಸ್ಪಿ…


ಮುಂದೆ ಓದಿ...

ಜೂ.26:ಕಾಂಗ್ರೆಸ್ ಕಾರ್ಯಕರ್ತರಿಗೆ ನವಚೈತನ್ಯ ಚಿಂತನಾ ಶಿಬಿರ


ತುಮಕೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಂತೆ ಜೂನ್ 26ರ ಭಾನುವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರಗೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರುಗಳಿಗಾಗಿ ನವಚೈತನ್ಯ ಚಿಂತನಾ ಶಿಬಿರವನ್ನು ಶ್ರೀಸಿದ್ದಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿರುವ ಡಾ.ಹೆಚ್.ಎಂ.ಗಂಗಾಧರಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ತುಮಕೂರು ಉಸ್ತುವಾರಿಗಳಾದ ವಿಧಾನಪರಿಷತ್ ಸದಸ್ಯ ರಮೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ರೈತರು, ಕಾರ್ಮಿಕರು, ಸಾರ್ವಜನಿಕರು ಹಾಗೂ ಯುವಜನತೆಯನ್ನು ಒಳಗೊಂಡು ಸಮಾಜದ ಎಲ್ಲಾ ವರ್ಗಗಳ ಬೇಡಿಕೆಗಳ ಕುರಿತು ಆರು ವಿಭಾಗಗಳಲ್ಲಿ ಚಿಂತನೆ ನಡೆಸಿ,ಅಂತಿಮ ನಿರ್ಣಯವನ್ನು ಸಂಜೆ ಪ್ರಕಟಿಸಲಿದ್ದೇವೆ.ಈ ಚಿಂತನ ಸಭೆಯಲ್ಲಿ ವ್ಯಕ್ತವಾದ ಮಾಹಿತಿಗಳನ್ನು ಆಧಾರಿಸಿ, ಮುಂಬರುವ 2023ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಾಣಾಳಿಕೆಗಳು ಸಿದ್ದಗೊಳ್ಳಲಿವೆ ಎಂದರು. ನಡೆದ ಪೂರ್ವಭಾವಿ ಸಭೆಯಲ್ಲಿ ಕೈಗೊಳ್ಳಲಾದ ತೀರ್ಮಾನದಂತೆ ಆರು ಪ್ರಮುಖ ವಿಚಾರಗಳ ಕುರಿತು ಪ್ರತ್ಯೇಕ ತಲಾ 100 ಜನ…


ಮುಂದೆ ಓದಿ...

ಸ್ಮಾರ್ಟ್‍ಸಿಟಿಗೆ ನಗರದ ಸರ್ವತೋಮುಖ ಅಭಿವೃದ್ಧಿಯ ಹೆಗ್ಗಳಿಕೆ


ತುಮಕೂರು: ನಗರದ ಸರ್ವತೋಮುಖ ಅಭಿವೃದ್ಧಿಯ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿಯವರ ಸ್ಮಾರ್ಟ್‍ಸಿಟಿ ಯೋಜನೆಗೆ ಸಲ್ಲಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದರು. ತುಮಕೂರು ನಗರ ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆಯಾಗದಿದ್ದರೆ ನಗರದ ಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಊಹಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ 2ನೇ ಹಂತದಲ್ಲಿ ತುಮಕೂರು ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆಯಾದ ನಂತರ ಸುಮಾರು 900 ಕೋಟಿ ರೂ. ವೆಚ್ಚದಲ್ಲಿ 128 ಅಭಿವೃದ್ಧಿ ಯೋಜನೆಗಳು ಪೂರ್ಣಗೊಂಡಿವೆ ಎಂದರು. ನಗರದ ಆಲದಮರ ಪಾರ್ಕ್‍ನಲ್ಲಿ ಏರ್ಪಡಿಸಿದ್ದ ಸ್ಮಾರ್ಟ್‍ಸಿಟಿ ಯೋಜನೆಯ 7ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ 2015ರ ಜೂನ್ 25 ರಂದು ಸ್ಮಾರ್ಟ್‍ಸಿಟಿ ಯೋಜನೆ ಘೋಷಣೆಯಾಗಿ ಇಂದಿಗೆ 7 ವರ್ಷ ಸಂದಿದೆ. ಈ ಯೋಜನೆಗೆ ತುಮಕೂರು ಆಯ್ಕೆಯಾಗಿ 5 ವರ್ಷವಾಗಿದ್ದು, ನಗರದಲ್ಲಿ ಸುಮಾರು 151 ಅಭಿವೃದ್ಧಿ ಯೋಜನೆಗಳು ಚಾಲನೆಯಲ್ಲಿವೆ. ಹೊಸದಾಗಿ 27 ಯೋಜನೆಗಳು ಟೆಂಡರ್ ಹಂತದಲ್ಲಿದ್ದು, ಒಟ್ಟು 178 ಯೋಜನೆಗಳು ಸುಮಾರು…


