ತುಮಕೂರು : ಸ್ಮಾರ್ಟ್ಸಿಟಿ, ಕೆಎಸ್ಆರ್ಟಿಸಿಯಿಂದ ನಿರ್ಮಿಸುತ್ತಿರುವ ಸುಸಜ್ಜಿತ ಬಸ್ನಿಲ್ದಾಣದ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರು ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುಂತೆ ಗುತ್ತಿಗೆದಾರರು ಹಾಗೂ ಎಂಜನಿಯರ್ಗಳಿಗೆ ಖಡಕ್ ಸೂಚನೆ ನೀಡಿದರು. ನಗರದ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ಕಾಮಗಾರಿ ವಿಳಂಬವಾಗಿದ್ದು ನಿರೀಕ್ಷಿತ ವೇಗದಲ್ಲಿ ಕಾಮಗಾರಿ ನಡೆಯದೇ ಇರುವ ಬಗ್ಗೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಅವರು, ತಳಪಾಯದ ಹಂತದಲ್ಲಿ ನೀರು ಬರುತ್ತಿರುವುದರ ಬಗ್ಗೆ ಪರ್ಯಾಯ ಕಂಡುಕೊಳ್ಳಬೇಕು ಹಾಗೂ ತಡೆಗೋಡೆ ನಿರ್ಮಾಣ ಮಾಡುವಂತೆ ತಾಕೀತು ಮಾಡಿದರು. ಕಾಮಗಾರಿಯ ಪ್ರಗತಿ ನಿರೀಕ್ಷಿತವಾಗಿಲ್ಲ, ಶೇ.33ರಷ್ಟು ಪ್ರಗತಿ ಆಗಿದೆ ಅಷ್ಟೇ, ಕೊರೋನಾ ಕಾರಣದಿಂದ ವಿಳಂಬವಾಗಿದೆ ಆದರೆ ಮೂರನೇ ಅಲೆ ಬರುವ ಲಕ್ಷಣ ಇದ್ದರು ಸಹ ಕಾಮಗಾರಿ ಮುಗಿಯುತ್ತಿಲ್ಲ, ಕೊರೋನಾ…
ಮುಂದೆ ಓದಿ...Day: January 5, 2022
ಸಚಿವ ಅಶ್ವತ್ಥನಾರಾಯಣ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ
ತುಮಕೂರು : ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವರಾದ ಅಶ್ವತ್ಥ್ ನಾರಾಯಣ್ ಅವರ ಉದ್ಧಟತನ ತೋರಿ, ವೇದಿಕೆಯಲ್ಲಿ ಗಂಡಸ್ತನದ ಬಗ್ಗೆ ಮಾತನಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಟೌನ್ಹಾಲ್ ವೃತ್ತದಲ್ಲಿ ಸಂಕ್ರಾಂತಿಯ ಎಳ್ಳು ಬೆಲ್ಲ, ಸಕ್ಕರೆ ಅಚ್ಚು ಹಂಚುವ ಮೂಲಕ ವಿನೂತವಾಗಿ ಬುಧವಾರ ಪ್ರತಿಭಟನೆ ನಡೆಸಿದರು. ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥನಾರಾಯಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದಿಕ್ಕಾರ ಕೂಗಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಮುರಳೀಧರ ಹಾಲಪ್ಪ ಅವರು, ರಾಮನಗರದಲ್ಲಿ ನಡೆದ ಕೆಂಪೇಗೌಡರ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ ಕಾರ್ಯಕ್ರಮಕ್ಕೆ ಸ್ಥಳೀಯರನ್ನು ಮತ್ತು ದಲಿತರನ್ನು ಆಹ್ವಾನ ಮಾಡದೆ ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದು ಸಂಸದರ ತಪ್ಪೇ.? ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷವನ್ನು…
ಮುಂದೆ ಓದಿ...