ಕೊರಟಗೆರೆ : ಮೇಕೆದಾಟು ನೀರಾವರಿ ಯೋಜನೆಗಾಗಿ ಕರ್ನಾಟಕ ಕಾಂಗ್ರೇಸ್ ಪಕ್ಷ ಪಾದಯಾತ್ರೆಗೆ ತಯಾರಿ ನಡೆಸುತ್ತೀದೆ.. ರಾಜ್ಯ ಸರಕಾರ ಪಾದಯಾತ್ರೆಯನ್ನು ಕೋವಿಡ್-19 ಲಾಕ್ಡೌನ್ – ನೈಟ್ಕಪ್ರ್ಯೂ ಹೆಸರಿನಲ್ಲಿ ಹತ್ತೀಕ್ಕುವ ಕೆಲಸ ಮಾಡುತ್ತೀದೆ.. ನೀರಾವರಿ ಯೋಜನೆಯ ಪಾದಯಾತ್ರೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ.. ಯಾರು ಪಾದಯಾತ್ರೆಯನ್ನು ನಿಲ್ಲಿಸಲು ಆಗುವುದಿಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು. ಕೊರಟಗೆರೆ ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಗಂಗಾಕಲ್ಯಾಣ ಯೋಜನೆಯಡಿಯ 2018-19ನೇ ಸಾಲಿನ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ನಿಗಮದಿಂದ 16ಜನ ರೈತರಿಗೆ ಪಂಪು-ಮೋಟಾರ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಮೇಕೆದಾಟು ಯೋಜನೆಯ ರೂಪರೇಷು ಸಿದ್ದಗೊಂಡಿದೆ. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ನಾನು ಉಪಮುಖ್ಯಮಂತ್ರಿ ಮತ್ತು ಡಿ.ಕೆ.ಶಿವಕುಮಾರ್ ನೀರಾವರಿ ಸಚಿವರಾಗಿದ್ದಾಗ ಮತ್ತೇ ಕೇಂದ್ರ ಸರಕಾರಕ್ಕೆ…
ಮುಂದೆ ಓದಿ...Day: January 10, 2022
ತುಮಕೂರು : 100 % ಕೋವಿಡ್ ಲಸಿಕಾಕರಣ ಸಾಧಿಸಿ – ಡಿಸಿ
ತುಮಕೂರು : ಜಿಲ್ಲೆಯಲ್ಲಿ ಕೋವಿಡ್ ಹಾಗೂ ಒಮಿಕ್ರಾನ್ ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿದ್ದು, ಮೊದಲನೇ ಹಾಗೂ ಎರಡನೇ ಡೋಸ್ ಲಸಿಕೆ ನೀಡುವಲ್ಲಿ ವಿಳಂಬ ಮಾಡದೇ ಲಸಿಕಾಕರಣವನ್ನು ಶೇ.100ರಷ್ಟು ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 200ರ ಗಡಿ ದಾಟಿದೆ. ಈ ಸಂದರ್ಭದಲ್ಲಿ ಲಸಿಕೆ ನೀಡುವಲ್ಲಿ ವಿನಾಕಾರಣ ಮುಂದೂಡದೆ ಲಸಿಕೆ ನೀಡಬೇಕು ಎಂದರಲ್ಲದೆ, ಎರಡನೇ ಡೋಸ್ ಲಸಿಕಾಕರಣ ಶೇ.80ರಷ್ಟಾಗಿದ್ದು, ಲಸಿಕೆ ಪಡೆಯಲು ಹಿಂಜರಿಯುವ ನಿಗಧಿತ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಿ ಲಸಿಕೆ ಹಾಕಿಸಿಕೊಳ್ಳಲು ಮನವೊಲಿಸುವ ಮೂಲಕ ಶೀಘ್ರವಾಗಿ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ತಿಳಿಸಿದರು. ಹಾಸ್ಟೆಲ್ಗಳಲ್ಲಿ ಕೋವಿಡ್ ಪಾಸಿಟೀವ್ ಪ್ರಕರಣ ವರದಿಯಾದಲ್ಲಿ ಸೋಂಕಿತ ವಿದ್ಯಾರ್ಥಿಯನ್ನು…
ಮುಂದೆ ಓದಿ...