ಮುಂದೆ ಓದಿ...

ಮಾಫಿಯಾಕ್ಕೆ ಅವಕಾಶ ಕೊಡಬೇಡಿ: ಎಸ್ಪಿ ರಾಹುಲ್ ಕುಮಾರ್ ಮನವಿ


ಗುಬ್ಬಿ: ಯಾವುದೇ ವಿವಾದವನ್ನು ಪೊಲೀಸ್ ಠಾಣೆ ಮೂಲಕ ಬಗೆಹರಿಸಿಕೊಳ್ಳಬೇಕು. ಕಾನೂನು ಹೊರತಾದ ಘಾತುಕರ ಬಳಕೆಗೆ ಮುಂದಾದ ಸಂದರ್ಭದಲ್ಲಿ ಅಪರಾಧ ಕೃತ್ಯಗಳ ಹೆಚ್ಚಳವಾಗುತ್ತದೆ. ಈ ನಿಟ್ಟಿನಲ್ಲಿ ಜನ ಸಾಮಾನ್ಯರು ಪೊಲೀಸ್ ಕೆಲಸಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪೂರ್ ವಾಡ್ ಮನವಿ ಮಾಡಿದರು. ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು ಈಚೆಗೆ ಭೂಮಿಗೆ ಬೆಲೆ ಬಂದ ಹಿನ್ನಲೆ ಈ ಭಾಗದಲ್ಲಿ ವಿವಾದಗಳು ತಲೆ ಎತ್ತುತ್ತಿವೆ. ಈ ಹಿನ್ನೆಲೆಯಲ್ಲಿ ಮಾಫಿಯಾಗಳು ತಲೆ ಎತ್ತುತ್ತವೆ. ಯಾವುದೇ ಭೂ ವಿವಾದ ಇದ್ದಲ್ಲಿ ಠಾಣೆಯನ್ನೇ ಸಂಪರ್ಕಿಸಿ ಎಂದು ಸಲಹೆ ನೀಡಿದರು. ಕಾನೂನಾತ್ಮಕ ಹಂತಗಳನ್ನು ಬಳಸಿಕೊಂಡು ನ್ಯಾಯಯುತ ಹೋರಾಟ ಮಾಡಲು ಮುಂದಾಗಬೇಕು. ಸಮಾಜ ಸ್ವಾಸ್ಥ್ಯ ಕಾಪಾಡುವ ಹೊಣೆ ಸಾರ್ವಜನಿಕರ ಮೇಲಿದೆ ಎಂದ ಅವರು ಠಾಣೆಯಲ್ಲಿ ಸ್ಪಂದನೆ ಸಿಕ್ಕಿಲ್ಲ ಎಂಬ ದೂರುಗಳು…


ಮುಂದೆ ಓದಿ...

