ತುಮಕೂರು : ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಿ – ಡಿಸಿ

ತುಮಕೂರು :        ಜಿಲ್ಲೆಯಲ್ಲಿ ಕೊರೋನಾ ಪಾಸಿಟೀವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು ಎಂ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.        ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿತ್ಯ 3400 ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದ್ದು, ತುಮಕೂರು ತಾಲೂಕು 700 ಹಾಗೂ ಎಲ್ಲಾ ತಾಲೂಕುಗಳು ಪ್ರತಿದಿನ ತಲಾ 350ರಂತೆ ಕೋವಿಡ್ ಪರೀಕ್ಷೆಗಳನ್ನು ನಡೆಸಬೇಕು. ಪಾಸಿಟೀವ್ ಪ್ರಕರಣಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಆರ್‍ಟಿಪಿಸಿಆರ್ ಪರೀಕ್ಷೆಯನ್ನು ನಡೆಸಬೇಕು ಹಾಗೂ ಪರೀಕ್ಷೆ ನಡೆಸಿರುವ ಕುರಿತು 2 ದಿನಗಳೊಳಗೆ ವರದಿ ನೀಡಬೇಕು. ನಿಗಧಿತ ಸಮಯದೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.       ಕೋವಿಡ್ ಪರೀಕ್ಷೆಗೊಳಪಡಿಸಿದ 24 ಗಂಟೆಗಳೊಳಗೆ ವರದಿ ಸಿದ್ಧಪಡಿಸಬೇಕು. ಜಿಲ್ಲೆಯಲ್ಲಿ ಪ್ರಸ್ತುತ 64…

ಮುಂದೆ ಓದಿ...

ಶೈಕ್ಷಣಿಕ ಕ್ಷೇತ್ರಕ್ಕೆ ಮುರುಘ ಮಠದ ಕೊಡುಗೆ ಅಪಾರ

ತುಮಕೂರು :        ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಮಠದ ವತಿಯಿಂದ ವಿದ್ಯಾರ್ಥಿ ನಿಲಯ ಸ್ಥಾಪಿಸಿ, ಶೈಕ್ಷಣಿಕ ಕ್ಷೇತ್ರಕ್ಕೆ ಮುರುಘ ಮಠದ ಕೊಡುಗೆ ಅಪಾರ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟರು.        ನಗರದ ಜಯದೇವ ವಿದ್ಯಾರ್ಥಿ ನಿಲಯದಲ್ಲಿ ಶ್ರೀಶಿವಮೂರ್ತಿಮುರುಘರಾಜೇಂದ್ರ ಸಭಾಂಗಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು,ಸಮಾಜದ ಜೊತೆ ಜೊತೆಗೆ ಸಣ್ಣಪುಟ್ಟ ಸಮುದಾಯಗಳ ಸ್ವಾಮೀಜಿಗಳಿಗೆ ದೀಕ್ಷೆ ನೀಡಿ, ಬಸವಣ್ಣ ತತ್ವವನ್ನು ಅಳವಡಿಸಿಕೊಂಡಿರುವ ನಿಜಯೋಗಿ ಎಂದು ತಿಳಿಸಿದರು. ಬಸವಣ್ಣನವರ ತತ್ವಗಳನ್ನು ನಮಗೆ ಅರ್ಥವಾಗಿದ್ದು ಕಡಿಮೆ, ಶರಣ ಧರ್ಮದ ಬಗ್ಗೆ ಉತ್ತಮವಾದ ಕೆಲಸಗಳಾಗುತ್ತಿರುವುದು ಸಿದ್ಧಗಂಗಾ ಮಠ ಮತ್ತು ಮುರುಘ ಮಠದಿಂದ ಇಂತಹ ಇನ್ನ?À್ಟು ಕಾರ್ಯಗಳು ಹೆಚ್ಚಬೇಕಿದೆ, ಮನುಷ್ಯ ನಿಗೆ ಸಮಾಧಾನವೇ ಅವಶ್ಯಕ.ಸಮಾಧಾನವಿದ್ದರೆ ನೆಮ್ಮದಿ, ಸಂತೋ?À ಸಿಗುತ್ತದೆ ಅದಕ್ಕಾಗಿ ಆಧ್ಯಾತ್ಮಿಕ ಚಿಂತನೆಗಳು ಅಗತ್ಯ ಎಂದರು.        ತಂತ್ರಜ್ಞಾನ ಹೆಚ್ಚಾದಂತೆ ಆಧ್ಯಾತ್ಮಿಕ…

ಮುಂದೆ ಓದಿ...

ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ

ತುಮಕೂರು :       ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ದಿನದ 24ಗಂಟೆಯೂ ಕಾರ್ಯನಿರ್ವಹಿಸುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಹೇಳಿದರು.       ನಗರದ ಜಿಲ್ಲಾ ಪೊಲೀಸ್ ಇಲಾಖೆಯ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನ್ ಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.       ಪೊಲೀಸರು ಸಮಾಜದಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸದೆ ಕಾರ್ಯನಿರ್ವಹಿಸುತ್ತಾರೆ. ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರಿಗೆ ವರ್ಷಕ್ಕೊಮ್ಮೆ ಇಂತಹ ಕ್ರೀಡಾ ಕೂಟಗಳನ್ನು ಆಯೋಜಿಸುವುದು ತುಂಬಾ ಆರೋಗ್ಯಕರ ಬೆಳವಣಿಗೆ ಎಂದರು. ನಿಂದನೆಗಳು, ಸೋಲು-ಗೆಲುವು ಎದುರಾದಾಗ ಯಾವ ರೀತಿ ಎದುರಿಸಬೇಕು ಎಂಬುದನ್ನು ಕ್ರೀಡೆ ಕಲಿಸುತ್ತದೆ ಎಂದರು.       ಸಮಯ, ಶಿಸ್ತು ಪಾಲನೆ ಜೊತೆಗೆ ಧೈರ್ಯವನ್ನು…

ಮುಂದೆ ಓದಿ...