ಯುವಕರು ಉದ್ಯೋಗ ನೀಡುವಂತಾಗಬೇಕು!


ತುಮಕೂರು: ನಮ್ಮ ಯುವಜನರು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ ಒದಗಿಸಲು ಕೈಗಾರಿಕಾ ಇಲಾಖೆಯು ತುಮಕೂರಿನಲ್ಲಿ ಜೂನ್ 23ರಂದು ಒಂದು ದಿನದ ಕಾರ್ಯಾಗಾರ ಆಯೋಜಿಸಲಿದೆ ಎಂದು ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ತಿಳಿಸಿದರು. ಈ ಕುರಿತು ಇಂದು ತುಮಕೂರಿನ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು. ತುಮಕೂರಿನ ಗಂಗಾಧರಯ್ಯ ಮೆಮೋರಿಯಲ್ ಹಾಲ್‍ನಲ್ಲಿ ‘ಉದ್ಯಮಿಯಾಗು ಉದ್ಯೋಗ ನೀಡು’ ಹಾಗೂ ‘ಕೈಗಾರಿಕಾ ಅದಾಲತ್’ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಮುರುಗೇಶ ಆರ್ ನಿರಾಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಳೆದ ವರ್ಷ ಅಕ್ಟೋಬರ್ 11ರಂದು ಬೆಂಗಳೂರಿನಲ್ಲಿ…


ಮುಂದೆ ಓದಿ...

ಕೆರೆ ಹೂಳೆತ್ತುವುದರಿಂದ ಸರ್ಕಾರದ ಹಣ ಪೋಲು!


ಚಿಕ್ಕನಾಯಕನಹಳ್ಳಿ: ಕೆರೆ ಏರಿ ಸುಭದ್ರತೆ ಮಾಡಿದರೆ ಮಾತ್ರ ನೀರು ಶೇಖರಣೆ ಅವಕಾಶವಾಗುತ್ತದೆ ಕೇವಲ ಹೂಳೆತ್ತುವುದು ರಿಂದ ಸರ್ಕಾರದ ಹಣ ಪೋಲಾಗುತ್ತದೆ ಎಂದು ಸದಸ್ಯ ಸಿ.ಡಿ ಸುರೇಶ್ ಆಗ್ರಹಿಸಿದರು. ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಪುರಸಭಾ ಅಧ್ಯಕ್ಷೆ ಪುಷ್ಪ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ವಿಶೇಷ ಸಭೆಯಲ್ಲಿ ಅವರು ಸಲಹೆ ನೀಡಿದರು. 15ನೇ ಹಣಕಾಸು ಯೋಜನೆಯ ಸಾಮಾನ್ಯ ಮೂಲ ಅನುಧಾನ ಕ್ರಿಯಾ ಯೋಜನೆಯ 155 ಲಕ್ಷ ಅನುದಾನದಲ್ಲಿ ಕುಡಿಯುವ ನೀರು ಕಾಮಗಾರಿಗೆ ಹಾಗೂ ಘನತ್ಯಾಜ್ಯ ವಸ್ತು ವಿಲೇವಾರಿ ನಿರ್ವಾಣ ಕಾಮಗಾರಿಗೆ ಮೀಸಲಿರಿಸಿದ್ದ 93 ಲಕ್ಷ ರೂಗಳನ್ನು ಸಚಿವರು ಕೆರೆಯ ಹೂಳೆತ್ತಿ ರಿವಿಟ್ಮೆಂಟ್ ನಾವು ಮಾಡುತ್ತೇವೆ ನೀವು ನೀರು ಶೇಖರಿಸುವ ಕಾರ್ಯವನ್ನು ಮಾಡಿ ಎಂದು ಸಭೆಗೆ ಸೂಚಿಸಿದರು. ಇದಕ್ಕೆ ಸಹಮತಿಸದೇ ಕೆಲವು ಸದಸ್ಯರಾದ ಸಿಡಿ ಸುರೇಶ್ ಮಾತನಾಡುತ್ತಾ ಹೂಳ್ ಎತ್ತುವುದಾದರೆ ಕೇವಲ ಹತ್ತರಿಂದ ಹದಿನೈದು ಲಕ್ಷದಲ್ಲಿ ಕಾಮಗಾರಿ ಮುಗಿಸಬಹುದು ಆದರೆ ಏರಿಯಾ ಭದ್ರತೆ…


ಮುಂದೆ ಓದಿ...

ಮರಳೂರು ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಜ್ಯೋತಿಗಣೇಶ್


ತುಮಕೂರು: ಕಳೆದ ಎರಡು ದಶಕಗಳಿಗೂ ಅಧಿಕ ಕಾಲದಿಂದ ತುಂಬದೇ ಇದ್ದ ನಗರದ ಮರಳೂರು ಕೆರೆ ಈ ಬಾರಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ಜ್ಯೋತಿಗಣೇಶ್, ಪಾಲಿಕೆ ಮೇಯರ್ ಬಿ.ಜಿ. ಕೃಷ್ಣಪ್ಪ ಹಾಗೂ ಸದಸ್ಯ ಧರಣೇಂದ್ರಕುಮಾರ್ ಅವರು ಕೆರೆಗೆ ಬಾಗಿನ ಅರ್ಪಿಸಿದರು. ನಗರದ ದಕ್ಷಿಣ ಭಾಗದಲ್ಲಿರುವ ಮರಳೂರು ಕೆರೆ 22 ವರ್ಷಗಳಿಂದ ತುಂಬಿರಲಿಲ್ಲ. ಆದ ರೆ ಈ ಬಾರಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭರ್ತಿಯಾಗಿ ಕೋಡಿ ಹರಿಯುತ್ತಿರುವುದರಿಂದ ಮರಳೂರು, ಗಂಗಸಂದ್ರ ಗ್ರಾಮಸ್ಥರ ಸಮ್ಮುಖದಲ್ಲಿ ಧಾರ್ಮಿಕ ವಿಧಿವತ್ತಾಗಿ ಕೆರೆಗೆ ಬಾಗಿನ ಅರ್ಪಿಸಿ ಗಂಗಾ ಪೂಜೆ ನೆರವೇರಿಸಲಾಯಿತು. ಕೆರೆಗೆ ಬಾಗಿನ ಸಲ್ಲಿಸಿದ ನಂತರ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ನಗರದ ದಕ್ಷಿಣ ಭಾಗದಲ್ಲಿರುವ ಮರಳೂರು ಕೆರೆ 22 ವರ್ಷದ ನಂತರ ಮಳೆ ನೀರಿನಿಂದ ಕೋಡಿ ಬಿದ್ದಿರುವುದು ತುಂಬಾ ಸಂತೋಷ ತಂದಿದೆ ಎಂದರು. ಈ…


ಮುಂದೆ ಓದಿ...

ಬಂಡವಾಳ, ಕೈಗಾರಿಕೆ ಆಕರ್ಷಿಸುವಲ್ಲಿ ರಾಜ್ಯ ಪ್ರಥಮ!: ಸಚಿವ ನಿರಾಣಿ


ತುಮಕೂರು: ರಾಜ್ಯದಲ್ಲಿ ಮತ್ತಷ್ಟು ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಠಿಸುವ ಸಲುವಾಗಿ ಮುಂಬರುವ ನವೆಂಬರ್ ತಿಂಗಳಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ನವೆಂಬರ್ 2, 3 ಮತ್ತು 4 ರಂದು ಮೂರು ದಿನಗಳ ಅರಮನೆ ಮೈದಾನದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು. ನಗರದಲ್ಲಿ ಹೊರವಲಯದ ಗಂಗಾಧರಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಏರ್ಪಡಿಸಲಾಗಿರುವ ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2010 ಮತ್ತು 2012 ರಲ್ಲಿ ಆಯೋಜಿಸಿದ್ದ ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ ಬಹಳ ಯಶಸ್ವಿಯಾಗಿತ್ತು. ಇದರಿಂದ 15 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರೆತ್ತಿತ್ತು. ಹಾಗಾಗಿಯೇ ಮತ್ತೆ ನವೆಂಬರ್‍ನಲ್ಲೂ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ಕೈಗಾರಿಕೆಯಲ್ಲಿ…


ಮುಂದೆ ಓದಿ...

ದಲಿತರ ಆರ್ಥಿಕ ಸಬಲೀಕರಣಕ್ಕೆ ಸಂಘಗಳು ಅವಶ್ಯಕ


ತುರುವೇಕೆರೆ: ದೀನ ದಲಿತರ ಆರ್ಥಿಕ ಸಬಲೀಕರಣದ ಉದ್ದೇಶ ಈಡೇರಬೇಕಾದರೆ ಸಹಕಾರ ಸಂಘಗಳ ಅವಶ್ಯಕತೆಯಿದೆ ಎಂದು ಮೈಸೂರಿನ ಉರಿಲಿಂಗಿಪೆದ್ದಿಮಠದ ಜ್ನಾನ ಪ್ರಕಾಶ್ ಸ್ವಾಮೀಜಿ ತಿಳಿಸಿದರು. ಪಟ್ಟಣದ ಮಾಯಸಂದ್ರ ರಸ್ತೆಯ ಪೆÇೀಲೀಸ್ ಠಾಣೆ ಮುಂಭಾಗ ಅಂಬೇಡ್ಕರ್ ವಿವಿದುದ್ದೇಶ ಸಹಕಾರ ಸಂಘಕ್ಕೆ ಬೌದ್ದ ಧರ್ಮದ ಪ್ರಕಾರ ಪೂಜೆ ಮಾಡುವ ಮೂಲಕ ಸಂಘಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದ ಅವರು ದೀನ ದಲಿತರ ಆರ್ಥಿಕ ಪ್ರಗತಿಯನ್ನು ಸಹಕಾರ ಸಂಘದ ಮೂಲಕ ಉನ್ನತೀಕರಿಸುವ ದೃಷ್ಟಿಯಿಂದ ಅಂಬೇಡ್ಕರ್ ವಿವಿದುದ್ದೇಶ ಸಹಕಾರ ಸಂಘ ಈಡೀ ರಾಜ್ಯದಲ್ಲಿ ತನ್ನ ಶಾಖೆಗಳನ್ನು ತರೆಯುತ್ತಿದೆ ಈ ನಿಟ್ಟಿನಲ್ಲಿ ತುರುವೇಕೆರೆಯಲ್ಲಿ ಸಂಘದ ನೂತನ ಶಾಖೆಯನ್ನು ತೆರದಿದ್ದು ಈ ಸಹಕಾರ ಸಂಘ ಉನ್ನತ ಮಟ್ಟಕ್ಕೆ ಬೆಳೆಯಲಿ ಕೋಟ್ಯಾಂತರ ರೂಪಾಯಿ ವಹಿವಾಟು ಮಾಡುವ ಹಂತಕ್ಕೆ ತಲುಪಲಿ. ಸಂಘಕ್ಕೆ ಅಂಬೇಡ್ಕರ್ ಅನುಯಾಯಿಗಳು ಜಾತ್ಯಾತೀತವಾಗಿ ಸಂಘದ ಸದಸ್ಯತ್ವ ಪಡೆದು ಸಂಘದಿಂದ ದೊರೆಯುವ ಸವಲತ್ತುಗಳನ್ನು ಸದ್ವಿನಿಯೋಗ ಮಾಡಿಕೊಳ್ಳಲಿ ಎಂದು ಆಶಿಸಿ…


ಮುಂದೆ ಓದಿ...